Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 36:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ದೇಶವನ್ನು ಚೀಟುಹಾಕಿ ಇಸ್ರಾಯೇಲರಿಗೆ ಹಂಚಿಕೊಡಬೇಕೆಂದು ಯೆಹೋವನು ಒಡೆಯನಿಗೆ ಆಜ್ಞಾಪಿಸಿ ತರುವಾಯ ನಮ್ಮ ಸ್ವಕುಲದವನಾದ ಚಲ್ಪಹಾದನಿಗೆ ಬರತಕ್ಕ ಸ್ವತ್ತನ್ನು ಅವನ ಹೆಣ್ಣುಮಕ್ಕಳಿಗೆ ಕೊಡಬೇಕು ಎಂದು ಅಪ್ಪಣೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಚೀಟುಹಾಕಿ ನಾಡನ್ನು ಇಸ್ರಯೇಲರಿಗೆ ಹಂಚಿಕೊಡಬೇಕೆಂದು ಸರ್ವೇಶ್ವರ ಸ್ವಾಮಿ ಒಡೆಯರಾದ ತಮಗೆ ಆಜ್ಞಾಪಿಸಿದರು. ತರುವಾಯ ನಮ್ಮ ಸ್ವಕುಲದವನಾದ ಚಲ್ಪಹಾದನಿಗೆ ಬರತಕ್ಕ ಸೊತ್ತನ್ನು ಅವನ ಹೆಣ್ಣು ಮಕ್ಕಳಿಗೆ ಕೊಡಬೇಕೆಂದು ಅಪ್ಪಣೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ದೇಶವನ್ನು ಚೀಟುಹಾಕಿ ಇಸ್ರಾಯೇಲ್ಯರಿಗೆ ಹಂಚಿಕೊಡಬೇಕೆಂದು ಯೆಹೋವನು ಒಡೆಯನಿಗೆ ಆಜ್ಞಾಪಿಸಿ ತರುವಾಯ ನಮ್ಮ ಸ್ವಕುಲದವನಾದ ಚಲ್ಪಹಾದನಿಗೆ ಬರತಕ್ಕ ಸ್ವಾಸ್ತ್ಯವನ್ನು ಅವನ ಹೆಣ್ಣುಮಕ್ಕಳಿಗೆ ಕೊಡಬೇಕೆಂದೂ ಅಪ್ಪಣೆ ಮಾಡಿದನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅವರು, “ಸ್ವಾಮೀ, ಚೀಟುಹಾಕಿ ಇಸ್ರೇಲರಿಗೆ ದೇಶವನ್ನು ಹಂಚಿಕೊಡಬೇಕೆಂದು ಯೆಹೋವನು ನಿಮಗೆ ಆಜ್ಞಾಪಿಸಿದ್ದಾನೆ. ಅದಲ್ಲದೆ ನಮ್ಮ ಸಂಬಂಧಿಕನಾದ ಚಲ್ಪಹಾದನ ಭೂಮಿಯನ್ನು ಅವನ ಹೆಣ್ಣುಮಕ್ಕಳಿಗೆ ಕೊಡಬೇಕೆಂದು ಯೆಹೋವನು ಆಜ್ಞಾಪಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಚೀಟುಹಾಕಿ ನಾಡನ್ನು ಇಸ್ರಾಯೇಲರಿಗೆ ಸೊತ್ತಾಗಿ ಕೊಡುವುದಕ್ಕೆ ಯೆಹೋವ ದೇವರು ನಮ್ಮ ಒಡೆಯನಾದ ನಿನಗೆ ಆಜ್ಞಾಪಿಸಿದರು. ನಮ್ಮ ಸಹೋದರನಾದ ಚಲ್ಪಹಾದನ ಸೊತ್ತನ್ನು ಅವನ ಪುತ್ರಿಯರಿಗೆ ಕೊಡಬೇಕೆಂದು ದೇವರಿಂದ ಅಪ್ಪಣೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 36:2
8 ತಿಳಿವುಗಳ ಹೋಲಿಕೆ  

ನೀವು ಚೀಟುಹಾಕಿ ಆ ದೇಶವನ್ನು ನಿಮ್ಮನಿಮ್ಮ ಕುಟುಂಬಗಳಿಗೆ ಹಂಚಿಕೊಳ್ಳಬೇಕು. ಹೆಚ್ಚು ಮಂದಿಯುಳ್ಳ ಕುಟುಂಬಕ್ಕೆ ಹೆಚ್ಚಾಗಿಯೂ, ಕಡಿಮೆಯಾದ ಕುಟುಂಬಕ್ಕೆ ಕಡಿಮೆಯಾಗಿಯೂ ಸ್ವತ್ತು ದೊರಕಬೇಕು. ಒಂದೊಂದು ಕುಟುಂಬದ ಚೀಟು ಯಾವ ಯಾವ ಸ್ಥಳವನ್ನು ಸೂಚಿಸುವುದೋ ಆ ಸ್ಥಳದಲ್ಲಿಯೇ ಆ ಕುಟುಂಬದ ಸ್ವಾಸ್ತ್ಯವಿರಬೇಕು. ಒಂದೊಂದು ಕುಲದ ಕುಟುಂಬಗಳು ಒಂದೇ ಪ್ರದೇಶದಲ್ಲಿರಬೇಕು.


ಯೋಬನ ಮಕ್ಕಳಷ್ಟು ಸುಂದರಸ್ತ್ರೀಯರು ಆ ದೇಶದಲ್ಲಿ ಎಲ್ಲಿಯೂ ಸಿಕ್ಕುತ್ತಿರಲಿಲ್ಲ. ತಂದೆಯು ಅಣ್ಣತಮ್ಮಂದಿರಿಗೆ ಕೊಟ್ಟ ಹಾಗೆ ಅವರಿಗೂ ಸ್ವತ್ತನ್ನು ಹಂಚಿದನು.


ಒಟ್ಟಾರೆ ಲೆಬನೋನಿನಿಂದ ಮಿಸ್ರೆಫೋತ್ಮಯಿಮಿನವರೆಗೂ, ಚೀದೋನ್ಯರ ಎಲ್ಲಾ ಪರ್ವತ ಪ್ರಾಂತ್ಯಗಳು. ನಾನೇ ಈ ಎಲ್ಲಾ ಜನಾಂಗಗಳನ್ನು ಇಸ್ರಾಯೇಲ್ಯರ ಸಮ್ಮುಖದಿಂದ ಹೊರಡಿಸಿಬಿಡುವೆನು. ನೀನಾದರೂ ನಾನು ಮೊದಲೇ ಆಜ್ಞಾಪಿಸಿದಂತೆ ಇಸ್ರಾಯೇಲ್ಯರಿಗೆ ದೇಶವನ್ನು ಹಂಚಿಕೊಡುವಾಗ ಇವುಗಳನ್ನು ಸೇರಿಸಿ ದೇಶವನ್ನೆಲ್ಲಾ


ಹೀಗಿರಲು ಅವರು ಇಸ್ರಾಯೇಲರ ಬೇರೆ ಕುಲದವರಿಗೆ ಮದುವೆಯಾದ ಪಕ್ಷಕ್ಕೆ ಅವರ ಸ್ವತ್ತು ನಮ್ಮ ಕುಲದಿಂದ ತೆಗೆಯಲ್ಪಟ್ಟು ಅವರು ಸೇರಿಕೊಳ್ಳುವ ಕುಲಕ್ಕೆ ಹೋಗುವುದು. ಆದುದರಿಂದ ನಮ್ಮ ಸ್ವತ್ತಿಗೆ ನಷ್ಟವುಂಟಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು