ಅರಣ್ಯಕಾಂಡ 35:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅವನು ಸಭೆಯವರಿಂದ ತೀರ್ಪು ಹೊಂದುವುದಕ್ಕಿಂತ ಮೊದಲೇ ಹತವಾದವನ ಸಮೀಪಬಂಧುವಿನಿಂದ ಸಾಯದಂತೆ ಆ ಆಶ್ರಯ ಪಟ್ಟಣಗಳು ನಿಮ್ಮೊಳಗೆ ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅಂಥವನು ಸಭೆಯವರಿಂದ ತೀರ್ಪುಹೊಂದುವುದಕ್ಕಿಂತ ಮೊದಲೇ ಹತನಾದವನ ಸಮೀಪ ಬಂಧುವಿನಿಂದ ಸಾಯದಂತೆ ಈ ಆಶ್ರಯಧಾಮಗಳು ನಿಮ್ಮಲ್ಲಿ ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅವನು ಸಭೆಯವರಿಂದ ತೀರ್ಪುಹೊಂದುವದಕ್ಕಿಂತ ಮೊದಲೇ ಹತವಾದವನ ಸಮೀಪಬಂಧುವಿನಿಂದ ಸಾಯದಂತೆ ಆ ಆಶ್ರಯಸ್ಥಾನಗಳು ನಿಮ್ಮೊಳಗೆ ಇರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಕೊಂದವನು ನ್ಯಾಯ ವಿಚಾರಣಾಸಭೆಯ ಮುಂದೆ ನಿಂತುಕೊಳ್ಳುವುದಕ್ಕಿಂತ ಮೊದಲೇ ಕೊಲ್ಲಲ್ಪಟ್ಟವನ ಸಂಬಂಧಿಕನಿಂದ ಕೊಲ್ಲಲ್ಪಡದೆ ಸುರಕ್ಷಿತನಾಗಿರಲು ಆ ಆಶ್ರಯ ಸ್ಥಳಗಳು ನಿಮ್ಮ ಮಧ್ಯದಲ್ಲಿ ಇರಲೇಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಕೊಂದವನು ಸಭೆಯ ಮುಂದೆ ನ್ಯಾಯತೀರ್ಪಿಗೆ ನಿಲ್ಲುವವರೆಗೂ ಸೇಡು ತೀರಿಸುವವನ ದೆಸೆಯಿಂದ ಸಾಯದಂತೆ ಅವು ನಿಮಗೆ ಆಶ್ರಯದ ಪಟ್ಟಣಗಳಾಗಿರಬೇಕು. ಅಧ್ಯಾಯವನ್ನು ನೋಡಿ |
ಈಗ ನೋಡು ಬಳಗದವರೆಲ್ಲರು ನಿನ್ನ ದಾಸಿಯಾದ ನನಗೆ ವಿರೋಧವಾಗಿ ಎದ್ದು ‘ತಮ್ಮನನ್ನು ಕೊಂದವನೆಲ್ಲಿ?, ಅವನನ್ನು ನಮಗೆ ಒಪ್ಪಿಸು. ತಮ್ಮನ ಪ್ರಾಣಕ್ಕಾಗಿ ಅವನ ಪ್ರಾಣವನ್ನೂ ತೆಗೆದುಬಿಟ್ಟು ನಿನ್ನನ್ನು ಬಾಧ್ಯಸ್ಥನಿಲ್ಲದ ಹಾಗೆ ಮಾಡಿಬಿಡುತ್ತೇವೆ’ ಅನ್ನುತ್ತಾರೆ. ಹೀಗೆ ಅವರು ನನಗುಳಿದಿರುವ ಒಂದು ಕೆಂಡವನ್ನೂ ಆರಿಸಿಬಿಟ್ಟು, ನನ್ನ ಗಂಡನ ಹೆಸರನ್ನೂ, ಸಂತಾನವನ್ನೂ ಭೂಲೋಕದ ಮೇಲಿನಿಂದ ಅಳಿಸಬೇಕೆಂದಿದ್ದಾರೆ” ಎಂದು ಉತ್ತರ ಕೊಟ್ಟಳು.