ಅರಣ್ಯಕಾಂಡ 36:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಹೀಗೆ ಯಾವ ಸ್ವಾಸ್ತ್ಯವೂ ಒಂದು ಕುಲದಿಂದ ಬೇರೊಂದು ಕುಲಕ್ಕೆ ಹೋಗದೆ ಇಸ್ರಾಯೇಲರ ಪ್ರತಿಯೊಂದು ಕುಲವು ತನ್ನ ಸ್ವತ್ತನ್ನು ಹೊಂದಿಕೊಂಡೇ ಇರುವುದು” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಹೀಗೆ ಯಾವ ಸೊತ್ತು ಒಂದು ಕುಲದಿಂದ ಬೇರೊಂದು ಕುಲಕ್ಕೆ ಹೋಗದೆ ಇಸ್ರಯೇಲರ ಪ್ರತಿಯೊಂದು ಕುಲವೂ ತನ್ನ ಸೊತ್ತನ್ನು ಹೊಂದಿರುತ್ತದೆ,” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಹೀಗೆ ಯಾವ ಸ್ವಾಸ್ತ್ಯವೂ ಒಂದು ಕುಲದಿಂದ ಬೇರೊಂದು ಕುಲಕ್ಕೆ ಹೋಗದೆ ಇಸ್ರಾಯೇಲ್ಯರ ಪ್ರತಿಯೊಂದು ಕುಲವು ತನ್ನ ಸ್ವಾಸ್ತ್ಯವನ್ನು ಹೊಂದಿಕೊಂಡೇ ಇರುವದು ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಹೀಗೆ ಯಾವ ಸ್ವಾಸ್ತ್ಯವೂ ಒಂದು ಕುಲದಿಂದ ಬೇರೊಂದು ಕುಲಕ್ಕೆ ಹೋಗದೆ ಇಸ್ರೇಲರ ಪ್ರತಿಯೊಂದು ಕುಲವು ತನ್ನ ಸ್ವಾಸ್ತ್ಯವನ್ನು ಹೊಂದಿಕೊಂಡೇ ಇರುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಒಂದು ಸೊತ್ತು ಒಂದು ಗೋತ್ರದಿಂದ ಮತ್ತೊಂದು ಗೋತ್ರಕ್ಕೆ ಹಸ್ತಾಂತರಗೊಳ್ಳಬಾರದು ಆದರೆ ಇಸ್ರಾಯೇಲರ ಗೋತ್ರಗಳಲ್ಲಿ ಒಬ್ಬೊಬ್ಬನು ತನ್ನ ಸೊತ್ತಿಗೆ ತಾನೇ ಹೊಂದಿಕೊಳ್ಳಬೇಕು,” ಎಂದನು. ಅಧ್ಯಾಯವನ್ನು ನೋಡಿ |
ಯಾವ ಪಾಪಕ್ಕೆ ಕೈಹಾಕಿದೆನು? ನನ್ನ ಅರಸನಾದ ಒಡೆಯನು ದಯವಿಟ್ಟು ತನ್ನ ಸೇವಕನ ಮಾತುಗಳನ್ನು ಲಾಲಿಸಬೇಕು. ನಿನ್ನನ್ನು ನನಗೆ ವಿರೋಧವಾಗಿ ಎಬ್ಬಿಸಿದವನು ಯೆಹೋವನೇ ಆಗಿರುವ ಪಕ್ಷದಲ್ಲಿ, ಆತನಿಗೆ ಘಮಘಮಿಸುವ ನೈವೇದ್ಯವನ್ನು ಅಂಗೀಕರಿಸಬೇಕು. ಮನುಷ್ಯರಾಗಿದ್ದರೆ ಯೆಹೋವನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಿರಲಿ ಯಾಕೆಂದರೆ ಯೆಹೋವನ ಸ್ವತ್ತಿನಲ್ಲಿ ನನಗೆ ಪಾಲು ಸಿಕ್ಕದಂತೆ ‘ಹೋಗಿ ಅನ್ಯದೇವತೆಗಳನ್ನು ಸೇವಿಸು’ ಎಂದು ನನ್ನನ್ನು ತಳ್ಳಿಬಿಟ್ಟರು.