Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 32:38 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಸಿಬ್ಮಾ ಎಂಬ ಊರುಗಳನ್ನೂ, ಬೇರೆ ಹೆಸರಿನಿಂದ ಉಚ್ಚರಿಸತಕ್ಕ ನೆಬೋ, ಬಾಳ್ಮೆಯೋನ್ ಎಂಬವುಗಳನ್ನೂ ಹೊಸದಾಗಿ ಕಟ್ಟಿ ಅವುಗಳಿಗೆ ಬೇರೆ ಹೆಸರುಗಳನ್ನು ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಬೇರೆ ಹೆಸರಿನಿಂದ ಉಚ್ಚರಿಸತಕ್ಕ ನೆಬೋ, ಬಾಳ್ಮೆಯೋನ್ ಊರುಗಳನ್ನು ಹೊಸದಾಗಿ ಕಟ್ಟಿ ಅವುಗಳಿಗೆ ಬೇರೆ ಹೆಸರುಗಳನ್ನು ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ನೆಬೋ, ಬಾಳ್ ಮೆಯೋನ್ ಎಂದು ಬೇರೆ ಈ ಹೆಸರು ಹೊಂದಿದ ಈ ಪಟ್ಟಣಗಳನ್ನೂ ಸಿಬ್ಮಾವನ್ನೂ ಕಟ್ಟಿ, ತಾವು ಕಟ್ಟಿದ ಪಟ್ಟಣಗಳಿಗೆ ಬೇರೆ ಹೆಸರುಗಳನ್ನು ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 32:38
15 ತಿಳಿವುಗಳ ಹೋಲಿಕೆ  

ಬೇಲ್ ದೇವತೆಯು ಬಾಗಿದೆ, ನೆಬೋ ದೇವತೆಯು ಕುಗ್ಗಿದೆ, ಅವುಗಳ ವಿಗ್ರಹಗಳು ಪಶುಗಳ ಮೇಲೆ ಹೊರಿಸಲ್ಪಟ್ಟಿವೆ, ನೀವು ಮೆರವಣಿಗೆಯಾಗಿ ಹೊರುತ್ತಿದ್ದವುಗಳು ಪಶುಗಳಿಗೆ ಭಾರವಾದ ಹೊರೆಯಾಗಿ ಅವುಗಳು ಬಳಲಿದವು.


“ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್,


ಉಳಿದಿರುವ ಈ ಅನ್ಯಜನಾಂಗಗಳ ಜೊತೆಯಲ್ಲಿ ಇಜ್ಜೋಡಾಗಬೇಡಿರಿ. ಅವರ ದೇವತೆಗಳ ಹೆಸರನ್ನು ಹೇಳಿ ಆರಾಧಿಸಲೂ ಬಾರದು ಪ್ರಮಾಣಮಾಡಲೂ ಬಾರದು. ಅವುಗಳಿಗೆ ಅಡ್ಡ ಬಿದ್ದು ಸೇವಿಸಲೂ ಬಾರದು.


ನಾನು ನಿಮಗೆ ಹೇಳಿದ್ದನ್ನೆಲ್ಲಾ ಜಾಗರೂಕತೆಯಿಂದ ಕೈಕೊಳ್ಳಬೇಕು. ಅನ್ಯ ದೇವರುಗಳ ಹೆಸರುಗಳನ್ನು ಸ್ಮರಿಸಬಾರದು, ಅವುಗಳನ್ನು ಉಚ್ಚರಿಸಬಾರದು.


ಇತರ ದೇವರುಗಳನ್ನು ಅವಲಂಬಿಸಿದವರಿಗೆ ಬಹಳ ಕಷ್ಟನಷ್ಟಗಳು ಉಂಟಾಗುವವು. ಅವರಂತೆ ನಾನು ರಕ್ತವನ್ನು ಪಾನದ್ರವ್ಯವಾಗಿ ಸಮರ್ಪಿಸುವುದೇ ಇಲ್ಲ; ಅವರ ನಾಮಗಳನ್ನಾದರೂ ಉಚ್ಚರಿಸುವುದಿಲ್ಲ.


ಮರುದಿನ ಬೆಳಿಗ್ಗೆ ಬಾಲಾಕನು ಬಿಳಾಮನನ್ನು ಕರೆದುಕೊಂಡು “ಬಾಳ್” ಎಂಬ ದೇವತೆಯ ಪೂಜಾಸ್ಥಳಗಳಲ್ಲಿದ್ದ ಗುಡ್ಡವನ್ನು ಹತ್ತಿ ಇಸ್ರಾಯೇಲರ ಒಂದು ಭಾಗವನ್ನು ಅಲ್ಲಿಂದ ತೋರಿಸಿದನು.


ಅಬ್ರಹಾಮನು ತೋಡಿಸಿದ್ದ ಬಾವಿಗಳನ್ನು ಅವನು ಸತ್ತ ನಂತರ ಫಿಲಿಷ್ಟಿಯರು ಮುಚ್ಚಿ ಹಾಕಿದ್ದರಿಂದ ಇಸಾಕನು ಅವುಗಳನ್ನು ತಿರುಗಿ ಅಗೆಸಿ, ತಂದೆ ಇಟ್ಟಿದ್ದ ಹೆಸರುಗಳನ್ನೇ ಇಟ್ಟನು.


ರೂಬೇನ್ಯರ ಮಕ್ಕಳು ಹೆಷ್ಬೋನ್, ಎಲೆಯಾಲೆ, ಕಿರ್ಯಾತಯಿಮ್ ಊರುಗಳನ್ನು ಹೊಸದಾಗಿ ಕಟ್ಟಿಸಿದರು.


ನೆಬೋ ಸಂತಾನದವರಾದ ಯೆಗೀಯೇಲ್, ಮತ್ತಿತ್ಯ, ಜಾಬಾದ, ಜೆಬೀನ, ಯದ್ದೈ, ಯೋವೇಲ್ ಮತ್ತು ಬೆನಾಯ.


ಹೆಷ್ಬೋನಿನ ಭೂಮಿಯು, ಸಿಬ್ಮದ ದ್ರಾಕ್ಷಾಲತೆಯು ಒಣಗಿ ಹೋಗಿದೆ. ಯಜ್ಜೇರಿನವರೆಗೆ ವ್ಯಾಪಿಸಿ ಅರಣ್ಯದಲ್ಲಿ ಹಬ್ಬಿ, ಸಮುದ್ರದಾಚೆಗೆ ಸೇರುವಷ್ಟು ವಿಶಾಲವಾಗಿ ತನ್ನ ಶಾಖೆಗಳನ್ನು ಹರಡಿಕೊಂಡಿದ್ದ ಮೋವಾಬಿನ ರಾಜ ದ್ರಾಕ್ಷಿಗಳನ್ನು, ಜನಾಂಗಗಳ ಒಡೆಯರನ್ನು ತುಳಿದುಬಿಟ್ಟಿದ್ದಾನೆ.


ಮೋವಾಬನನ್ನು ಕುರಿತು ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ಅಯ್ಯೋ ನೆಬೋ ಊರಿನ ಗತಿಯನ್ನು ಏನು ಹೇಳಲಿ! ಅದು ಹಾಳಾಯಿತು; ಕಿರ್ಯಾತಯಿಮು ಶತ್ರುವಿನ ಕೈಗೆ ಸಿಕ್ಕಿ ಮಾನಭಂಗ ಹೊಂದಿದೆ, ಮಿಸ್ಗಾಬ್ ಕೆಡವಲ್ಪಟ್ಟು ಅವಮಾನಕ್ಕೆ ಗುರಿಯಾಗಿದೆ.


ಆದುದರಿಂದ, ಇಗೋ, ದೇಶಭೂಷಣಗಳಾದ ಮೋವಾಬಿನ ಗಡಿಯ ಪಟ್ಟಣಗಳು, ಅಂದರೆ ಬೇತ್ ಯೆಷೀಮೋತ್, ಬಾಳ್ ಮೆಯೋನ್, ಕಿರ್ಯಾಥಯಿಮ್ ಎಂಬ ಪಟ್ಟಣಗಳು ಇರುವ ಕಡೆಯಲ್ಲಿ ನಾನು ಮೋವಾಬಿನ ಮೇರೆಯನ್ನು ಒಡೆದುಬಿಡುವೆನು.


ಅನಂತರ ನಿನ್ನ ಅಣ್ಣನಾದ ಆರೋನನು ಹೇಗೆ ಹೋರೇಬ್ ಎಂಬ ಬೆಟ್ಟದಲ್ಲಿ ದೇಹವನ್ನು ಬಿಟ್ಟು ತನ್ನ ಪೂರ್ವಿಕರಲ್ಲಿ ಸೇರಿದನೋ ಹಾಗೆಯೇ ನೀನೂ ಈ ಬೆಟ್ಟದಲ್ಲಿ ದೇಹವನ್ನು ಬಿಟ್ಟು ಪೂರ್ವಿಕರಲ್ಲಿ ಸೇರಬೇಕು.


ಮೇಲ್ನಾಡಿಗೆ ದಂಡನೆಯಾಗಿದೆ; ಹೋಲೋನ್, ಯಾಚಾ, ಮೆಫಾತ್,


ಕಿರ್ಯಾತಯಿಮ್, ಬೇತ್ ಗಾಮೂಲ್ ಮತ್ತು ಬೇತ್ ಮೆಯೋನ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು