Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 33:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಮೊದಲನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಪಸ್ಕಹಬ್ಬದ ಮರುದಿನದಲ್ಲಿ ಇಸ್ರಾಯೇಲರು ಐಗುಪ್ತ್ಯರ ಎದುರಿನಲ್ಲೇ ರಮ್ಸೇಸಿನಿಂದ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಮೊದಲನೆಯ ತಿಂಗಳಿನ ಹದಿನೈದನೆಯ ದಿನ, ಅಂದರೆ ಪಾಸ್ಕಹಬ್ಬದ ಮರುದಿನ, ಇಸ್ರಯೇಲರು ಈಜಿಪ್ಟರ ಎದುರಿನಲ್ಲೇ ಅಟ್ಟಹಾಸದಿಂದ ರಮ್ಸೇಸಿನಿಂದ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಮೊದಲನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಅಂದರೆ ಪಸ್ಕಹಬ್ಬದ ಮರುದಿನದಲ್ಲಿ ಇಸ್ರಾಯೇಲ್ಯರು ಐಗುಪ್ತ್ಯರ ಎದುರಿನಲ್ಲೇ ಅಟ್ಟಹಾಸದಿಂದ ರಮ್ಸೇಸಿನಿಂದ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಮೊದಲನೆ ತಿಂಗಳಿನ ಹದಿನೈದನೆಯ ದಿನದಲ್ಲಿ ಅವರು ರಮ್ಸೇಸ್ ಪಟ್ಟಣವನ್ನು ಬಿಟ್ಟು ಹೊರಟರು. ಪಸ್ಕಹಬ್ಬದ ಮರುದಿನದಲ್ಲಿ ಇಸ್ರೇಲರು ಜಯದೊಂದಿಗೆ ತಮ್ಮ ಕೈಗಳನ್ನು ಎತ್ತಿಕೊಂಡು ಈಜಿಪ್ಟಿನಿಂದ ಹೊರಗೆ ನಡೆದರು. ಈಜಿಪ್ಟಿನ ಜನರೆಲ್ಲರೂ ಇದನ್ನು ನೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವರ ಪ್ರಯಾಣಗಳ ವಿವರಗಳು ಯಾವುವೆಂದರೆ: ಅವರು ಮೊದಲನೆಯ ತಿಂಗಳಿನ ಹದಿನೈದನೆಯ ದಿವಸದಲ್ಲಿ ಪಸ್ಕಹಬ್ಬದ ಮರುದಿನ ಇಸ್ರಾಯೇಲರು ಸಮಸ್ತ ಈಜಿಪ್ಟನವರ ಎದುರಿನಲ್ಲೇ ಅಟ್ಟಹಾಸದಿಂದ ರಮ್ಸೇಸಿನಿಂದ ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 33:3
10 ತಿಳಿವುಗಳ ಹೋಲಿಕೆ  

ಯೆಹೋವನು ಐಗುಪ್ತ ದೇಶದ ಅರಸನಾದ ಫರೋಹನ ಹೃದಯವನ್ನು ಕಠಿಣಪಡಿಸಿದ್ದರಿಂದ ಅವನು ಇಸ್ರಾಯೇಲರನ್ನು ಬೆನ್ನಟ್ಟಿಹೋದನು. ಆದರೆ ಇಸ್ರಾಯೇಲರು ಯುದ್ಧಸನ್ನದ್ಧರಾಗಿ ಹೊರಟು ಬಂದಿದ್ದರು.


ಚೈತ್ರ ಮಾಸದ ಈ ದಿನದಲ್ಲೇ ನೀವು ಹೊರಗೆ ಬಂದಿರುವಿರಿ.


ಇಸ್ರಾಯೇಲರು ರಾಮ್ಸೇಸ್ ಪಟ್ಟಣದಿಂದ ಹೊರಟು ಸುಕ್ಕೋತಿಗೆ ಬಂದರು. ಹೆಂಗಸರು ಮಕ್ಕಳು ಅಲ್ಲದೆ ಗಂಡಸರು ಮಾತ್ರ ಸುಮಾರು ಆರುಲಕ್ಷ ಮಂದಿ ಇದ್ದರು.


ಹೊಡೆದು ಹೋಗುವವನು ಅವರ ಮುಂದೆ ಹೊರಟಿದ್ದಾನೆ. ಅವರೂ ಬಾಗಿಲನ್ನು ಒಡೆದು ನುಗ್ಗಿ ಹೊರಟಿದ್ದಾರೆ. ಅವರ ಅರಸನು ಅವರ ಮುಂದೆ ತೆರಳಿದ್ದಾನೆ. ಯೆಹೋವನು ಅವರ ಮುಂಭಾಗದಲ್ಲಿ ನಡೆಯುತ್ತಿದ್ದಾನೆ.


ನೀವು ಅವಸರದಿಂದ ಹೊರಡಬೇಕಾಗಿಲ್ಲ, ಓಡಿಹೋಗಬೇಕಾಗಿಲ್ಲ. ಯೆಹೋವನು ನಿಮಗೆ ಮುಂಬಲವಾಗಿ ಮುಂದೆ ಹೋಗುವನು. ಇಸ್ರಾಯೇಲಿನ ದೇವರು ನಿಮಗೆ ಹಿಂಬಲವಾಗಿಯೂ ಕಾಯುವನು.


ಐಗುಪ್ತ್ಯರು ಅವರ ವಿಷಯದಲ್ಲಿ ಹೆದರಿಕೆಯುಳ್ಳವರಾದ್ದರಿಂದ, ಅವರು ಹೊರಟು ಹೋದದ್ದಕ್ಕೆ ಸಂತೋಷಿಸಿದರು.


“ಎಲ್ಲಾ ತಿಂಗಳುಗಳಲ್ಲಿ ಇದೇ ನಿಮಗೆ ಮೊದಲ ತಿಂಗಳಾಗಿರಬೇಕು. ಇದೇ ನಿಮಗೆ ಪ್ರತಿ ವರ್ಷದ ಮೊದಲನೆಯ ತಿಂಗಳಾಗಿರುವುದು.


ಫರೋಹನ ಅಪ್ಪಣೆಯ ಮೇರೆಗೆ ಯೋಸೇಫನು ತನ್ನ ತಂದೆಗೂ ಅಣ್ಣತಮ್ಮಂದಿರಿಗೂ ಐಗುಪ್ತ ದೇಶದಲ್ಲಿ ವಾಸಮಾಡಲು ಉತ್ತಮವಾಗಿದ್ದ ರಮ್ಸೇಸ್ ಪ್ರದೇಶದಲ್ಲಿ ಸ್ವತ್ತು ಕೊಟ್ಟನು.


ಅವರನ್ನು ಬಿಟ್ಟೀ ಕೆಲಸಗಳಿಂದ ಪೀಡಿಸುವುದಕ್ಕಾಗಿ, ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ಇರಿಸಿದನು. ಅವರು ಫರೋಹನನಿಗೆ ಪಿತೋಮ್ ಮತ್ತು ರಾಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದನು.


ಮೋಶೆ ಯೆಹೋವನ ಅಪ್ಪಣೆಯ ಪ್ರಕಾರ ಇಸ್ರಾಯೇಲರ ಪ್ರಯಾಣಗಳ ವಿವರಗಳನ್ನು ಬರೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು