Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 36:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಹೀಗಿರಲು ಅವರು ಇಸ್ರಾಯೇಲರ ಬೇರೆ ಕುಲದವರಿಗೆ ಮದುವೆಯಾದ ಪಕ್ಷಕ್ಕೆ ಅವರ ಸ್ವತ್ತು ನಮ್ಮ ಕುಲದಿಂದ ತೆಗೆಯಲ್ಪಟ್ಟು ಅವರು ಸೇರಿಕೊಳ್ಳುವ ಕುಲಕ್ಕೆ ಹೋಗುವುದು. ಆದುದರಿಂದ ನಮ್ಮ ಸ್ವತ್ತಿಗೆ ನಷ್ಟವುಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಹೀಗಿರಲು ಆ ಹೆಣ್ಣುಮಕ್ಕಳು ಇಸ್ರಯೇಲರ ಬೇರೆ ಕುಲದವರಿಗೆ ಮದುವೆಯಾದರೆ ಅವರು ಸೇರಿಕೊಳ್ಳುವ ಕುಲಕ್ಕೆ ಹೋಗುತ್ತದೆ. ಇದರಿಂದ ನಮ್ಮ ಸೊತ್ತಿಗೆ ನಷ್ಟ ಉಂಟಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಹೀಗಿರಲು ಅವರು ಇಸ್ರಾಯೇಲ್ಯರ ಬೇರೆ ಕುಲದವರಿಗೆ ಮದುವೆಯಾದ ಪಕ್ಷಕ್ಕೆ ಅವರ ಸ್ವಾಸ್ತ್ಯವು ನಮ್ಮ ಕುಲದಿಂದ ತೆಗೆಯಲ್ಪಟ್ಟು ಅವರು ಸೇರಿಕೊಳ್ಳುವ ಕುಲಕ್ಕೆ ಹೋಗುವದು. ಇದರಿಂದ ನಮ್ಮ ಸ್ವಾಸ್ತ್ಯಕ್ಕೆ ನಷ್ಟವುಂಟಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಹೀಗಿರಲು ಅವರು ಇಸ್ರೇಲರ ಬೇರೆ ಯಾವ ಕುಲದವರನ್ನಾದರೂ ಮದುವೆಯಾದರೆ ಅವರ ಸ್ವಾಸ್ತ್ಯವು ನಮ್ಮ ಪೂರ್ವಿಕರ ಕುಲದಿಂದ ತೆಗೆಯಲ್ಪಟ್ಟು, ಅವರು ಮದುವೆಯ ಮೂಲಕ ಸೇರಿಕೊಳ್ಳುವ ಕುಲಕ್ಕೆ ಹೋಗುವುದು. ಇದರಿಂದ ನಮ್ಮ ಸ್ವಾಸ್ತ್ಯಕ್ಕೆ ನಷ್ಟವುಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದರೆ ಅವರು ಇಸ್ರಾಯೇಲರ ಬೇರೆ ಗೋತ್ರದವರಿಗೆ ಮದುವೆಯಾದರೆ, ಅವರ ಸೊತ್ತು ಅಂದರೆ, ನಮ್ಮ ಪಿತೃಗಳ ಸೊತ್ತಿನಿಂದ ಅವರನ್ನು ಮದುವೆಮಾಡಿಕೊಂಡ ಗೋತ್ರದವರಿಗೆ ಸೊತ್ತು ಹೋಗುತ್ತದೆ. ಇದರಿಂದ ನಮ್ಮ ಸೊತ್ತಿನ ಭಾಗ ಕಡಿಮೆಯಾಗಿ ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 36:3
2 ತಿಳಿವುಗಳ ಹೋಲಿಕೆ  

“ದೇಶವನ್ನು ಚೀಟುಹಾಕಿ ಇಸ್ರಾಯೇಲರಿಗೆ ಹಂಚಿಕೊಡಬೇಕೆಂದು ಯೆಹೋವನು ಒಡೆಯನಿಗೆ ಆಜ್ಞಾಪಿಸಿ ತರುವಾಯ ನಮ್ಮ ಸ್ವಕುಲದವನಾದ ಚಲ್ಪಹಾದನಿಗೆ ಬರತಕ್ಕ ಸ್ವತ್ತನ್ನು ಅವನ ಹೆಣ್ಣುಮಕ್ಕಳಿಗೆ ಕೊಡಬೇಕು ಎಂದು ಅಪ್ಪಣೆಮಾಡಿದನು.


ಇಸ್ರಾಯೇಲರ ಜೂಬಿಲಿ ಸಂವತ್ಸರವು ಬಂದಾಗ ಅವರ ಸ್ವತ್ತು ಅವರು ಸೇರಿಕೊಳ್ಳುವ ಕುಲದ ಸ್ವತ್ತಿಗೆ ಕೂಡಿಕೊಳ್ಳುವುದರಿಂದ ನಮ್ಮ ಕುಲದಿಂದ ತೆಗೆಯಲ್ಪಡುವುದು” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು