Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 31:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನೀವಾದರೋ ಏಳು ದಿನದವರೆಗೂ ಪಾಳೆಯದ ಹೊರಗೆ ಇರಬೇಕು. ಮನುಷ್ಯ ಪ್ರಾಣತೆಗೆದವರೂ, ಶವಸೋಂಕಿದವರೂ, ನಿಮ್ಮವರಾದರೂ, ಸೆರೆಯವರಾದರೂ ಮೂರನೆಯ ಮತ್ತು ಏಳನೆಯ ದಿನಗಳಲ್ಲಿ ದೋಷಪರಿಹಾರ ಮಾಡಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನಿಮ್ಮಲ್ಲಿ ಮನುಷ್ಯಪ್ರಾಣ ತೆಗೆದವರು ಹಾಗು ಶವ ಸೋಂಕಿದವರು ಏಳು ದಿನದವರೆಗೆ ಪಾಳೆಯದ ಹೊರಗಡೆ ಇರಬೇಕು. ಮೂರನೆಯ ಮತ್ತು ಏಳನೆಯ ದಿನ ನಿಮ್ಮನ್ನೂ ಸೆರೆಯಾಳುಗಳನ್ನೂ ಶುದ್ಧೀಕರಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನೀವಾದರೋ ಏಳುದಿನದವರೆಗೂ ಪಾಳೆಯದ ಹೊರಗೆ ಇರಬೇಕು. ಮನುಷ್ಯ ಪ್ರಾಣತೆಗೆದವರೂ ಶವಸೋಂಕಿದವರೂ ನಿಮ್ಮವರಾದರೂ ಸೆರೆಯವರಾದರೂ ಮೂರನೆಯ ಮತ್ತು ಏಳನೆಯ ದಿನಗಳಲ್ಲಿ ದೋಷಪರಿಹಾರ ಮಾಡಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನೀವಾದರೋ ಏಳು ದಿನಗಳವರೆಗೂ ಪಾಳೆಯದ ಹೊರಗೆ ಇರಬೇಕು. ಮನುಷ್ಯರನ್ನು ಕೊಂದವರೂ ಶವಸೋಂಕಿದವರೂ ನಿಮ್ಮವರಾಗಿರಲಿ ಸೆರೆಯವರಾಗಿರಲಿ ಮೂರನೆಯ ಮತ್ತು ಏಳನೆಯ ದಿನದಲ್ಲಿ ನಿಮ್ಮನ್ನು ಶುದ್ಧೀಕರಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ಇದಲ್ಲದೆ ನಿಮ್ಮಲ್ಲಿ ಪ್ರಾಣ ತೆಗೆದವರು ಮತ್ತು ಶವವನ್ನು ಮುಟ್ಟಿದವರು ಏಳು ದಿವಸ ಪಾಳೆಯದ ಹೊರಗೆ ಇರಬೇಕು. ನೀವೂ, ನಿಮ್ಮ ಸೆರೆಯವರೂ ಮೂರನೆಯ ಹಾಗೂ ಏಳನೆಯ ದಿವಸಗಳಲ್ಲಿ ನಿಮ್ಮನ್ನು ಶುದ್ಧ ಮಾಡಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 31:19
5 ತಿಳಿವುಗಳ ಹೋಲಿಕೆ  

“ಕುಷ್ಠರೋಗಿಗಳನ್ನು, ಸಾಂಕ್ರಾಮಿಕವಾದ ಚರ್ಮರೋಗ ಇರುವವರನ್ನು, ಮೇಹಸ್ರಾವವುಳ್ಳವರನ್ನು ಹಾಗು ಹೆಣದ ಸೋಂಕಿನಿಂದ ಅಶುದ್ಧರಾದವರನ್ನು ಪಾಳೆಯದಿಂದ ಹೊರಡಿಸಬೇಕೆಂದು ಇಸ್ರಾಯೇಲರಿಗೆ ಆಜ್ಞಾಪಿಸು.


ಆದರೆ ಯೆಹೋವನು ನನಗೆ, ‘ನೀನು ಬಹಳ ರಕ್ತವನ್ನು ಸುರಿಸಿದವನೂ, ಮಹಾ ಯುದ್ಧಗಳನ್ನು ನಡಿಸಿದವನೂ ಆಗಿರುತ್ತೀ. ನೀನು ನನ್ನೆದುರಿನಲ್ಲಿ ಬಹಳ ರಕ್ತವನ್ನು ಸುರಿಸಿದ್ದರಿಂದ ನನ್ನ ಹೆಸರಿಗಾಗಿ ಆಲಯವನ್ನು ಕಟ್ಟಬಾರದು.


ಪುರುಷ ಸಂಗಮಾಡದಿರುವ ಕನ್ಯೆಯರನ್ನು ನಿಮಗೋಸ್ಕರ ಉಳಿಸಿಕೊಳ್ಳಬೇಕು.


ಅದಲ್ಲದೆ ಎಲ್ಲಾ ಬಟ್ಟೆಗಳನ್ನೂ, ತೊಗಲಿನ ಸಾಮಾನನ್ನೂ, ಮೇಕೆ ಕೂದಲಿನ ವಸ್ತ್ರಗಳನ್ನು ಮರದ ವಸ್ತುಗಳನ್ನು ಶುದ್ಧ ಮಾಡಿಕೊಳ್ಳಬೇಕು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು