ಅರಣ್ಯಕಾಂಡ 34:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅಲ್ಲಿಂದ ಅದು ಯೊರ್ದನ್ ನದಿಗೆ ಇಳಿದು ಅದನ್ನು ಅನುಸರಿಸಿ ಲವಣಸಮುದ್ರದ ಬಳಿಯಲ್ಲಿ ಮುಗಿಯಬೇಕು. ಇವೇ ನಿಮ್ಮ ದೇಶದ ಮೇರೆಗಳು’” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅದೂ ಅಲ್ಲಿಂದ ಜೋರ್ಡನ್ ನದಿಗೆ ಇಳಿದು, ಅದನ್ನು ಅನುಸರಿಸುತ್ತಾ ಲವಣ ಸಮುದ್ರದ ಬಳಿಯಲ್ಲಿ ಮುಗಿಯಬೇಕು.’ ಇವೇ ನಿಮ್ಮ ನಾಡಿನ ಮೇರೆಗಳು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅಲ್ಲಿಂದ ಅದು ಯೊರ್ದನ್ ಹೊಳೆಗೆ ಇಳಿದು [ಅದನ್ನು ಅನುಸರಿಸಿ] ಲವಣ ಸಮುದ್ರದ ಬಳಿಯಲ್ಲಿ ಮುಗಿಯಬೇಕು. ಇವೇ ನಿಮ್ಮ ದೇಶದ ಮೇರೆಗಳು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಬಳಿಕ ಈ ಮೇರೆಯು ಜೋರ್ಡನ್ ನದಿಯ ಉದ್ದಕ್ಕೂ ಮುಂದುವರೆಯುವುದು. ಅದು ಉಪ್ಪು ಸಮುದ್ರದಲ್ಲಿ ಕೊನೆಗೊಳ್ಳುವುದು. ಇವುಗಳೇ ನಿಮ್ಮ ದೇಶದ ಸುತ್ತಲಿನ ಮೇರೆಗಳು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅಲ್ಲಿಂದ ಮೇರೆಯು ಯೊರ್ದನ್ ನದಿಗೆ ಅನುಸಾರವಾಗಿ ಇಳಿದು, ಉಪ್ಪಿನ ಸಮುದ್ರದಲ್ಲಿ ಮುಗಿಯುವುದು. “ ‘ಇದು ಅದರ ಸುತ್ತಮುತ್ತಲ ಮೇರೆಗಳ ಪ್ರಕಾರ ನಿಮ್ಮ ದೇಶವಾಗಿರಬೇಕು.’ ” ಅಧ್ಯಾಯವನ್ನು ನೋಡಿ |