Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 4:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದಂಡು ಹೊರಡುವಾಗ, ಆರೋನನೂ ಮತ್ತು ಅವನ ಮಕ್ಕಳೂ ಒಳಗೆ ಬಂದು ಮಹಾಪವಿತ್ರಸ್ಥಾನವನ್ನು ಮರೆಮಾಡುವ ತೆರೆಯನ್ನು ಇಳಿಸಿ ಅದರಿಂದ ಮಂಜೂಷದ ಆಜ್ಞಾಶಾಸನವನ್ನು ಮುಚ್ಚಿಬಿಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ದಂಡು ಹೊರಡುವಾಗ ಆರೋನನು ಮತ್ತು ಅವನ ಮಕ್ಕಳು ಒಳಗೆ ಬಂದು ಗರ್ಭಗುಡಿಯನ್ನು ಮರೆಮಾಡುವ ತೆರೆಯನ್ನು ಇಳಿಸಿ ಅದರಿಂದ ಆಜ್ಞಾಶಾಸನಗಳ ಮಂಜೂಷವನ್ನು ಮುಚ್ಚಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ದಂಡು ಹೊರಡುವಾಗ ಆರೋನನೂ ಅವನ ಮಕ್ಕಳೂ ಒಳಗೆ ಬಂದು [ಮಹಾಪವಿತ್ರಸ್ಥಾನವನ್ನು] ಮರೆಮಾಡುವ ತೆರೆಯನ್ನು ಇಳಿಸಿ ಅದರಿಂದ ಆಜ್ಞಾಶಾಸನಗಳ ಮಂಜೂಷವನ್ನು ಮುಚ್ಚಿಬಿಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಇಸ್ರೇಲರು ಹೊಸ ಸ್ಥಳಕ್ಕೆ ಪ್ರಯಾಣ ಮಾಡುವಾಗ ಆರೋನನೂ ಅವನ ಪುತ್ರರೂ ದೇವದರ್ಶನಗುಡಾರದೊಳಕ್ಕೆ ಹೋಗಿ, ಮಹಾ ಪವಿತ್ರ ಸ್ಥಳವನ್ನು ಮರೆಮಾಡುವ ತೆರೆಯನ್ನು ಇಳಿಸಿ, ಅದನ್ನು ಒಡಂಬಡಿಕೆಯ ಪವಿತ್ರ ಪೆಟ್ಟಿಗೆಗೆ ಹೊದಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಜನರು ಹೊರಡುವಾಗ, ಆರೋನನೂ, ಅವನ ಮಕ್ಕಳೂ ಒಳಗೆ ಹೋಗಿ ಪರದೆಯನ್ನು ಇಳಿಸಿ, ಅದರಿಂದ ಒಡಂಬಡಿಕೆಯ ಮಂಜೂಷವನ್ನು ಮುಚ್ಚಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 4:5
23 ತಿಳಿವುಗಳ ಹೋಲಿಕೆ  

ಮತ್ತು ಎರಡನೆಯ ಪರದೆಯ ಹಿಂದೆ ಇನ್ನೊಂದು ಕೋಣೆಗೆ, ಅತಿ ಪವಿತ್ರ ಸ್ಥಳ ಎಂದು ಕರೆಯಲಾಗುತ್ತಿತು.


ಆಗ ಇಗೋ, ದೇವಾಲಯದ ಪರದೆಯು ಮೇಲಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು; ಭೂಮಿಯು ನಡುಗಿತು;


ಸಮಸ್ತ ಜನಾಂಗಗಳನ್ನು ಮುಚ್ಚಿರುವ ಮುಸುಕನ್ನೂ, ಸಕಲ ದೇಶದವರ ಮೇಲೆ ಹಾಕಿರುವ ತೆರೆಯನ್ನೂ ಇದೇ ಪರ್ವತದಲ್ಲಿ ತೆಗೆದುಹಾಕುವನು.


ಮುಂಭಾಗದಲ್ಲಿ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿ ಇದ್ದವನು ಅಮ್ಮೀನಾದಾಬನ ಮಗನಾದ ನಹಶೋನನು.


ದಂಡು ಹೊರಡುವಾಗ ಆರೋನನೂ ಮತ್ತು ಅವನ ಮಕ್ಕಳೂ ದೇವಸ್ಥಾನದ ಎಲ್ಲಾ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದ ನಂತರ ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು, ಮುಟ್ಟಿದರೆ ಸತ್ತು ಹೋಗುವರು. ದೇವದರ್ಶನದ ಗುಡಾರದ ಸಾಮಾನುಗಳಲ್ಲಿ ಕೆಹಾತ್ಯರು ಹೊರಬೇಕಾದವುಗಳು ಇವೇ.


ಆಜ್ಞಾಶಾಸನಗಳ ಮಂಜೂಷವನ್ನು ಅದರಲ್ಲಿ ಇಟ್ಟು ಆ ಮಂಜೂಷವನ್ನು ಪರದೆಯಿಂದ ಮರೆಮಾಡಬೇಕು.


ನಯವಾಗಿ ಹೊಸೆದ ನಾರಿನ ಪರದೆಯಲ್ಲಿ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದ ಕೆರೂಬಿಗಳಿಗೆ ಚಮತ್ಕಾರವಾಗಿ ಕಸೂತಿಹಾಕಿ ಒಂದು ತೆರೆಯನ್ನು ಮಾಡಿದರು.


ಆಜ್ಞಾಶಾಸನಗಳ ಮಂಜೂಷದ ಎದುರಾಗಿ ಚಿನ್ನದ ಧೂಪವೇದಿಯನ್ನು ಇಟ್ಟು ಗುಡಾರದ ಬಾಗಿಲಿನ ಪರದೆಯನ್ನು ಕಟ್ಟಬೇಕು.


“ನಿನ್ನ ಅಣ್ಣನಾದ ಆರೋನನು ಮನಸ್ಸಿಗೆ ಬಂದಾಗೆಲ್ಲಾ ತೆರೆಯನ್ನು ದಾಟಿ ಮಹಾಪವಿತ್ರವಾದ ಸ್ಥಾನದೊಳಕ್ಕೆ ಮಂಜೂಷದ ಮೇಲಣ ಕೃಪಾಸನದ ಹತ್ತಿರಕ್ಕೆ ಬರಬಾರದೆಂದು ಅವನಿಗೆ ಹೇಳು. ನಾನು ಕೃಪಾಸನದ ಮೇಲೆ ಮೇಘದಲ್ಲಿ ಕಾಣಿಸಿಕೊಳ್ಳುವುದರಿಂದ ಅವನು ನಾಶವಾಗುವನು.


ದೇವದರ್ಶನ ಗುಡಾರದ ವಿಷಯದಲ್ಲಿ ಕೆಹಾತ್ಯರು ಮಾಡಬೇಕಾದ ಕೆಲಸ ಯಾವುದೆಂದರೆ; ಅವರು ಮಹಾಪರಿಶುದ್ಧ ವಸ್ತುಗಳನ್ನು ನೋಡಿಕೊಳ್ಳಬೇಕು.


ಕೆಹಾತ್ಯರಿಗೆ ಮಾತ್ರ ಏನೂ ಕೊಡಲಿಲ್ಲ. ಏಕೆಂದರೆ ಅವರು ದೇವದರ್ಶನ ಗುಡಾರದ ಸಾಮಾನುಗಳನ್ನು ಸಾಗಿಸುವುದೇ ಅವರಿಗೆ ನೇಮಕವಾದ ಕೆಲಸವಾಗಿತ್ತು. ಅವರು ಅವುಗಳನ್ನು ಹೆಗಲಿನ ಮೇಲೆ ಹೊರುತ್ತಿದ್ದರು.


ಮೋಶೆ ಈ ಧರ್ಮಶಾಸ್ತ್ರವನ್ನು ಬರೆದು ಯೆಹೋವನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮತ್ತು ಇಸ್ರಾಯೇಲರ ಹಿರಿಯರ ವಶಕ್ಕೆ ಕೊಟ್ಟನು.


ಬೇತ್ ಷೆಮೆಷಿನವರು ಯೆಹೋವನ ಮಂಜೂಷದಲ್ಲಿ ಇಣಕಿ ನೋಡಿದ್ದರಿಂದ ಯೆಹೋವನು ಅವರಲ್ಲಿ ಎಪ್ಪತ್ತು ಮಂದಿಯನ್ನು ಸಾಯಿಸಿದನು. ಯೆಹೋವನು ತಮ್ಮಲ್ಲಿ ಮಹಾನಾಶನವನ್ನು ಉಂಟುಮಾಡಿದ್ದರಿಂದ ಬೇತ್ ಷೆಮೆಷಿನವರು ಗೋಳಾಡಿದರು.


ಮೋಶೆಯ ಮುಖಾಂತರವಾಗಿ ಕೊಡಲ್ಪಟ್ಟ ಯೆಹೋವನ ಆಜ್ಞಾನುಸಾರವಾಗಿ ಲೇವಿಯರು ದೇವರ ಮಂಜೂಷವನ್ನು ಹೆಗಲ ಮೇಲೆ ಹೊತ್ತುಕೊಂಡು ನಡೆದರು.


ಲೇವಿಯರು ಇನ್ನು ಮುಂದೆ ಆತನ ಗುಡಾರವನ್ನೂ, ಆರಾಧನಾ ಸಾಮಗ್ರಿಗಳನ್ನೂ ಹೊರುವುದು ಅವಶ್ಯವಿಲ್ಲ ಎಂದು ದಾವೀದನು ಈ ಪ್ರಕಾರ ಆಜ್ಞೆ ವಿಧಿಸಿದನು.


ಸೊಲೊಮೋನನು ಪರದೆಯನ್ನು ನೀಲ, ಧೂಮ್ರ, ರಕ್ತವರ್ಣಗಳುಳ್ಳ ನಯವಾದ ನಾರಿನಿಂದ ಮಾಡಿಸಿದನು. ಅದರಲ್ಲಿ ಕೆರೂಬಿಗಳ ಕಸೂತಿಯನ್ನು ಹಾಕಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು