Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 31:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವರು ಇದ್ದ ಎಲ್ಲಾ ಊರುಗಳನ್ನೂ, ಪಾಳೆಯಗಳನ್ನೂ ಸುಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅವರಿದ್ದ ಊರುಕೇರಿಗಳನ್ನು ಸುಟ್ಟುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವರು ಇದ್ದ ಎಲ್ಲಾ ಊರುಗಳನ್ನೂ ಪಾಳೆಯಗಳನ್ನೂ ಸುಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅವರು ನೆಲೆಸಿದ್ದ ಊರುಗಳನ್ನೂ ಪಾಳೆಯಗಳನ್ನೂ ಸುಟ್ಟುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವರು ವಾಸಮಾಡಿದ ಸಮಸ್ತ ಪಟ್ಟಣಗಳನ್ನೂ, ಅವರ ಸಮಸ್ತ ಕೋಟೆಗಳನ್ನೂ ಬೆಂಕಿಯಿಂದ ಸುಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 31:10
8 ತಿಳಿವುಗಳ ಹೋಲಿಕೆ  

ಆದ್ದರಿಂದ ಉಪದ್ರವಗಳು ಮರಣ, ಗೋಳಾಟ ಮತ್ತು ಕ್ಷಾಮಗಳು ಒಂದೇ ದಿನದಲ್ಲಿ ಅವಳಿಗೆ ಸಂಭವಿಸುವವು. ಅವಳಿಗೆ ತೀರ್ಪುಕೊಡುವ ಕರ್ತನಾದ ದೇವರು ಶಕ್ತನಾಗಿರುವುದರಿಂದ ಅವಳು ಬೆಂಕಿಯಿಂದ ನಾಶವಾಗುವಳು.


ನಿಮ್ಮ ದೇಶವು ಹಾಳಾಗಿದೆ. ನಿಮ್ಮ ಪಟ್ಟಣಗಳು ಸುಟ್ಟುಹೋಗಿವೆ. ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿಬಿಡುತ್ತಿದ್ದಾರೆ. ಅದು ಅನ್ಯಜನರಿಂದ ಹಾಳಾಯಿತು.


ಐಗುಪ್ತದ ಅರಸನಾದ ಫರೋಹನು ಗೆಜೆರ್ ಪಟ್ಟಣವನ್ನು ಹಿಡಿದು ಅದಕ್ಕೆ ಬೆಂಕಿಹೊತ್ತಿಸಿ, ಅದರಲ್ಲಿದ್ದ ಕಾನಾನ್ಯರನ್ನು ಹತಿಸಿ, ಅದನ್ನು ವಶಮಾಡಿಕೊಂಡು ಸೊಲೊಮೋನನ ಹೆಂಡತಿಯಾದ ತನ್ನ ಮಗಳಿಗೆ ಮದುವೆಯ ಉಡುಗೊರೆಯಾಗಿ ಕೊಟ್ಟಿದ್ದನು.


ದಾವೀದನೂ ಅವನ ಜನರೂ ಮೂರನೆಯ ದಿನ ಚಿಕ್ಲಗ್ ಊರನ್ನು ಮುಟ್ಟಿದರು. ಅಷ್ಟರೊಳಗೆ ಅಮಾಲೇಕ್ಯರು ದಂಡೆತ್ತಿ ದಕ್ಷಿಣ ಪ್ರಾಂತ್ಯಕ್ಕೂ ಚಿಕ್ಲಗ್ ಊರಿಗೂ ಬಂದು ಚಿಕ್ಲಗ್ ಊರನ್ನು ಸುಟ್ಟು ಹಾಳುಮಾಡಿ,


ಇಸ್ರಾಯೇಲ್ಯರು ಪಟ್ಟಣವನ್ನೂ ಅದರಲ್ಲಿರುವುದೆಲ್ಲವನ್ನೂ ಬೆಂಕಿಯಿಂದ ಸುಟ್ಟುಬಿಟ್ಟರು. ಆದರೆ ಬೆಳ್ಳಿಬಂಗಾರವನ್ನೂ, ತಾಮ್ರ ಕಬ್ಬಿಣಗಳ ಪಾತ್ರೆಗಳನ್ನೂ, ಯೆಹೋವನ ಆಲಯದ ಭಂಡಾರಕ್ಕೆ ಒಪ್ಪಿಸಿದರು.


ವಂಶ ಪಾರಂಪರೆಯಾಗಿ ಊರುಗಳಲ್ಲಿಯೂ, ಪಾಳೆಯಗಳಲ್ಲಿಯೂ ವಾಸಿಸುವ ಇಷ್ಮಾಯೇಲನ ಸಂತಾನದವರೂ ಇವರೇ ಆಗಿದ್ದಾರೆ. ಇವರ ಕುಲಗಳ ಸಂಖ್ಯೆಗಳಿಗನುಸಾರವಾಗಿ ಹನ್ನೆರಡು ಮಂದಿ ಅರಸರಿರುತ್ತಾರೆ.


ಇಸ್ರಾಯೇಲರು ಮಿದ್ಯಾನ್ಯರ ಎಲ್ಲಾ ಹೆಂಗಸರನ್ನೂ, ಮಕ್ಕಳನ್ನೂ ಸೆರೆಹಿಡಿದು ಎಲ್ಲಾ ದನಕುರಿಗಳನ್ನೂ, ಆಸ್ತಿಯನ್ನೂ ಸೂರೆಮಾಡಿದರು.


ಒಂದನ್ನೂ ಬಿಡದೆ ಮನುಷ್ಯರನ್ನೂ, ಪಶುಗಳನ್ನೂ ಸೆರೆಹಿಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು