ಅರಣ್ಯಕಾಂಡ 3:41 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಇಸ್ರಾಯೇಲರಲ್ಲಿರುವ ಚೊಚ್ಚಲಾದವರಿಗೆ ಬದಲಾಗಿ ಲೇವಿಯರನ್ನೂ ಇಸ್ರಾಯೇಲರ ಚೊಚ್ಚಲು ಪಶುಗಳಿಗೆ ಬದಲಾಗಿ ಲೇವಿಯರ ಪಶುಗಳನ್ನೂ ನನಗೋಸ್ಕರ ತೆಗೆದುಕೋ, ನಾನೇ ಯೆಹೋವನು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಆದರೆ ಸರ್ವೇಶ್ವರನೆಂಬ ನನ್ನ ಸೊತ್ತಾಗುವುದಕ್ಕೆ ನೀನು ಇಸ್ರಯೇಲರ ಚೊಚ್ಚಲಾದ ಪಶುಪ್ರಾಣಿಗಳಿಗೆ ಬದಲಾಗಿ ಲೇವಿಯರ ಪಶುಪ್ರಾಣಿಗಳನ್ನು ತೆಗೆದುಕೋ,” ಎಂದು ಆಜ್ಞಾಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ಯೆಹೋವನೆಂಬ ನನ್ನ ಸೊತ್ತಾಗುವದಕ್ಕೆ ನೀನು ಇಸ್ರಾಯೇಲ್ಯರಲ್ಲಿರುವ ಚೊಚ್ಚಲಾದವರಿಗೆ ಬದಲಾಗಿ ಲೇವಿಯರನ್ನೂ ಇಸ್ರಾಯೇಲ್ಯರ ಚೊಚ್ಚಲಾದ ಪಶುಗಳಿಗೆ ಬದಲಾಗಿ ಲೇವಿಯರ ಪಶುಗಳನ್ನೂ ತೆಗೆದುಕೊಳ್ಳಬೇಕು ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 ನಾನು ಈಗ ಇಸ್ರೇಲಿನ ಚೊಚ್ಚಲು ಗಂಡಸರನ್ನು ತೆಗೆದುಕೊಳ್ಳುವುದಿಲ್ಲ. ಯೆಹೋವನಾದ ನಾನು ಲೇವಿಯರನ್ನು ತೆಗೆದುಕೊಳ್ಳುವೆನು. ಮಾತ್ರವಲ್ಲದೆ ಇಸ್ರೇಲಿನಲ್ಲಿ ಇತರ ಜನರ ಚೊಚ್ಚಲು ಪ್ರಾಣಿಗಳ ಬದಲು, ಲೇವಿಯರ ಎಲ್ಲಾ ಚೊಚ್ಚಲು ಪ್ರಾಣಿಗಳನ್ನು ತೆಗೆದುಕೊಳ್ಳುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ಇಸ್ರಾಯೇಲರಲ್ಲಿರುವ ಜೇಷ್ಠರಾದವರೆಲ್ಲರಿಗೆ ಬದಲಾಗಿ ಲೇವಿಯರನ್ನೂ ಇಸ್ರಾಯೇಲರ ಪಶುಗಳಲ್ಲಿರುವ ಸಕಲ ಚೊಚ್ಚಲಾದವುಗಳಿಗೆ ಬದಲಾಗಿ ಲೇವಿಯರ ಪಶುಗಳನ್ನೂ ನನಗೋಸ್ಕರ ತೆಗೆದುಕೋ, ‘ನಾನೇ ಯೆಹೋವ ದೇವರು,’ ” ಎಂದರು. ಅಧ್ಯಾಯವನ್ನು ನೋಡಿ |