Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 4:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರನ್ನು ಎಣಿಕೆಮಾಡು, ಅವರು ದೇವದರ್ಶನದ ಗುಡಾರದ ಸೇವೆ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ದೇವದರ್ಶನಗುಡಾರಕ್ಕೆ ಸಂಬಂಧಿಸಿದ ಕೆಲಸವನ್ನು ಮಾಡಲು ಯೋಗ್ಯರಾದ ಮೂವತ್ತರಿಂದ ಐವತ್ತರೊಳಗಿನ ಎಲ್ಲಾ ಪುರುಷರನ್ನು ಲೆಕ್ಕಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಮೂವತ್ತು ವರ್ಷವಾದವರನ್ನೂ, ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಪುರುಷರನ್ನೂ ಅಂದರೆ ಐವತ್ತು ವರ್ಷದವರವರೆಗೆ ದೇವದರ್ಶನ ಗುಡಾರದಲ್ಲಿ ಕೆಲಸ ಮಾಡುವುದಕ್ಕೆ ಬರುವವರನ್ನು ಲೆಕ್ಕಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 4:3
27 ತಿಳಿವುಗಳ ಹೋಲಿಕೆ  

ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರಾಗಿ ದೇವದರ್ಶನದ ಗುಡಾರದ ಸೇವೆಗೆ ಯೋಗ್ಯರಾದವರನ್ನು ಎಣಿಕೆಮಾಡಬೇಕು.


ಅವನು ಹೊಸದಾಗಿ ಸಭೆಯಲ್ಲಿ ಸೇರಿದವನಾಗಿರಬಾರದು, ಅಂಥವನಾದರೆ ಉಬ್ಬಿಕೊಂಡು ಸೈತಾನನಿಗೆ ಪ್ರಾಪ್ತವಾದ ಶಿಕ್ಷಾವಿಧಿಗೆ ಒಳಗಾದಾನು.


ಸಭಾಧ್ಯಕ್ಷನ ಉದ್ಯೋಗವನ್ನು ಪಡೆದುಕೊಳ್ಳಬೇಕೆಂದಿರುವವನು ಒಳ್ಳೆಯ ಕೆಲಸವನ್ನು ಅಪೇಕ್ಷಿಸುವವನಾಗಿದ್ದಾನೆಂಬ ಮಾತು ನಂಬತಕ್ಕದ್ದಾಗಿದೆ.


ಮಗನಾದ ತಿಮೊಥೆಯನೇ, ನಿನ್ನ ವಿಷಯದಲ್ಲಿ ಮೊದಲು ಉಂಟಾಗಿದ್ದ ಪ್ರವಾದನೆಗಳನ್ನು ನೆನಪಿಸಿಕೊಂಡು, ನೀನು ಅವುಗಳಿಂದ ಧೈರ್ಯಹೊಂದಿ ಒಳ್ಳೆಯ ಯುದ್ಧವನ್ನು ನಡೆಸಬೇಕೆಂದು ನಿನಗೆ ಆಜ್ಞಾಪಿಸುತ್ತಿದ್ದೇನೆ.


ಯೇಸು ಉಪದೇಶಮಾಡುವುದಕ್ಕೆ ಪ್ರಾರಂಭಿಸಿದಾಗ ಸುಮಾರು ಮೂವತ್ತು ವರ್ಷದವನಾಗಿದ್ದನು. ಆತನು ಜನರ ಎಣಿಕೆಯಲ್ಲಿ ಯೋಸೇಫನ ಮಗನು. ಯೋಸೇಫನು ಹೇಲಿಯನ ಮಗನು;


ಅವರು ಯೆರೂಸಲೇಮಿನ ದೇವಾಲಯವನ್ನು ತಲುಪಿದ ಎರಡನೆಯ ವರ್ಷದ ಎರಡನೆಯ ತಿಂಗಳಲ್ಲಿ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್, ಯೋಚಾದಾಕನ ಮಗನಾದ ಯೇಷೂವ ಇವರೂ, ಲೇವಿಯರೂ, ಸೆರೆಯಿಂದ ಯೆರೂಸಲೇಮಿಗೆ ಹಿಂತಿರುಗಿ ಬಂದ ಬೇರೆ ಎಲ್ಲರೂ ದೇವಾಲಯವನ್ನು ಕಟ್ಟುವುದಕ್ಕೆ ಪ್ರಾರಂಭಿಸಿ, ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಹೆಚ್ಚು ವಯಸ್ಸುಳ್ಳ ಲೇವಿಯರನ್ನು ಯೆಹೋವನ ಆಲಯದಲ್ಲಿ ಕಟ್ಟುವವರ ಮೇಲ್ವಿಚಾರಣೆಗಾಗಿ ನೇಮಿಸಿದರು.


ಅವರ ಸಹೋದರರಾದ ಇತರ ಲೇವಿಯರು ದೇವಾಲಯದ ಗುಡಾರದ ಸೇವೆಗಾಗಿ ನೇಮಿಸಲ್ಪಟ್ಟರು.


ಇಸ್ರಾಯೇಲರ ದೇವರಾದ ಯೆಹೋವನು ತನ್ನ ಗುಡಾರದ ಸೇವಾಕಾರ್ಯವನ್ನು ಮಾಡುವುದಕ್ಕೂ, ಸರ್ವಸಮೂಹದವರಿಗೋಸ್ಕರ ಸೇವೆಯನ್ನು ಮಾಡುವುದಕ್ಕೂ ನಿಮ್ಮನ್ನು ಹತ್ತಿರ ಬರಮಾಡಿಕೊಂಡು, ಸಮೂಹದವರಿಂದ ನಿಮ್ಮನ್ನು ಪ್ರತ್ಯೇಕಿಸಿದ್ದು ನಿಮಗೆ ಅಲ್ಪವಾಗಿ ತೋರುತ್ತದೋ?


ಅವರು ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳ ದೇವದರ್ಶನದ ಗುಡಾರದ ಸೇವೆ ಮಾಡಲು ಯೋಗ್ಯರಾದವರನ್ನು ಎಣಿಕೆಮಾಡಿದರು.


ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳ ದೇವದರ್ಶನದ ಗುಡಾರದ ಸೇವೆ ಮಾಡಲು ಅರ್ಹರಾದವರನ್ನು ಲೆಕ್ಕಿಸಬೇಕು.


ಯೋಸೇಫನು ಐಗುಪ್ತ ದೇಶದ ಅರಸನಾದ ಫರೋಹನ ಸನ್ನಿಧಿಯಲ್ಲಿ ನಿಂತಾಗ ಮೂವತ್ತು ವರ್ಷದವನಾಗಿದ್ದನು. ಅವನು ಫರೋಹನ ಸನ್ನಿಧಿಯಿಂದ ಹೊರಟು ಐಗುಪ್ತದೇಶದಲ್ಲೆಲ್ಲಾ ಸಂಚಾರಮಾಡಿದನು.


“ನೀನು ಲೇವಿಯರೊಳಗೆ ಕೆಹಾತ್ಯರನ್ನು ಅವರ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಬೇಕು.


ದೇವದರ್ಶನ ಗುಡಾರದ ವಿಷಯದಲ್ಲಿ ಕೆಹಾತ್ಯರು ಮಾಡಬೇಕಾದ ಕೆಲಸ ಯಾವುದೆಂದರೆ; ಅವರು ಮಹಾಪರಿಶುದ್ಧ ವಸ್ತುಗಳನ್ನು ನೋಡಿಕೊಳ್ಳಬೇಕು.


ದಾವೀದನು ಮೂವತ್ತು ವರ್ಷದವನಾದಾಗ ಅರಸನಾಗಿ, ನಲ್ವತ್ತು ವರ್ಷ ಆಳಿದನು.


ಇಸ್ರಾಯೇಲರಲ್ಲಿ ಸೈನಿಕರಾಗಿ ಹೊರಡತಕ್ಕವರನ್ನು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರೆಲ್ಲರನ್ನು ಸೈನ್ಯಸೈನ್ಯವಾಗಿ ನೀನೂ ಆರೋನನೂ ಲೆಕ್ಕಹಾಕಬೇಕು.


ಆಜ್ಞಾಶಾಸನಗಳಿರುವ ಗುಡಾರವನ್ನೂ ಅದರ ಸಾಮಾನು, ಉಪಕರಣ ಇವುಗಳನ್ನೂ ನೋಡಿಕೊಳ್ಳುವುದಕ್ಕಾಗಿ ಲೇವಿಯರನ್ನು ನೇಮಿಸಬೇಕು. ಅವರು ಆ ಗುಡಾರವನ್ನೂ ಮತ್ತು ಅದರ ಸಾಮಾನುಗಳನ್ನೂ ಹೊರುವುದಕ್ಕಾಗಿ ಇರಬೇಕು. ಅವರು ಅದರ ಸೇವೆಯನ್ನು ಮಾಡುವವರಾಗಿ ಅದರ ಸುತ್ತಲೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.


ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರಾಗಿ ದೇವದರ್ಶನದ ಗುಡಾರದ ಸೇವೆ ಮಾಡಲು ಅರ್ಹರಾದವರನ್ನು ಎಣಿಕೆ ಮಾಡಿದರು. ದೇವದರ್ಶನದ ಗುಡಾರದ ಸೇವಕಾರ್ಯವನ್ನು ಮಾಡಲೂ, ಅದರ ಜವಾಬ್ದಾರಿಗಳನ್ನು ನಿರ್ವಹಿಸುವವರನ್ನು ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಿದರು.


ಆ ಪಟ್ಟಿಯಲ್ಲಿ ಗೋತ್ರಗಳಿಗೆ ಅನುಸಾರವಾಗಿಯೂ ಆಯಾ ಉದ್ಯೋಗ ವರ್ಗಗಳಿಗೆ ಅನುಸಾರವಾಗಿಯೂ ಇಪ್ಪತ್ತು ವರ್ಷಕ್ಕಿಂತ ಹೆಚ್ಚು ವಯಸ್ಸುಳ್ಳ ಯಾಜಕರು, ಲೇವಿಯರು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು