Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 30:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವಳ ತಂದೆಯು ಆ ಸಂಗತಿಯನ್ನು ತಿಳಿದು ಸುಮ್ಮನಿದ್ದರೆ ಅವಳು ಆ ಹರಕೆಯನ್ನು ನೆರವೇರಿಸಲೇಬೇಕು. ಯಾವುದನ್ನು ಮುಟ್ಟದೆ ಇರುವೆನೆಂದು ಹೇಳಿದಳೋ ಅದನ್ನು ಮುಟ್ಟಲೇ ಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವಳ ತಂದೆ ಆ ಸಂಗತಿಯನ್ನು ತಿಳಿದು ಸುಮ್ಮನಿದ್ದರೆ ಅವಳು ಆ ಹರಕೆಯನ್ನು ನೆರವೇರಿಸಲೇಬೇಕು; ಯಾವುದನ್ನು ಮುಟ್ಟುವುದಿಲ್ಲವೆಂದು ಹೇಳಿದ್ದಳೋ ಅದನ್ನು ಮುಟ್ಟಲೇಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವಳ ತಂದೆಯು ಆ ಸಂಗತಿಯನ್ನು ತಿಳಿದು ಸುಮ್ಮನಿದ್ದರೆ ಅವಳು ಆ ಹರಕೆಯನ್ನು ನೆರವೇರಿಸಲೇಬೇಕು; ಯಾವದನ್ನು ಮುಟ್ಟದೆ ಇರುವೆನೆಂದು ಹೇಳಿದಳೋ ಅದನ್ನು ಮುಟ್ಟಲೇಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅವಳ ತಂದೆಯು ಅವಳ ಹರಕೆಯನ್ನಾಗಲಿ ಆಣೆಯನ್ನಾಗಲಿ ಕೇಳಿಯೂ ಅದರ ಬಗ್ಗೆ ಅವಳಿಗೆ ಏನೂ ಹೇಳದಿದ್ದರೆ, ಆಕೆಯು ಅಂಥಾ ಹರಕೆಯನ್ನೂ ಆಣೆಯನ್ನೂ ನೆರವೇರಿಸಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವಳ ತಂದೆಯು ಆ ವಿಷಯವನ್ನು ತಿಳಿದು ಮೌನವಾಗಿದ್ದರೆ, ಅವಳು ಆ ಹರಕೆ ಮತ್ತು ಪ್ರಮಾಣಗಳನ್ನು ನೆರವೇರಿಸಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 30:4
2 ತಿಳಿವುಗಳ ಹೋಲಿಕೆ  

“ಸ್ತ್ರೀಯು ಕನ್ಯಾವಸ್ಥೆಯಲ್ಲಿ ತಂದೆಯ ಮನೆಯಲ್ಲಿದ್ದು ಯೆಹೋವನಿಗೆ ಹರಕೆಯನ್ನು ಮಾಡಿದಾಗ ಇಲ್ಲವೆ ಯಾವುದಾದರೂ ಒಂದನ್ನು ಮುಟ್ಟದೆ ಇರುವೆನೆಂದು ಪ್ರತಿಜ್ಞೆಯನ್ನು ಮಾಡಿಕೊಂಡಾಗ


ಆದರೆ ತಂದೆ ಆ ಸಂಗತಿಯನ್ನು ತಿಳಿದಾಗ ಹಾಗೆ ಮಾಡಬಾರದೆಂದು ಅಪ್ಪಣೆಕೊಟ್ಟರೆ ಅವಳು ಮಾಡಿದ ಹರಕೆಗಳೂ, ಪ್ರತಿಜ್ಞೆಗಳೂ ವ್ಯರ್ಥವಾಗುವವು. ತಂದೆ ಕ್ಷಮಿಸಿ ಬೇಡವೆಂದು ಹೇಳಿದ್ದರಿಂದ ಯೆಹೋವನು ಅವಳನ್ನು ದೋಷಿಯೆಂದು ಎಣಿಸುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು