Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 34:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಸಮಸ್ತ ಕಾನಾನ್ ದೇಶವೇ ನಿಮಗೆ ಸ್ವದೇಶವಾಗಿ ದೊರಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನೀನು ಇಸ್ರಯೇಲರಿಗೆ ಹೀಗೆಂದು ಆಜ್ಞಾಪಿಸು - ‘ಇಡೀ ಕಾನಾನ್ ನಾಡು ನಿಮಗೆ ಸ್ವಂತ ನಾಡಾಗಿ ದೊರಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸಬೇಕು - ಸಮಸ್ತ ಕಾನಾನ್‍ದೇಶವೇ ನಿಮಗೆ ಸ್ವದೇಶವಾಗುವದಕ್ಕೆ ದೊರಕುವಂಥದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನೀನು ಇಸ್ರೇಲರಿಗೆ ಹೀಗೆ ಆಜ್ಞಾಪಿಸಬೇಕು: ನೀವು ಕಾನಾನ್ ದೇಶವನ್ನು ಪ್ರವೇಶಿಸಿದಾಗ, ಇಡೀ ಕಾನಾನ್ ದೇಶವನ್ನು ಅದರ ಗಡಿಗಳೊಡನೆ ನಿಮಗೆ ಸ್ವಾಸ್ತ್ಯವಾಗಿ ಕೊಡಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ನೀನು ಇಸ್ರಾಯೇಲರಿಗೆ ಆಜ್ಞಾಪಿಸಿ, ಅವರಿಗೆ ಹೇಳಬೇಕಾದದ್ದೇನೆಂದರೆ, ‘ನೀವು ಕಾನಾನ್ ದೇಶದೊಳಗೆ ಬರುವಾಗ, ನಿಮಗೆ ಸೊತ್ತಾಗಿ ಬರುವ ಕಾನಾನ್ ದೇಶವು ಅದರ ಮೇರೆಗಳ ಪ್ರಕಾರ ಹೀಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 34:2
23 ತಿಳಿವುಗಳ ಹೋಲಿಕೆ  

ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತ ಸ್ವತ್ತಾಗಿ ಕೊಟ್ಟು ಎಂದೆಂದಿಗೂ ಅವರಿಗೆ ದೇವರಾಗಿರುವೆನು” ಎಂದನು.


ಅವರಲ್ಲಿ ಸ್ವಲ್ಪ ಜನರು ಕಾನಾನ್ ದೇಶದಲ್ಲಿ ಪ್ರವಾಸಿಗಳಾಗಿ ಇರುವಾಗಲೇ,


ಆತನೇ ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ, ಆತನ ಕರೆಯ ನಿರೀಕ್ಷೆಯು ಎಂಥದೆಂಬುದನ್ನೂ ಮತ್ತು ದೇವಜನರಲ್ಲಿರುವ ಆತನ ಸ್ವತ್ತಿನ ಮಹಿಮಾತಿಶಯವು ಎಂಥದೆಂಬುದನ್ನೂ,


ದೇವರು ತನ್ನ ಸ್ವಕೀಯ ಜನರಿಗೆ ವಿಮೋಚನೆಯುಂಟಾಗುತ್ತದೆ ಎಂಬುದಕ್ಕೆ ಪವಿತ್ರಾತ್ಮನು ನಮ್ಮ ಬಾಧ್ಯತೆಗೆ ಸಂಚಕಾರವಾಗಿದ್ದಾನೆ. ಈ ಕಾರಣ ದೇವರಿಗೆ ಮಹಿಮೆಯನ್ನು ಸಲ್ಲಿಸೋಣ.


ಅವರು ಕತ್ತಲೆಯಿಂದ ಬೆಳಕಿಗೂ, ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು, ನನ್ನಲ್ಲಿ ನಂಬಿಕೆಯಿಡುವುದರಿಂದ ಪಾಪಕ್ಷಮಾಪಣೆಯನ್ನೂ, ಪರಿಶುದ್ಧರೊಂದಿಗೆ ಹಕ್ಕನ್ನೂ ಹೊಂದುವಂತೆ, ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ’ ಅಂದನು.


ದೇವರು ಒಬ್ಬ ಮನುಷ್ಯನಿಂದ ಎಲ್ಲಾ ಜನಾಂಗಗಳನ್ನು ಸೃಷ್ಟಿಸಿ, ಅವರವರು ಇರತಕ್ಕ ಕಾಲಗಳನ್ನೂ ಹಾಗು ಅವರವರ ನಿವಾಸಗಳ ಮೇರೆಗಳನ್ನೂ ನಿಷ್ಕರ್ಷಿಸಿ ಭೂಮಂಡಲದಲ್ಲೆಲ್ಲಾ ಅವರನ್ನು ಇರಿಸಿ,


ನಾನು ನಿಮ್ಮ ಪೂರ್ವಿಕರಿಗೆ ಪ್ರಮಾಣವಾಗಿ ವಾಗ್ದಾನ ಮಾಡಿದ ಈ ದೇಶವನ್ನು ನೀವೆಲ್ಲರೂ ಸರಿಸಮಾನವಾಗಿ ಅನುಭವಿಸುವಿರಿ. ಇದು ನಿಮಗೆ ಸ್ವತ್ತಾಗಿಯೇ ಇರುವುದು.


“ಇಸ್ರಾಯೇಲೇ, ನಾನು ಎಷ್ಟೋ ಸಂತೋಷದಿಂದ ಗಂಡು ಮಕ್ಕಳೊಳಗೆ ನಿನ್ನನ್ನೂ ಆರಿಸಿಕೊಂಡು, ನಿನಗೆ ಮನೋಹರವಾದ ದೇಶವನ್ನು ಅಂದರೆ ಸಮಸ್ತ ಜನಾಂಗಗಳ ಬಾಧ್ಯತೆಗಳಲ್ಲಿ ರಮಣೀಯವಾದದ್ದನ್ನು ಕೊಡುವೆನು; ನೀನು ನನ್ನ ಅನುಸರಣೆಯನ್ನು ಬಿಟ್ಟು ಓರೆಯಾಗದೆ ನನ್ನನ್ನು ‘ತಂದೆ’ ಎನ್ನುವಿ ಅಂದುಕೊಂಡೆನು.


ಕಾನಾನ್ಯರ ಸೀಮೆಯು ಸೀದೋನ್ ಪಟ್ಟಣದಿಂದ ಗೆರಾರಿಗೆ ಹೋಗುವ ದಾರಿಯಲ್ಲಿರುವ ಗಾಜಾ ಪಟ್ಟಣದ ವರೆಗೂ ಮತ್ತು ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳಿಗೆ ಹೋಗುವ ದಾರಿಯಲ್ಲಿರುವ ಲೆಷಾ ಊರಿನವರೆಗೂ ಇರುತ್ತದೆ.


ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀವು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ದೇಶವನ್ನು ಬಾಧ್ಯವಾಗಿ ಹಂಚಿಕೊಡುವಾಗ ಮುಂದಿನ ಮೇರೆಗಳನ್ನು ಅನುಸರಿಸಬೇಕು. ಯೋಸೇಫಿಗೆ ಎರಡು ಪಾಲು ಸೇರಲಿ.


ಕೆಂಪುಸಮುದ್ರದಿಂದ ಫಿಲಿಷ್ಟಿಯರ ದೇಶದ ಬಳಿಯಲ್ಲಿರುವ ಸಮುದ್ರದವರೆಗೂ ಮತ್ತು ಈ ಅರಣ್ಯದಿಂದ ಯೂಫ್ರೆಟಿಸ್ ಮಹಾನದಿಯವರೆಗೂ ಇರುವ ದೇಶವನ್ನೆಲ್ಲಾ ನಿಮಗಾಗಿ ನೇಮಿಸಿ ಅದರಲ್ಲಿರುವ ನಿವಾಸಿಗಳನ್ನು ನಿಮಗೆ ಅಧೀನಪಡಿಸುವೆನು. ನೀವು ಅವರನ್ನು ಹೊರಡಿಸುವಿರಿ.


ಯೆಹೋವನು ಮೋಶೆಯ ಮುಖಾಂತರ ವಾಗ್ದಾನ ಮಾಡಿದ ಪ್ರದೇಶಗಳನ್ನೆಲ್ಲಾ ಯೆಹೋಶುವನು ಸೆರೆ ಹಿಡಿದುಕೊಂಡು ಇಸ್ರಾಯೇಲ್ ಕುಲಭಾಗಗಳಿಗನುಗುಣವಾಗಿ ಅವುಗಳನ್ನು ವಿಭಾಗಿಸಿ ಹಂಚಿಕೊಟ್ಟನು. ಯುದ್ಧವು ನಿಂತು ದೇಶದಲ್ಲೆಲ್ಲಾ ಸಮಾಧಾನವುಂಟಾಯಿತು.


ಯೆಹೋಶುವನು ದಿನತುಂಬಿದ ಮುದುಕನಾಗಲು ಯೆಹೋವನು ಅವನಿಗೆ, “ನೀನು ಈಗ ಮುದುಕನಾದಿ, ಸ್ವಾಧೀನಮಾಡಿಕೊಳ್ಳತಕ್ಕ ದೇಶಗಳು ಇನ್ನೂ ಬಹಳ ಇವೆ.


ಯೆಹೋವನು ಇಸ್ರಾಯೇಲರ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಇಸ್ರಾಯೇಲಿಗೆ ಕೊಟ್ಟನು. ಅವರು ಅದನ್ನು ಸ್ವತಂತ್ರಪಡಿಸಿಕೊಂಡು ಅದರಲ್ಲಿ ವಾಸಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು