Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 4:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವರು ದೇವದರ್ಶನದ ಗುಡಾರದ ಬಟ್ಟೆಗಳನ್ನು ಹೊರಬೇಕು ಅಂದರೆ ಗುಡಾರ, ಅದರ ಹೊದಿಕೆ, ಅದರ ಮೇಲಣ ಹಸನಾದ ಪ್ರಾಣಿಯ ತೊಗಲಿನ ಹೊದಿಕೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅವರು ದೇವದರ್ಶನದ ಗುಡಾರದ ಬಟ್ಟೆಗಳನ್ನು ಹೊರಬೇಕು - ಅಂದರೆ; ಗುಡಾರ ಅದರ ಹೊದಿಕೆ ಅದರ ಮೇಲಿನ ಹಸನಾದ ತೊಗಲಿನ ಹೊದಿಕೆ, ದೇವದರ್ಶನದ ಗುಡಾರದ ಬಾಗಿಲಿನ ಪರದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವರು ದೇವದರ್ಶನದ ಗುಡಾರದ ಬಟ್ಟೆಗಳನ್ನು ಹೊರಬೇಕು; ಅಂದರೆ ಗುಡಾರವು, ಅದರ ಹೊದಿಕೆಯು, ಅದರ ಮೇಲಣ ಕಡಲುಹಂದಿಯ ತೊಗಲಿನ ಹೊದಿಕೆಯು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಅವರು ಪವಿತ್ರ ಗುಡಾರದ ಬಟ್ಟೆಗಳನ್ನು, ದೇವದರ್ಶನಗುಡಾರ ಮತ್ತು ಅದರ ಹೊದಿಕೆ, ಅದರ ಮೇಲಿರುವ ಶ್ರೇಷ್ಠವಾದ ತೊಗಲಿನ ಹೊದಿಕೆ ಮತ್ತು ದೇವದರ್ಶನಗುಡಾರದಲ್ಲಿರುವ ಪ್ರವೇಶದ್ವಾರದ ಪರದೆಯನ್ನು ವರ್ಗಾಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅವರು ಗುಡಾರದ ಪರದೆಗಳನ್ನೂ ದೇವದರ್ಶನ ಗುಡಾರವನ್ನೂ ಅದರ ಹೊದಿಕೆಯನ್ನೂ ಅದರ ಮೇಲಿರುವ ಕಡಲುಹಂದಿಯ ಚರ್ಮಗಳ ಹೊದಿಕೆಯನ್ನೂ ದೇವದರ್ಶನ ಗುಡಾರದ ಬಾಗಿಲಿನ ಪರದೆಯನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 4:25
8 ತಿಳಿವುಗಳ ಹೋಲಿಕೆ  

ಈ ಹೊದಿಕೆಗೆ ಹೊದಿಸುವುದಕ್ಕಾಗಿ ಹದಮಾಡಿರುವ ಕೆಂಪುಬಣ್ಣದ ಟಗರಿನ ತೊಗಲುಗಳಿಂದ ಒಂದು ಮೇಲ್ಹೊದಿಕೆಯನ್ನು ಕಡಲಪ್ರಾಣಿಯ ತೊಗಲುಗಳಿಂದ ಮತ್ತೊಂದು ಮೇಲ್ಹೊದಿಕೆಯನ್ನು ಮಾಡಿಸಬೇಕು.


ಗುಡಾರದ ಮೇಲೆ ಡೇರೆಯ ಬಟ್ಟೆಯನ್ನು ಹಾಸಿ ಆ ಡೇರೆಗೆ ಮೇಲ್ಹೊದಿಕೆಯನ್ನು ಹಾಕಿ ಅದನ್ನು ಮರೆಮಾಡಿದನು. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ಅದನ್ನೆಲ್ಲಾ ಮಾಡಿದನು.


ಆಜ್ಞಾಶಾಸನಗಳಿರುವ ಗುಡಾರವನ್ನೂ ಅದರ ಸಾಮಾನು, ಉಪಕರಣ ಇವುಗಳನ್ನೂ ನೋಡಿಕೊಳ್ಳುವುದಕ್ಕಾಗಿ ಲೇವಿಯರನ್ನು ನೇಮಿಸಬೇಕು. ಅವರು ಆ ಗುಡಾರವನ್ನೂ ಮತ್ತು ಅದರ ಸಾಮಾನುಗಳನ್ನೂ ಹೊರುವುದಕ್ಕಾಗಿ ಇರಬೇಕು. ಅವರು ಅದರ ಸೇವೆಯನ್ನು ಮಾಡುವವರಾಗಿ ಅದರ ಸುತ್ತಲೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.


ಅದರ ಮೇಲೆ ಹಸನಾದ ತೊಗಲನ್ನೂ ಮತ್ತು ನೀಲಿ ಬಟ್ಟೆಯನ್ನೂ ಹೊದಿಸಿ, ಮಂಜೂಷದ ಬಳೆಗಳಲ್ಲಿ ಹೊರುವ ಕೋಲುಗಳನ್ನು ಸೇರಿಸಬೇಕು.


ಸೇವಾಕಾರ್ಯ ಮಾಡುವುದರಲ್ಲಿಯೂ, ಹೊರೆಗಳನ್ನು ಹೊರುವುದರಲ್ಲಿಯೂ ಗೇರ್ಷೋನ್ಯರ ಗೋತ್ರಕುಟುಂಬದವರು ಮಾಡಬೇಕಾದ ಸೇವೆ ಯಾವುದೆಂದರೆ;


ನನ್ನ ನಿವಾಸಕ್ಕಾಗಿ ಒಂದು ಗುಡಾರವನ್ನು ಹತ್ತು ಪರದೆಗಳಿಂದ ಮಾಡಿಸಬೇಕು. ಅವು ನಯವಾಗಿ ಹೊಸೆದ ನಾರಿನ ಬಟ್ಟೆಗಳಾಗಿರಬೇಕು. ಅವುಗಳಲ್ಲಿ ನೀಲಿ, ನೇರಳೆ ಮತ್ತು ಕಡುಗೆಂಪು ವರ್ಣಗಳ ದಾರದಿಂದ ಕೆರೂಬಿಗಳನ್ನು ನೇಯ್ಗೆಯಿಂದ ಕಸೂತಿ ಹಾಕಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು