Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 31:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಖಡ್ಗದಿಂದ ಹತರಾದವರಲ್ಲಿ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬ ಮಿದ್ಯಾನ್ಯರ ಐದು ಮಂದಿ ರಾಜರು ಇದ್ದರು. ಅದಲ್ಲದೆ ಬೆಯೋರನ ಮಗನಾದ ಬಿಳಾಮನನ್ನು ಕೊಂದುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಹತರಾದವರಲ್ಲಿ ಎವೀ, ರೆಕೆಮ್, ಚೂರ್, ಹೂರ್ ಹಾಗು ರೆಬಾ ಎಂಬ ಮಿದ್ಯಾನರ ಐದು ಮಂದಿ ರಾಜರು ಇದ್ದರು. ಅದೂ ಅಲ್ಲದೆ ಬೆಯೋರನ ಮಗ ಬಿಳಾಮನನ್ನು ಕತ್ತಿಯಿಂದ ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಹತವಾದವರಲ್ಲಿ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬ ವಿುದ್ಯಾನ್ಯರ ಐದು ಮಂದಿ ರಾಜರು ಇದ್ದರು. ಅದಲ್ಲದೆ ಬೆಯೋರನ ಮಗನಾದ ಬಿಳಾಮನನ್ನು ಕಡಿದುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅವರು ಕೊಂದವರಲ್ಲಿ ಎವೀ, ರೆಕೆಮ್, ಜೂರ್, ಹೂರ್ ಮತ್ತು ರೆಬಾ ಎಂಬ ಮಿದ್ಯಾನ್ಯರ ಐದು ಮಂದಿ ರಾಜರು ಸೇರಿದ್ದರು. ಅವರು ಕತ್ತಿಯಿಂದ ಬೆಯೋರನ ಮಗನಾದ ಬಿಳಾಮನನ್ನೂ ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಗಂಡಸರೆಲ್ಲರನ್ನು ಕೊಂದುಹಾಕಿದರು. ಈ ಹತರಾದವರಲ್ಲದೆ ಮಿದ್ಯಾನಿನ ಅರಸರನ್ನು ಕೊಂದುಹಾಕಿದರು. ಅವರು ಮಿದ್ಯಾನಿನ ಐದು ಮಂದಿ ಅರಸರಾಗಿರುವ ಎವೀ, ರೆಕೆಮ್, ಚೂರ್, ಹೂರ್, ರೆಬಾ, ಬೆಯೋರನ ಮಗ ಬಿಳಾಮನನ್ನೂ ಖಡ್ಗದಿಂದ ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 31:8
21 ತಿಳಿವುಗಳ ಹೋಲಿಕೆ  

ಹತವಾದ ಆ ಮಿದ್ಯಾನ್ ಸ್ತ್ರೀಯ ಹೆಸರು ಕೊಜ್ಬೀ, ಅವಳು ಮಿದ್ಯಾನ್ಯರಲ್ಲಿ ಗೋತ್ರ ಪ್ರಧಾನನಾದ ಚೂರ್ ಎಂಬುವನ ಮಗಳು.


ಕೆಲವು ವಿಷಯಗಳಲ್ಲಿ ನಿನ್ನ ವಿರುದ್ಧ ನನಗೆ ಅಪಾದನೆಗಳಿವೆ. ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವುದರಲ್ಲಿಯೂ ಜಾರತ್ವದಲ್ಲಿಯೂ ಇಸ್ರಾಯೇಲ್ಯರು ಮುಗ್ಗರಿಸಿ ಬೀಳಬೇಕೆಂದು ಬಿಳಾಮನು ಬಾಲಾಕನಿಗೆ ಕಲಿಸಿದ ದುರ್ಬೋಧನೆಯನ್ನು ಅವಲಂಬಿಸಿರುವವರು ನಿನ್ನಲ್ಲಿ ಇದ್ದಾರೆ.


ಅವರ ಗತಿಯನ್ನು ಏನೆಂದು ಹೇಳಲಿ? ಇವರು ಕಾಯಿನನ ಮಾರ್ಗವನ್ನು ಹಿಡಿದವರೂ, ದ್ರವ್ಯಸಂಪಾದನೆಗೋಸ್ಕರ ಬಿಳಾಮನ ಭ್ರಾಂತಿಯಲ್ಲಿ ಪೂರ್ಣವಾಗಿ ಮುಳುಗಿದವರೂ, ಕೋರಹನಂತೆ ಎದುರು ಮಾತನಾಡಿ ನಾಶವಾಗಿ ಹೋಗುವವರು ಆಗಿದ್ದಾರೆ.


ಆಗ ಆ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಪರವಾಗಿ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರೊಂದಿಗೆ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಗೆ ಹಾಕಲಾಯಿತು.


ಇವರು ಸನ್ಮಾರ್ಗವನ್ನು ಬಿಟ್ಟವರು. ಹಾದಿ ತಪ್ಪಿದವರು ಮತ್ತು ಬೇಯೋರಿನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದವರಾಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಭಾವನೆಯನ್ನು ಪ್ರೀತಿಸಿದನು.


ದುಷ್ಟರು ಅಹಂಕಾರದಿಂದ ದೀನರನ್ನು ಬಹಳವಾಗಿ ಹಿಂಸಿಸುತ್ತಾರೆ; ಅವರು ಕಲ್ಪಿಸಿದ ಕುಯುಕ್ತಿಯಲ್ಲಿ ತಾವೇ ಸಿಕ್ಕಿ ಬೀಳಲಿ.


ಯೆಹೋವನು ನ್ಯಾಯತೀರಿಸುವವನಾಗಿ ತನ್ನನ್ನು ಪ್ರಕಟಿಸಿಕೊಂಡಿದ್ದಾನೆ; ದುಷ್ಟರು ತಾವೇ ಕಲ್ಪಿಸಿದ ಕುಯುಕ್ತಿಯಲ್ಲಿ ಸಿಕ್ಕಿಕೊಂಡಿದ್ದಾರಲ್ಲಾ. ಹಿಗ್ಗಾಯೋನ್ ಸೆಲಾ


ಅವರು ಪೆಗೋರದ ವಿಷಯದಲ್ಲಿಯೂ, ಮಿದ್ಯಾನ್ಯರ ಅಧಿಪತಿಯ ಮಗಳಾದ ಕೊಜ್ಬೀ ಎಂಬ ಸ್ತ್ರೀಯ ವಿಷಯದಲ್ಲಿಯೂ ನಿಮ್ಮನ್ನು ಮೋಸಗೊಳಿಸಿ ಹಿಂಸಿಸಿದ್ದಾರೆ. ಆ ಸ್ತ್ರೀಯು ಪೆಗೋರದ ಘಟನೆಗಳ ನಿಮಿತ್ತ ಘೋರ ವ್ಯಾಧಿ ಉಂಟಾದಾಗ ಹತಳಾದವಳು.”


ತರುವಾಯ ಬಿಳಾಮನು ಸ್ವದೇಶಕ್ಕೆ ತಿರುಗಿ ಹೋದನು, ಬಾಲಾಕನೂ ಹೊರಟುಹೋದನು.


ಬಿಳಾಮನು ದೇವರಿಗೆ, “ಮೋವಾಬ್ಯರ ಅರಸನೂ, ಚಿಪ್ಪೋರನ ಮಗನಾದ ಬಾಲಾಕನು ನನ್ನ ಬಳಿಗೆ ದೂತರನ್ನು ಕಳುಹಿಸಿ,


ಮೋವಾಬ್ಯರ ಅರಸನು ಮಿದ್ಯಾನ್ಯರ ಹಿರಿಯರಿಗೆ, “ದನಗಳು ಅಡವಿಯ ಹುಲ್ಲನ್ನೆಲ್ಲಾ ಮೇಯುವಂತೆ ಈ ಸಮೂಹವು ನಮ್ಮನ್ನೂ, ನಮ್ಮ ಸುತ್ತಲಿರುವ ಎಲ್ಲರನ್ನೂ ನಾಶಮಾಡುವ ಹಾಗಿದೆ” ಎಂದು ಹೇಳಿದರು.


ಈಗ ನಾನು ನನ್ನ ಜನರ ಬಳಿಗೆ ಹೋಗುತ್ತೇನೆ. ಆದರೆ ಕಡೆಗೆ ಆ ಜನರು ನಿನ್ನ ಜನರಿಗೆ ಮುಂದಿನ ದಿನಗಳಲ್ಲಿ ಏನು ಮಾಡುವರೋ ಅದನ್ನು ನಿನಗೆ ತಿಳಿಸುತ್ತೇನೆ” ಎಂದನು.


ಇಸ್ರಾಯೇಲರು ಮಿದ್ಯಾನ್ಯರ ಎಲ್ಲಾ ಹೆಂಗಸರನ್ನೂ, ಮಕ್ಕಳನ್ನೂ ಸೆರೆಹಿಡಿದು ಎಲ್ಲಾ ದನಕುರಿಗಳನ್ನೂ, ಆಸ್ತಿಯನ್ನೂ ಸೂರೆಮಾಡಿದರು.


ಪೆಗೋರದ ಬಾಳನ ಸಂಗತಿಯಲ್ಲಿ ಬಿಳಾಮನ ಆಲೋಚನೆಯನ್ನು ಅನುಸರಿಸಿ ಇಸ್ರಾಯೇಲರನ್ನು ಯೆಹೋವನಿಗೆ ದ್ರೋಹಿಗಳನ್ನಾಗಿ ಮಾಡಿ ಸಮೂಹದವರಲ್ಲಿ ಘೋರವ್ಯಾಧಿ ಉಂಟಾಗುವಂತೆ ಮಾಡಿದವರು ಇವರೇ ಅಲ್ಲವೇ.


ಇಗೋ, ಕೂಷಾನಿನ ಗುಡಾರಗಳು ತಳಮಳಗೊಂಡಿವೆ, ಮಿದ್ಯಾನ್ ದೇಶದ ಡೇರೆಗಳು ನಡುಗುತ್ತಿವೆ.


ಅವನು ಬೆಯೋರನ ಮಗನಾದ ಬಿಳಾಮನನ್ನು ಕರೆಯಿಸುವುದಕ್ಕೆ ಸ್ವಜನರ ದೇಶವಾದ ಯೂಫ್ರೆಟಿಸ್ ನದಿಯ ತೀರದಲ್ಲಿರುವ ಪೆತೋರ್ ಎಂಬ ಊರಿಗೆ ದೂತರನ್ನು ಕಳುಹಿಸಿ ಅವನಿಗೆ, “ಒಂದು ಜನಾಂಗವು ಐಗುಪ್ತ ದೇಶದಿಂದ ಬಂದಿದೆ. ಅವರು ಭೂಮಿಯನ್ನೆಲ್ಲಾ ಆವರಿಸಿಕೊಂಡು ನನ್ನ ಸಮೀಪಕ್ಕೆ ಬಂದಿದ್ದಾರೆ.


ಯಾಕೋಬನ ಧೂಳನ್ನು ಲೆಕ್ಕಿಸುವುದಕ್ಕೆ ಯಾರಿಂದಾದಿತು? ಇಸ್ರಾಯೇಲಿನ ನಾಲ್ಕನೆಯ ಒಂದು ಭಾಗವನ್ನಾದರೂ ಲೆಕ್ಕಿಸುವುದಕ್ಕೆ ಯಾರಿಂದಾದಿತು? ನೀತಿವಂತನು ಸಾಯುವಂತೆ ನಾನು ಸಾಯಬೇಕು. ಅವರಿಗುಂಟಾಗುವ ಅವಸಾನವು ನನಗೂ ಆಗಬೇಕು!” ಎಂದನು.


ಯಥಾರ್ಥವಂತರಿಗೆ ಸರಳತೆಯು ಮಾರ್ಗದರ್ಶಕ, ವಂಚಕರಿಗೆ ವಕ್ರತೆಯು ನಾಶನ.


ಕೆಟ್ಟ ದೂತನು ಕೇಡಿಗೆ ಬೀಳುವನು, ನಂಬಿಗಸ್ತನಾದ ರಾಯಭಾರಿಯು ಕ್ಷೇಮದಾಯಕನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು