ಅರಣ್ಯಕಾಂಡ 4:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅವರು ಮಹಾಪರಿಶುದ್ಧ ವಸ್ತುಗಳ ಹತ್ತಿರಕ್ಕೆ ಬಂದು ಸಾಯದಂತೆ ನೀವು ಅವರ ವಿಷಯದಲ್ಲಿ ಎಚ್ಚರಿಕೆ ವಹಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಪರಮ ಪವಿತ್ರವಾದ ವಸ್ತುಗಳ ಹತ್ತಿರಕ್ಕೆ ಬರುವಾಗ ಅವರು ಸಾಯದಂತೆ ಎಚ್ಚರಿಕೆ ವಹಿಸಿರಿ. ಆರೋನನು ಮತ್ತು ಅವನ ಮಕ್ಕಳು ಒಳಗೆ ಬಂದು ಅವರವರ ಕೆಲಸಗಳನ್ನು ಹೊರಬೇಕಾದ ಹೊರೆಗಳನ್ನು ಗೊತ್ತುಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅವರು ಮಹಾಪರಿಶುದ್ಧವಸ್ತುಗಳ ಹತ್ತಿರಕ್ಕೆ ಬರುವಾಗ ಸಾಯದಂತೆ ನೀವು ಅವರ ವಿಷಯದಲ್ಲಿ ಮಾಡಬೇಕಾದದ್ದೇನಂದರೆ - ಆರೋನನೂ ಅವನ ಮಕ್ಕಳೂ ಒಳಗೆ ಬಂದು ಅವರವರ ಕೆಲಸಗಳನ್ನೂ ಅವರವರ ಹೊರೆಗಳನ್ನೂ ಗೊತ್ತುಮಾಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಅವರು ಮಹಾಪರಿಶುದ್ಧ ವಸ್ತುಗಳ ಹತ್ತಿರ ಬಂದಾಗ ಸಾಯದಂತೆ ನೀವು ಅವರ ವಿಷಯದಲ್ಲಿ ಮಾಡಬೇಕಾದದ್ದೇನೆಂದರೆ, ಆರೋನನೂ ಅವನ ಪುತ್ರರೂ ಒಳಗೆ ಬಂದು, ಪ್ರತಿಯೊಬ್ಬ ಕೆಹಾತ್ಯನು ಮಾಡಬೇಕಾದ ಕೆಲಸವನ್ನು ಮತ್ತು ಹೊತ್ತುಕೊಂಡು ಹೋಗಬೇಕಾದದ್ದನ್ನು ತೋರಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅವರು ಮಹಾಪರಿಶುದ್ಧ ವಸ್ತುಗಳ ಸಮೀಪಕ್ಕೆ ಬರುವಾಗ, ಅವರು ಸಾಯದೆ ಬದುಕುವ ಹಾಗೆ ಹೀಗೆ ಎಚ್ಚರಿಕೆ ವಹಿಸಬೇಕು: ಆರೋನನೂ ಅವನ ಪುತ್ರರೂ ಒಳಗೆ ಪ್ರವೇಶಿಸಿ, ಅವರಲ್ಲಿ ಒಬ್ಬೊಬ್ಬನನ್ನು ಅವನ ಕೆಲಸಕ್ಕೂ ಅವನ ಹೊರೆಯನ್ನೂ ನೇಮಿಸಬೇಕು. ಅಧ್ಯಾಯವನ್ನು ನೋಡಿ |