ಅರಣ್ಯಕಾಂಡ 33:38 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಮಹಾಯಾಜಕನಾದ ಆರೋನನು ಯೆಹೋವನಿಂದ ಅಪ್ಪಣೆಯನ್ನು ಹೊಂದಿ ಹೋರ್ ಬೆಟ್ಟವನ್ನು ಹತ್ತಿ, ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟ ನಲ್ವತ್ತನೆಯ ವರ್ಷದ ಐದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಅಲ್ಲೇ ಪ್ರಾಣಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಮಹಾಯಾಜಕ ಆರೋನನು ಸರ್ವೇಶ್ವರನಿಂದ ಅಪ್ಪಣೆಯನ್ನು ಪಡೆದು ಆ ಹೋರ್ ಬೆಟ್ಟವನ್ನು ಹತ್ತಿ ಅಲ್ಲೇ ಪ್ರಾಣಬಿಟ್ಟನು. ಇಸ್ರಯೇಲರು ಈಜಿಪ್ಟಿನಿಂದ ಹೊರಟ ನಾಲ್ವತ್ತನೆಯ ವರ್ಷದ ಐದನೆಯ ತಿಂಗಳಿನ ಮೊದಲನೆಯ ದಿನ ಅದಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಮಹಾಯಾಜಕ ಆರೋನನು ಯೆಹೋವನಿಂದ ಅಪ್ಪಣೆಯನ್ನು ಹೊಂದಿ ಹೋರ್ ಬೆಟ್ಟವನ್ನು ಹತ್ತಿ ಇಸ್ರಾಯೇಲ್ಯರು ಐಗುಪ್ತದೇಶದಿಂದ ಹೊರಟ ನಾಲ್ವತ್ತನೆಯ ವರುಷದ ಐದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಅಲ್ಲೇ ಪ್ರಾಣಬಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಮಹಾಯಾಜಕನಾದ ಆರೋನನು ಯೆಹೋವನಿಂದ ಆಜ್ಞಾಪಿಸಲ್ಪಟ್ಟ ಹೋರ್ ಬೆಟ್ಟವನ್ನು ಹತ್ತಿದನು. ಇಸ್ರೇಲರು ಈಜಿಪ್ಟನ್ನು ಬಿಟ್ಟು ಹೊರಟ ನಂತರ ನಲವತ್ತನೆ ವರ್ಷದ ಐದನೆ ತಿಂಗಳಿನ ಮೊದಲನೆ ದಿನದಲ್ಲಿ ಆರೋನನು ಅಲ್ಲಿ ಪ್ರಾಣಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಆಗ ಯಾಜಕನಾದ ಆರೋನನು ಯೆಹೋವ ದೇವರ ಆಜ್ಞೆಯ ಪ್ರಕಾರ ಹೋರ್ ಗುಡ್ಡದ ಮೇಲೆ ಏರಿ, ಅಲ್ಲಿ ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಟ ನಾಲ್ವತ್ತನೆಯ ವರ್ಷದ ಐದನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ನಿಧನ ಹೊಂದಿದನು. ಅಧ್ಯಾಯವನ್ನು ನೋಡಿ |