ಅರಣ್ಯಕಾಂಡ 36:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಇಸ್ರಾಯೇಲರ ಜೂಬಿಲಿ ಸಂವತ್ಸರವು ಬಂದಾಗ ಅವರ ಸ್ವತ್ತು ಅವರು ಸೇರಿಕೊಳ್ಳುವ ಕುಲದ ಸ್ವತ್ತಿಗೆ ಕೂಡಿಕೊಳ್ಳುವುದರಿಂದ ನಮ್ಮ ಕುಲದಿಂದ ತೆಗೆಯಲ್ಪಡುವುದು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಇಸ್ರಯೇಲರ ಜೂಬಿಲಿ ವರ್ಷವು ಬಂದಾಗ ಅವರ ಸೊತ್ತು ಅವರು ಸೇರಿಕೊಳ್ಳುವ ಕುಲದ ಸೊತ್ತಿಗೆ ಸೇರಿಕೊಳ್ಳುತ್ತದೆ; ನಮ್ಮ ಕುಲದ ಸೊತ್ತಿನಿಂದ ವರ್ಗಾಯಿಸಲ್ಪಡುತ್ತದೆ,” ಎಂದು ಮೊರೆಯಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಇಸ್ರಾಯೇಲ್ಯರ ಜೂಬಿಲಿ ಸಂವತ್ಸರವು ಬಂದಾಗ ಅವರ ಸ್ವಾಸ್ತ್ಯವು ಅವರು ಸೇರಿಕೊಳ್ಳುವ ಕುಲದ ಸ್ವಾಸ್ತ್ಯಕ್ಕೆ ಕೂಡಿಕೊಳ್ಳುವದರಿಂದ ನಮ್ಮ ಕುಲದಿಂದ ತೆಗೆಯಲ್ಪಡುವದು ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಇಸ್ರೇಲರ ಜೂಬಿಲಿ ಸಂವತ್ಸರವು ಬಂದಾಗ ಅವರ ಸ್ವಾಸ್ತ್ಯವು ಅವರು ಸೇರಿಕೊಳ್ಳುವ ಕುಲದ ಸ್ವಾಸ್ತ್ಯಕ್ಕೆ ಕೂಡಿಕೊಳ್ಳುವುದರಿಂದ ನಮ್ಮ ಕುಲದಿಂದ ತೆಗೆಯಲ್ಪಡುವುದು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಇಸ್ರಾಯೇಲರಿಗೆ ಜೂಬಿಲಿ ವರ್ಷ ಬಂದಾಗ ಅವರ ಸೊತ್ತು ಅವರು ಸೇರಿಕೊಳ್ಳುವ ಗೋತ್ರಕ್ಕೆ ಸೇರಿಕೊಳ್ಳುತ್ತದೆ. ಹೀಗೆ ಅವರ ಸೊತ್ತು ಅಂದರೆ, ನಮ್ಮ ಪಿತೃಗಳ ಗೋತ್ರದ ಸೊತ್ತಿನಿಂದ ತೆಗೆಯಲಾಗುವುದು.” ಅಧ್ಯಾಯವನ್ನು ನೋಡಿ |