Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 34:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಶೆಫಾಮಿನಿಂದ ಅಯಿನಿನ ಪೂರ್ವದಲ್ಲಿರುವ ರಿಬ್ಲಕ್ಕೆ ಬರಬೇಕು. ತರುವಾಯ ಅದು ಗಟ್ಟಾ ಇಳಿದು ಕಿನ್ನೆರೆತ್ ಸಮುದ್ರದ ಪೂರ್ವದಲ್ಲಿರುವ ಬೆಟ್ಟಗಳಿಗೆ ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅಲ್ಲಿ0ದ ಅದು ಅಯಿನಿನ ಮೂಡಲಲ್ಲಿರುವ ರಿಬ್ಲಕ್ಕೆ ಬರಬೇಕು.ತರುವಾಯ ಅದು ಗಟ್ಟಾ ಇಳಿದು ಕಿನ್ನೆರೆತ್‍ ಸಮುದ್ರದ ಮೂಡಲಲ್ಲಿರುವ ಬೆಟ್ಟಗಳಿಗೆ ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅಲ್ಲಿಂದ ಅದು ಅಯಿನಿನ ಮೂಡಲಲ್ಲಿರುವ ರಿಬ್ಲಕ್ಕೆ ಬರಬೇಕು. ತರುವಾಯ ಅದು ಗಟ್ಟಾ ಇಳಿದು ಕಿನ್ನೆರೆತ್ ಸಮುದ್ರದ ಮೂಡಲಲ್ಲಿರುವ ಬೆಟ್ಟಗಳಿಗೆ ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಶೆಫಾಮಿನಿಂದ ಆ ಮೇರೆಯು ಆಯಿನಿನ ಪೂರ್ವದಲ್ಲಿರುವ ರಿಬ್ಲಕ್ಕೆ ಹೋಗಿ ಗಲಿಲೇಯ ಸರೋವರದ ಪೂರ್ವದಲ್ಲಿರುವ ಬೆಟ್ಟಗಳನ್ನು ಮುಟ್ಟುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಶೆಫಾಮಿನಿಂದ ಮೇರೆ ಆಯಿನಿನ ಪೂರ್ವದಲ್ಲಿರುವ ರಿಬ್ಲಾಕ್ಕೆ ಇಳಿದು, ಕಿನ್ನೆರೆತ್ ಸಮುದ್ರದ ಪೂರ್ವ ತೀರವನ್ನು ಮುಟ್ಟಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 34:11
16 ತಿಳಿವುಗಳ ಹೋಲಿಕೆ  

ಫರೋಹ ನೆಕೋವನು ಇವನನ್ನು ಯೆರೂಸಲೇಮಿನಲ್ಲಿ ಬಹು ದಿನಗಳವರೆಗೆ ಆಳಗೊಡಲಿಲ್ಲ. ಅವನು ಹಮಾತ ದೇಶದ ರಿಬ್ಲಾ ಎಂಬ ಊರಲ್ಲಿ ಇವನನ್ನು ಸೆರೆಯಲ್ಲಿಟ್ಟದ್ದಲ್ಲದೆ ಯೆಹೂದ್ಯರು ಅವನಿಗೆ ನೂರು ತಲಾಂತು ಬೆಳ್ಳಿಯನ್ನೂ, ಒಂದು ತಲಾಂತು ಬಂಗಾರವನ್ನೂ ದಂಡ ತೆರಬೇಕಾಯಿತು.


ಅದಲ್ಲದೆ ಆರಾಬಾ ಎಂಬ ತಗ್ಗನ್ನೂ ಅವರಿಗೆ ಕೊಟ್ಟೆನು; ಅದರಲ್ಲಿ ಕಿನ್ನೆರೆತ್ ಸಮುದ್ರದಿಂದ ಪಿಸ್ಗಾ ಬೆಟ್ಟದ ಪಶ್ಚಿಮದಲ್ಲಿರುವ ಅರಾಬದ ಸಮುದ್ರವೆನಿಸಿಕೊಳ್ಳುವ ಲವಣಸಮುದ್ರದ ವರೆಗೆ ಯೊರ್ದನ್ ನದಿಯು ಅವರ (ಪಶ್ಚಿಮದ ವರೆಗೆ) ಮೇರೆ.


ಕಿನ್ನೆರೋತ್ ಸಮುದ್ರದ ದಕ್ಷಿಣದಲ್ಲಿನ ತಗ್ಗಾದ ಪ್ರದೇಶ, ಇಳುಕಲ್ಲಿನ ಪ್ರದೇಶ, ದೋರ್ ಊರಿನ ಪಶ್ಚಿಮದಲ್ಲಿದ್ದ ಬೆಟ್ಟದ ಮೇಲಿನ ಪ್ರದೇಶ, ಇವುಗಳ ಅರಸರನ್ನೂ ಪೂರ್ವಪಶ್ಚಿಮಗಳಲ್ಲಿರುವ


ಒಮ್ಮೆ ಯೇಸು ಗೆನೆಜರೇತ್ ಸರೋವರದ ದಡದಲ್ಲಿ ನಿಂತಿದ್ದಾಗ ಜನರು ಗುಂಪಾಗಿ ಬಂದು ದೇವರ ವಾಕ್ಯವನ್ನು ಕೇಳುವುದಕ್ಕಾಗಿ ಆತನನ್ನು ಸುತ್ತುವರೆದು ನೂಕಾಡುತ್ತಿದ್ದರು.


ಚಿದ್ದೀಮ್, ಚೇರ್, ಹಮ್ಮತ್, ರಕ್ಕತ್, ಕಿನ್ನೆರೆತ್,


ತರುವಾಯ ಯೇಸು ಗಲಿಲಾಯದ ಸಮುದ್ರವನ್ನು ದಾಟಿ, ಆಚೆ ದಡಕ್ಕೆ ಹೋದನು. ಅದಕ್ಕೆ ತಿಬೇರಿಯ ಸಮುದ್ರವೆಂತಲೂ ಹೇಳುತ್ತಾರೆ.


ಅವರು ಸಮುದ್ರವನ್ನು ದಾಟಿ ಗೆನೆಜರೇತ್ ಪಟ್ಟಣದ ದಡಕ್ಕೆ ಬಂದರು.


ಬಾಬೆಲಿನ ಅರಸನು ಅವನಿಗೆ ಶಿಕ್ಷೆಯನ್ನು ವಿಧಿಸಿ, ಅವನ ಮಕ್ಕಳನ್ನು ಅವನ ಎದುರಿನಲ್ಲಿಯೇ ವಧಿಸಿ, ಯೆಹೂದದ ಸಕಲ ಸರದಾರರನ್ನು ರಿಬ್ಲದಲ್ಲಿ ಕೊಲ್ಲಿಸಿದನು.


ಅನಂತರ ಕಸ್ದೀಯರು ಬಾಬೆಲಿನ ಅರಸನನ್ನು ಹಿಡಿದು ರಿಬ್ಲದಲ್ಲಿದ್ದ ತಮ್ಮ ಅರಸನ ಬಳಿಗೆ ತೆಗೆದುಕೊಂಡು ಬಂದು ಅವನಿಗೆ ಶಿಕ್ಷೆಯನ್ನು ವಿಧಿಸಿದರು.


ಯೊರ್ದನ್ ಕಣಿವೆಯಲ್ಲಿರುವ ಬೇತ್‌ಹಾರಾಮ್; ಬೇತ್‌ನಿಮ್ರಾ, ಸುಕ್ಕೋತ್, ಚಾಫೋನ ಎಂಬ ಪಟ್ಟಣಗಳು. ಕಿನ್ನೆರೆತ್ ಸಮುದ್ರದ ದಕ್ಷಿಣದಿಕ್ಕಿನ ಮೂಲೆಯ ವರೆಗೆ ವಿಸ್ತರಿಸಿಕೊಂಡಿರುವ ಯೊರ್ದನಿನ ಪೂರ್ವ ಪ್ರದೇಶಗಳು.


ಪೂರ್ವದಿಕ್ಕಿನ ಮೇರೆಗಾಗಿ ಹಚರೇನಾನಿನಿಂದ ಶೆಫಾಮಿಗೆ ಗುರುತು ಹಾಕಬೇಕು.


ಅಲ್ಲಿಂದ ಅದು ಯೊರ್ದನ್ ನದಿಗೆ ಇಳಿದು ಅದನ್ನು ಅನುಸರಿಸಿ ಲವಣಸಮುದ್ರದ ಬಳಿಯಲ್ಲಿ ಮುಗಿಯಬೇಕು. ಇವೇ ನಿಮ್ಮ ದೇಶದ ಮೇರೆಗಳು’” ಎಂದನು.


ಅನಂತರ ಕಸ್ದೀಯರು ಅವನನ್ನು ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬೆಲಿನ ಅರಸನ ಬಳಿಗೆ ತೆಗೆದುಕೊಂಡು ಬಂದರು.


ಹಾಗೂ ಯೊರ್ದನ್ ನದಿಯ ಪೂರ್ವದಲ್ಲಿ ಕಿನ್ನೆರೋತ್ ಸಮುದ್ರದಿಂದ ಲವಣಸಮುದ್ರವೆನಿಸಿಕೊಳ್ಳುವ ಅರಾಬ್ ಸಮುದ್ರದ ಹತ್ತಿರವಿರುವ ಬೇತಯೆಷಿಮೋತಿನವರೆಗೂ ದಕ್ಷಿಣದಲ್ಲಿರುವ ಪಿಸ್ಗಾ ಬೆಟ್ಟದ ಬುಡದವರೆಗೂ ಇರುವ ಕಣಿವೆ ಪ್ರದೇಶವು ಇವೇ ಅವನ ರಾಜ್ಯ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು