Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 32:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ‘ಐಗುಪ್ತ ದೇಶದೊಳಗಿಂದ ಬಂದ ಈ ಜನರೊಳಗೆ ಯಾರೂ ನನ್ನನ್ನು ಪೂರ್ಣಮನಸ್ಸಿನಿಂದ ಅನುಸರಿಸದೆ ಹೋದುದರಿಂದ ನಾನು ಅಬ್ರಹಾಮ್, ಇಸಾಕ್, ಯಾಕೋಬರಿಗೆ ಪ್ರಮಾಣ ಪೂರ್ವಕವಾಗಿ ಕೊಟ್ಟ ದೇಶವನ್ನು, ಅವರೊಳಗೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಿನ ವಯಸ್ಸಿನವರಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ‘ಈಜಿಪ್ಟ್ ದೇಶದಿಂದ ಹೊರಬಂದ ಈ ಜನರಲ್ಲಿ ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನು ಮತ್ತು ನೂನನ ಮಗ ಯೆಹೋಶುವನು ಇವರಿಬ್ಬರೇ ಹೊರತಾಗಿ ಯಾರೂ ನನ್ನನ್ನು ಪೂರ್ಣಮನಸ್ಸಿನಿಂದ ಅನುಸರಿಸದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11-12 ಐಗುಪ್ತದೇಶದೊಳಗಿಂದ ಬಂದ ಈ ಜನರೊಳಗೆ ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಇವರಿಬ್ಬರೇ ಹೊರತಾಗಿ ಯಾರೂ ನನ್ನನ್ನು ಪೂರ್ಣಮನಸ್ಸಿನಿಂದ ಅನುಸರಿಸದೆ ಹೋದದರಿಂದ ಅವರೊಳಗೆ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸಿನವರಲ್ಲಿ ಅವರಿಬ್ಬರೇ ಹೊರತಾಗಿ ಒಬ್ಬನಾದರೂ ನಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ದೇಶವನ್ನು ನೋಡುವದೇ ಇಲ್ಲ ಎಂದು ಖಂಡಿತವಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11-12 ‘ಈಜಿಪ್ಟಿನಿಂದ ಬಂದ ಈ ಜನರಲ್ಲಿ ಮತ್ತು ಇಪ್ಪತ್ತು ವರ್ಷ ಮೊದಲುಗೊಂಡು ಅದಕ್ಕಿಂತ ಹೆಚ್ಚು ವಯಸ್ಸಾದ ನಿಮ್ಮವರೆಲ್ಲಾ ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನ ಮತ್ತು ನೂನನ ಮಗನಾದ ಯೆಹೋಶುವನ ಹೊರತು ಯಾರೂ ನನ್ನನ್ನು ನಿಜವಾಗಿಯೂ ಅನುಸರಿಸದೆ ಹೋದದ್ದರಿಂದ, ನಾನು ಅಬ್ರಹಾಮ್, ಇಸಾಕ್, ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ದೇಶವನ್ನು ಅವರಿಬ್ಬರೇ ಹೊರತು ಬೇರೆ ಯಾರೂ ನೋಡುವುದೇ ಇಲ್ಲ’ ಎಂದು ಖಂಡಿತವಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವರು ನನ್ನನ್ನು ಪೂರ್ಣಮನಸ್ಸಿನಿಂದ ಹಿಂಬಾಲಿಸದೆ ಇರುವುದರಿಂದ, ನಾನು ಅಬ್ರಹಾಮ್, ಇಸಾಕ್, ಯಾಕೋಬರಿಗೆ ಪ್ರಮಾಣ ಮಾಡಿದ ದೇಶವನ್ನು ಈಜಿಪ್ಟಿನೊಳಗಿಂದ ಹೊರಬಂದ ಇಪ್ಪತ್ತು ವರ್ಷವೂ ಅದಕ್ಕಿಂತ ಅಧಿಕವಾದ ಪ್ರಾಯವುಳ್ಳ ಜನರಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 32:11
9 ತಿಳಿವುಗಳ ಹೋಲಿಕೆ  

ನನ್ನ ದಾಸನಾದ ಕಾಲೇಬನಿಗೆ ಅವರಂಥ ಮನಸ್ಸುಳ್ಳವನಾಗಿರದೆ ಮನಃಪೂರ್ವಕವಾಗಿ ನನ್ನ ಮಾತನ್ನು ಅನುಸರಿಸಿ ನಡೆದುದ್ದರಿಂದ ಅವನು ಸಂಚರಿಸಿದ ಆ ದೇಶದಲ್ಲಿ ಅವನನ್ನು ಸೇರಿಸುವೆನು, ಅವನ ಸಂತತಿಯವರು ಅದನ್ನು ಸ್ವಾಧೀನಪಡಿಸಿಕೊಳ್ಳುವರು.


“ನೀವು ಇಸ್ರಾಯೇಲರ ಸರ್ವಸಮೂಹದವರಲ್ಲಿ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಿನ ವಯಸ್ಸುಳ್ಳವರನ್ನು ಅಂದರೆ ಯುದ್ಧಕ್ಕೆ ಹೊರಡತಕ್ಕವರನ್ನು ಗೋತ್ರಗೋತ್ರಗಳ ಪ್ರಕಾರ ಲೆಕ್ಕಿಸಬೇಕು” ಎಂದು ಆಜ್ಞಾಪಿಸಿದನು.


ಆತನು, “ನಿಮ್ಮ ಪೂರ್ವಿಕರಿಗೆ ವಾಗ್ದಾನಮಾಡಿದ ಆ ಒಳ್ಳೇ ದೇಶವನ್ನು ಈ ದುಷ್ಟ ಸಂತತಿಯವರಲ್ಲಿ ಯಾರೂ ನೋಡುವುದಿಲ್ಲ” ಎಂದು ಪ್ರಮಾಣಮಾಡಿದನು.


ನಾನು ಅವರ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಇವರಲ್ಲಿ ಯಾರೂ ನೋಡುವುದಿಲ್ಲ; ನನ್ನನ್ನು ಅಲಕ್ಷ್ಯಮಾಡಿದ ಇವರಲ್ಲಿ ಯಾರೂ ಅದನ್ನು ನೋಡುವುದಿಲ್ಲ.


ಆ ದೇಶವನ್ನು ನಿಮಗೇ ಕೊಟ್ಟಿದ್ದೇನೆ. ಯೆಹೋವನೆಂಬ ನಾನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರಿಗೂ ಮತ್ತು ಅವರ ಸಂತತಿಯವರಿಗೂ ಆ ದೇಶವನ್ನು ಕೊಡುತ್ತೇನೆಂದು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದೆನಲ್ಲಾ. ಅದರಲ್ಲಿ ಪ್ರವೇಶಮಾಡಿ ಸ್ವಾಧೀನಮಾಡಿಕೊಳ್ಳಿರಿ’” ಎಂದು ಅಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು