Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 3:51 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ಯೆಹೋವನ ಆಜ್ಞೆಯಂತೆ ಮೋಶೆ ಆ ಬಿಡುಗಡೆಯ ಹಣವನ್ನು ಆರೋನನಿಗೂ ಮತ್ತು ಅವನ ಮಕ್ಕಳಿಗೂ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

51 ಸರ್ವೇಶ್ವರನ ಆಜ್ಞೆಯಂತೆ ವಿಮೋಚನೆಯ ಹಣವನ್ನು ಆರೋನನಿಗೂ ಅವನ ಮಕ್ಕಳಿಗೂ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

51 ಯೆಹೋವನ ಆಜ್ಞೆಯಂತೆ ಮೋಶೆ ಆ ಬಿಡುಗಡೆಯ ಹಣವನ್ನು ಆರೋನನಿಗೂ ಅವನ ಮಕ್ಕಳಿಗೂ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

51 ಮೋಶೆಯು ಯೆಹೋವನಿಗೆ ವಿಧೇಯನಾಗಿ ಆತನ ಆಜ್ಞೆಯಂತೆ ಬೆಳ್ಳಿಯನ್ನು ಆರೋನನಿಗೂ ಅವನ ಪುತ್ರರಿಗೂ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

51 ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ವಿಮೋಚನೆಯ ಹಣವನ್ನು ಆರೋನನಿಗೂ, ಅವನ ಪುತ್ರರಿಗೂ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 3:51
11 ತಿಳಿವುಗಳ ಹೋಲಿಕೆ  

ಅವರೊಳಗೆ ಹೆಚ್ಚಾಗಿರುವವರ ಬಿಡುಗಡೆಗೋಸ್ಕರ ಅವರು ಕೊಡುವ ಹಣವನ್ನು ನೀನು ಆರೋನನಿಗೂ ಮತ್ತು ಅವನ ಮಕ್ಕಳಿಗೂ ಕೊಡಬೇಕು” ಎಂದನು.


ನಿಮ್ಮ ಮೇಲ್ವಿಚಾರಣೆಯಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲವಂತದಿಂದಲ್ಲ ದೇವರ ಚಿತ್ತಾನುಸಾರ ಇಷ್ಟಪೂರ್ವಕವಾಗಿ, ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧ ಮನಸ್ಸಿನಿಂದಲೇ ಮೇಲ್ವಿಚಾರಣೆ ಮಾಡಿರಿ.


ಈ ಅಧಿಕಾರ ಇತರರಿಗೆ ನಿಮ್ಮ ಮೇಲೆ ಇದ್ದರೆ ನಮಗೆ ಎಷ್ಟೋ ಹೆಚ್ಚಾಗಿ ಇರಬೇಕಲ್ಲಾ? ಆದರೂ ನಾವು ಆ ಅಧಿಕಾರವನ್ನು ಚಲಾಯಿಸಲಿಲ್ಲ, ಕ್ರಿಸ್ತನ ಸುವಾರ್ತೆಗೆ ಅಡ್ಡಿಮಾಡಬಾರದೆಂದು ಎಲ್ಲವನ್ನು ಸಹಿಸಿಕೊಂಡೆವು.


ನಾನು ಯಾರ ಬೆಳ್ಳಿಬಂಗಾರವನ್ನಾಗಲಿ, ಉಡಿಗೆತೊಡಿಗೆಯನ್ನಾಗಲಿ ಬಯಸಲಿಲ್ಲ.


“ನನ್ನ ಸೇವಕನಾದ ಮೋಶೆಯ ಧರ್ಮಶಾಸ್ತ್ರವನ್ನು ಅಂದರೆ, ನಾನು ಹೋರೇಬ್ ಬೆಟ್ಟದಲ್ಲಿ ಎಲ್ಲಾ ಇಸ್ರಾಯೇಲರಿಗಾಗಿ ಮೋಶೆಗೆ ನೇಮಿಸಿದ ನಿಯಮವಿಧಿಗಳನ್ನು ಜ್ಞಾಪಕಮಾಡಿಕೊಳ್ಳಿರಿ.


ಅದಕ್ಕೆ ಮೋಶೆಯು ಬಹಳ ಕೋಪಗೊಂಡು ಯೆಹೋವನಿಗೆ, “ನೀನು ಅವರ ನೈವೇದ್ಯವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳಬೇಡ; ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಂಡವನಲ್ಲ; ಅವರಲ್ಲಿ ಒಬ್ಬನಿಗಾದರೂ ಹಾನಿ ಮಾಡಿದವನಲ್ಲ” ಎಂದು ಮನವಿಮಾಡಿದನು.


ಇಸ್ರಾಯೇಲರಲ್ಲಿ ಚೊಚ್ಚಲಾದವರಿಂದ ದೇವಸ್ಥಾನದ ಸೇವೆಗೆ ನೇಮಕವಾದ ರೂಪಾಯಿಯಲ್ಲಿ 1,365 ಶೆಕೆಲ್ ಗಳನ್ನು ತೆಗೆದುಕೊಂಡನು.


ಯೆಹೋವನು ಮೋಶೆ ಮತ್ತು ಆರೋನರಿಗೆ ಆಜ್ಞಾಪಿಸಿದ್ದೇನೆಂದರೆ,


ಯೆಹೋವನು ಮೋಶೆ ಮತ್ತು ಆರೋನರಿಗೆ ಆಜ್ಞಾಪಿಸಿದ ಪ್ರಕಾರ ಇಸ್ರಾಯೇಲರೆಲ್ಲರೂ ಮಾಡಿದರು.


ಹೀಗೆ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಮೋಶೆ ಸೀನಾಯಿ ಅರಣ್ಯದಲ್ಲಿ ಅವರನ್ನು ಲೆಕ್ಕಮಾಡಿ ಮೊಟ್ಟಮೊದಲು ಜನಗಣತಿ ಪ್ರಾರಂಭಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು