Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 34:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅದಕ್ಕನುಸಾರವಾಗಿ ಮೋಶೆಯು ಇಸ್ರಾಯೇಲರಿಗೆ, “ನೀವು ಚೀಟುಹಾಕಿ ಹಂಚಿಕೊಳ್ಳಬೇಕೆಂದು ಯೆಹೋವನು ಆಜ್ಞಾಪಿಸಿದ ದೇಶವು ಇದೇ. ಒಂಭತ್ತುವರೆ ಕುಲದವರಿಗೆ ಇದನ್ನು ಹಂಚಿಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅದಕ್ಕನುಸಾರವಾಗಿ ಮೋಶೆ ಇಸ್ರಯೇಲರಿಗೆ, “ನೀವು ಚೀಟುಹಾಕಿ ಹಂಚಿಕೊಳ್ಳಬೇಕೆಂದು ಸರ್ವೇಶ್ವರ ಆಜ್ಞಾಪಿಸಿದ ನಾಡು ಇದೇ. ಒಂಬತ್ತುವರೆ ಕುಲದವರಿಗೆ ಇದನ್ನು ಹಂಚಿಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅದಕ್ಕನುಸಾರವಾಗಿ ಮೋಶೆಯು ಇಸ್ರಾಯೆಲ್ಯರಿಗೆ - ನೀವು ಚೀಟುಹಾಕಿ ಹಂಚಿಕೊಳ್ಳಬೇಕೆಂದು ಯೆಹೋವನು ಆಜ್ಞಾಪಿಸಿದ ದೇಶವು ಇದೇ; ಒಂಭತ್ತುವರೆ ಕುಲದವರಿಗೆ ಇದನ್ನು ಹಂಚಿಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಮೋಶೆಯು ಇಸ್ರೇಲರಿಗೆ ಹೀಗೆ ಆಜ್ಞಾಪಿಸಿದನು: “ನೀವು ಚೀಟುಹಾಕಿ ಭಾಗಮಾಡಿಕೊಳ್ಳುವ ದೇಶವೇ ಇದು. ಒಂಭತ್ತುವರೆ ಕುಲಗಳವರಿಗೆ ಈ ದೇಶವನ್ನು ಕೊಡಬೇಕೆಂದು ಯೆಹೋವನು ಆಜ್ಞಾಪಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಮೋಶೆಯು ಇಸ್ರಾಯೇಲರಿಗೆ ಆಜ್ಞಾಪಿಸಿ, “ನೀವು ಚೀಟುಹಾಕಿ ಸ್ವಾಧೀನಪಡಿಸಿಕೊಳ್ಳಬೇಕಾದ ದೇಶವು ಒಂಬತ್ತುವರೆ ಗೋತ್ರಗಳಿಗೆ ಕೊಡಬೇಕೆಂದು ಯೆಹೋವ ದೇವರು ಆಜ್ಞಾಪಿಸಿದ ದೇಶವು ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 34:13
10 ತಿಳಿವುಗಳ ಹೋಲಿಕೆ  

ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,


ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಐಗುಪ್ತ ದೇಶದ ನದಿಯಿಂದ ಯೂಫ್ರೆಟಿಸ್ ಮಹಾ ನದಿಯವರೆಗೂ ಇರುವ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ.


ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ,


ಪ್ರತಿಯೊಂದು ಕುಲದ ಪಿತೃವಿನ ಹೆಸರನ್ನು ಬರೆದು ಚೀಟುಹಾಕಿ ಆಯಾ ಕುಲಕ್ಕೆ ಸ್ವತ್ತನ್ನು ಗೊತ್ತು ಮಾಡಬೇಕು.


ಅಲ್ಲಿಂದ ಅದು ಯೊರ್ದನ್ ನದಿಗೆ ಇಳಿದು ಅದನ್ನು ಅನುಸರಿಸಿ ಲವಣಸಮುದ್ರದ ಬಳಿಯಲ್ಲಿ ಮುಗಿಯಬೇಕು. ಇವೇ ನಿಮ್ಮ ದೇಶದ ಮೇರೆಗಳು’” ಎಂದನು.


ನೀವು ಹೆಜ್ಜೆಯಿಡುವ ಎಲ್ಲಾ ಸ್ಥಳಗಳು ನಿಮ್ಮದಾಗುವವು. ಅರಣ್ಯ ಮೊದಲುಗೊಂಡು ಲೆಬನೋನ್ ಪರ್ವತದ ವರೆಗೂ ಮತ್ತು ಯೂಫ್ರೆಟಿಸ್ ನದಿಯಿಂದ ಪಶ್ಚಿಮ ಸಮುದ್ರದವರೆಗೂ ನಿಮ್ಮ ಸೀಮೆ ವ್ಯಾಪಿಸುವುದು.


ನೀವು ದೇಶವನ್ನು ಸ್ವತ್ತಾಗಿ ಹಂಚುವಾಗ ಒಂದು ಭಾಗವನ್ನು ಪ್ರತ್ಯೇಕಿಸಿ ಯೆಹೋವನಿಗೆ ಕಾಣಿಕೆಯಾಗಿ ಸಮರ್ಪಿಸಬೇಕು. ಅದರ ಉದ್ದವು ಇಪ್ಪತ್ತೈದು ಸಾವಿರ ಮೊಳ, ಅಗಲವು ಇಪ್ಪತ್ತು ಸಾವಿರ ಮೊಳ ಇರಲಿ. ಆ ಪ್ರಾಂತ್ಯವೆಲ್ಲಾ ಸುತ್ತುಮುತ್ತಲು ಪರಿಶುದ್ಧವಾಗಿರಬೇಕು.


ಹೀಗಿರಲು ಯೆಹೋವನ ಸಭೆಯವರ ಭೂಮಿಯ ಮೇಲೆ ಚೀಟು ಹಾಕಿ ನೂಲೆಳೆಯಲಿಕ್ಕೆ ನಿಮ್ಮಲ್ಲಿ ಯಾರೂ ಇರುವುದಿಲ್ಲ.


ಒಂಭತ್ತು ಕುಲಗಳಿಗೂ, ಮನಸ್ಸೆ ಕುಲದ ಅರ್ಧ ಜನರಿಗೂ ಪಾಲು ಮಾಡಿ ಕೊಡು” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು