Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 4:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ತರುವಾಯ ಅವರು ಬಂಗಾರದ ಯಜ್ಞವೇದಿಯ ಮೇಲೆ ನೀಲಿಬಟ್ಟೆಯನ್ನು ಹಾಸಿ, ಹಸನಾದ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಅಡ್ಡ ದಂಡಕ್ಕೆ ಕಟ್ಟಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ತರುವಾಯ ಅವರು ಬಂಗಾರದ ವೇದಿಕೆಯ ಮೇಲೆ ನೀಲಿ ಬಟ್ಟೆಯನ್ನು ಹಾಸಿ, ಹಸನಾದ ತೊಗಲನ್ನು ಹೊದಿಸಿ, ಹೊರುವ ಕೋಲುಗಳನ್ನು ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ತರುವಾಯ ಅವರು ಬಂಗಾರದ ವೇದಿಯ ಮೇಲೆ ನೀಲಿಬಟ್ಟೆಯನ್ನು ಹಾಸಿ ಕಡಲು ಹಂದಿಯ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಅವರು ಚಿನ್ನದ ವೇದಿಕೆಯ ಮೇಲೆ ನೀಲಿ ಬಟ್ಟೆಯನ್ನು ಹಾಸಿ, ಶ್ರೇಷ್ಠ ತೊಗಲಿಂದ ಅದನ್ನು ಮುಚ್ಚಬೇಕು. ಬಳಿಕ ಅವರು ಹೊರುವ ಕೋಲುಗಳನ್ನು ವೇದಿಕೆಯ ಬಳೆಗಳಿಗೆ ಸೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ಇದಲ್ಲದೆ ಬಂಗಾರದ ಬಲಿಪೀಠದ ಮೇಲೆ ಅವರು ನೀಲಿವಸ್ತ್ರವನ್ನು ಹಾಸಿ, ಅದನ್ನು ಕಡಲುಹಂದಿಯ ಚರ್ಮಗಳ ಮುಚ್ಚಳದೊಳಗೆ ಮುಚ್ಚಿ, ಅದರ ಕೋಲುಗಳನ್ನು ಸರಿಯಾದ ಸ್ಥಳದಲ್ಲಿ ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 4:11
9 ತಿಳಿವುಗಳ ಹೋಲಿಕೆ  

ಆಜ್ಞಾಶಾಸನಗಳ ಮಂಜೂಷದ ಎದುರಾಗಿ ಚಿನ್ನದ ಧೂಪವೇದಿಯನ್ನು ಇಟ್ಟು ಗುಡಾರದ ಬಾಗಿಲಿನ ಪರದೆಯನ್ನು ಕಟ್ಟಬೇಕು.


ಚಿನ್ನದ ಧೂಪವೇದಿಯನ್ನು, ಅಭಿಷೇಕತೈಲವನ್ನು, ಸುವಾಸನೆಯುಳ್ಳ ಧೂಪವನ್ನು, ಗುಡಾರದ ಬಾಗಿಲಿನ ಪರದೆಯನ್ನು,


ಅನಂತರ ಮತ್ತೊಬ್ಬ ದೇವದೂತನು ಬಂದನು, ಅವನು ಚಿನ್ನದ ಧೂಪಾರತಿ ಹಿಡಿದುಕೊಂಡು ಯಜ್ಞವೇದಿಯ ಬಳಿಯಲ್ಲಿ ನಿಂತನು. ಸಿಂಹಾಸನದ ಮುಂದಣ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧ ಜನರೆಲ್ಲರ ಪ್ರಾರ್ಥನೆಗಳೊಂದಿಗೆ ಸಮರ್ಪಿಸುವುದಕ್ಕಾಗಿ ಅವನಿಗೆ ಬಹಳ ಧೂಪವು ಕೊಡಲ್ಪಟ್ಟಿತು.


ಅದರ ಮೇಲೆ ಹಸನಾದ ತೊಗಲನ್ನೂ ಮತ್ತು ನೀಲಿ ಬಟ್ಟೆಯನ್ನೂ ಹೊದಿಸಿ, ಮಂಜೂಷದ ಬಳೆಗಳಲ್ಲಿ ಹೊರುವ ಕೋಲುಗಳನ್ನು ಸೇರಿಸಬೇಕು.


ನೀಲಿಬಟ್ಟೆಯಿಂದ ಮುಚ್ಚಿಬಿಟ್ಟು ಅದಕ್ಕೂ ಅದರ ಎಲ್ಲಾ ಉಪಕರಣಗಳಿಗೂ ಹಸನಾದ ತೊಗಲನ್ನು ಹೊದಿಸಿ ಅವುಗಳನ್ನು ಅಡ್ಡದಂಡಕ್ಕೆ ಕಟ್ಟಬೇಕು.


ದೇವಸ್ಥಾನದ ಸರ್ವ ಉಪಕರಣಗಳನ್ನೆಲ್ಲಾ ನೀಲಿಬಟ್ಟೆಯಲ್ಲಿ ಇಟ್ಟು, ಹಸನಾದ ತೊಗಲನ್ನು ಹೊದಿಸಿ ಅಡ್ಡ ದಂಡಕ್ಕೆ ಕಟ್ಟಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು