Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 30:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಗಂಡನು ಆ ಪ್ರಮಾಣದ ಸಂಗತಿಯನ್ನು ತಿಳಿದು ಸುಮ್ಮನಿದ್ದರೆ ಆ ಹರಕೆಗಳೂ, ಪ್ರತಿಜ್ಞೆಗಳೂ ನಡೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗ ಗಂಡಸು ಆ ಪ್ರಮಾಣದ ಸಂಗತಿಯನ್ನು ತಿಳಿದು ಸುಮ್ಮನಿದ್ದರೆ ಆ ಹರಕೆಗಳೂ ಪ್ರತಿಜ್ಞೆಗಳೂ ನಡೆಯಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಗಂಡನು ಆ ಪ್ರಮಾಣದ ಸಂಗತಿಯನ್ನು ತಿಳಿದು ಸುಮ್ಮನಿದ್ದರೆ ಆ ಹರಕೆಗಳೂ ಪ್ರತಿಜ್ಞೆಗಳೂ ನಡೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಗಂಡನು ಅದರ ಬಗ್ಗೆ ತಿಳಿದ ದಿನದಂದು ಆಕೆಗೆ ಅದರ ಬಗ್ಗೆ ಏನೂ ಹೇಳದಿದ್ದರೆ, ಆಕೆ ತಾನು ಮಾಡಿದ ಹರಕೆಯನ್ನಾಗಲಿ ಆಣೆಯನ್ನಾಗಲಿ ನೆರವೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವಳ ಗಂಡನು ಆ ವಿಷಯವನ್ನು ತಿಳಿದು ಸುಮ್ಮನಿದ್ದ ಪಕ್ಷದಲ್ಲಿ ಅವಳ ಹರಕೆಗಳೂ ಪ್ರತಿಜ್ಞೆಗಳೂ ನೆರವೇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 30:7
7 ತಿಳಿವುಗಳ ಹೋಲಿಕೆ  

“ಅವಳು ಮದುವೆಯಾದ ಪಕ್ಷದಲ್ಲಿ ಮಾಡಿದ ಹರಕೆ ಇಲ್ಲವೆ ಯೋಚಿಸದೆ ಮಾಡಿದ ಪ್ರತಿಜ್ಞೆ ನಡೆಯುವಷ್ಟರೊಳಗೆ,


ಆದರೆ ಗಂಡನು ಕೇಳಿದಾಗಲೇ ಕ್ಷಮಿಸಿ ಬೇಡವೆಂದು ಅಪ್ಪಣೆಕೊಟ್ಟರೆ ಆ ಹರಕೆಯು ಇಲ್ಲವೆ ಆ ಪ್ರತಿಜ್ಞೆಯು ನಿರರ್ಥಕವಾಗುವವು. ಯೆಹೋವನು ಅವಳನ್ನು ದೋಷಿಯೆಂದು ಎಣಿಸುವುದಿಲ್ಲ.


ಆಕೆಯ ಗಂಡನಾದ ಎಲ್ಕಾನನು ಆಕೆಗೆ “ನಿನಗೆ ಸರಿತೋರುವ ಹಾಗೆ ಆಗಲಿ; ಮಗನು ಮೊಲೆಬಿಡುವವರೆಗೆ ಇರು. ಯೆಹೋವನು ತನ್ನ ವಾಕ್ಯವನ್ನು ದೃಢಪಡಿಸಲಿ” ಅಂದನು. ಮಗನು ಮೊಲೆಬಿಡುವ ತನಕ ಹನ್ನಳು ಮನೆಯಲ್ಲೇ ಇದ್ದು ಅವನನ್ನು ಸಾಕಿದಳು.


ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುತ್ತಿದ್ದಾಗ ನಾವು ಆಕೆಯ ಪೂಜೆಗಾಗಿ ಆಕೆಯ ಆಕಾರವಾದ ಹೋಳಿಗೆಗಳನ್ನು ಮಾಡಿ ಪಾನದ್ರವ್ಯವನ್ನು ಅರ್ಪಿಸಿದ್ದು ನಮ್ಮ ಗಂಡಂದಿರಿಗೆ ಒಪ್ಪಿಗೆಯಾಗಿರಲಿಲ್ಲವೋ?” ಎಂದರು.


ಆ ನಂತರ ಆ ಸ್ತ್ರೀಗೆ, “ನಾನು ನಿನ್ನ ಗರ್ಭವೇದನೆಯನ್ನು ಅಧಿಕವಾಗಿ ಹೆಚ್ಚಿಸುವೆನು ನೀನು ನೋವಿನಿಂದ ಮಕ್ಕಳನ್ನು ಹಡೆಯುವಿ. ಗಂಡನ ಮೇಲೆ ನಿನಗೆ ಬಯಕೆ ಇರುವುದು, ಆದರೆ ಅವನು ನಿನ್ನ ಮೇಲೆ ಆಳ್ವಿಕೆ ಮಾಡುವನು” ಎಂದು ಹೇಳಿದನು.


“ಸೇನಾಧೀಶ್ವರನಾದ ಯೆಹೋವನೇ, ನಿನ್ನ ದಾಸಿಯ ದುಃಖವನ್ನು ಪರಾಂಬರಿಸು; ನಿನ್ನ ದಾಸಿಯನ್ನು ಮರೆಯದೆ ನನ್ನನ್ನು ನೆನಪಿಸಿಕೊಂಡು ನನಗೊಬ್ಬ ಮಗನನ್ನು ಕೊಡಬೇಕು; ಅವನು ಜೀವದಿಂದಿರುವ ತನಕ ನಿನ್ನವನಾಗಿಯೇ ಇರುವ ಹಾಗೆ ಅವನನ್ನು ನಿನಗೆ ಪ್ರತಿಷ್ಠಿಸುವೆನು; ಅವನ ತಲೆಯ ಮೇಲೆ ಕ್ಷೌರ ಕತ್ತಿಯನ್ನು ಮುಟ್ಟಗೊಡುವುದಿಲ್ಲ” ಎಂದು ಪ್ರಾರ್ಥಿಸಿ ಹರಕೆಮಾಡಿದಳು.


ಇದಕ್ಕೆ ದೃಷ್ಟಾಂತ, ಗಂಡನು ಜೀವದಿಂದಿರುವ ತನಕ ಹೆಂಡತಿಯು ನ್ಯಾಯದ ಪ್ರಕಾರ ಅವನಿಗೆ ಬದ್ಧಳಾಗಿರುವಳು. ಗಂಡನು ಸತ್ತರೆ ಮದುವೆಯ ನಿಯಮದಿಂದ ಅವಳು ಬಿಡುಗಡೆಯಾಗುತ್ತಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು