Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 5:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯಾಜಕನು ಮಣ್ಣಿನ ಪಾತ್ರೆಯಲ್ಲಿ ಪರಿಶುದ್ಧ ಜಲವನ್ನು ತೆಗೆದುಕೊಂಡು, ದೇವದರ್ಶನದ ಗುಡಾರದ ನೆಲದಿಂದ ಸ್ವಲ್ಪ ಧೂಳನ್ನು ಆ ನೀರಿನಲ್ಲಿ ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಒಂದು ಮಣ್ಣಿನ ಪಾತ್ರೆಯಲ್ಲಿ ಪರಿಶುದ್ಧ ಜಲವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ನೆಲದಿಂದ ಸ್ವಲ್ಪ ಧೂಳನ್ನು ಆ ನೀರಿನಲ್ಲಿ ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವನು ಮಣ್ಣಿನ ಪಾತ್ರೆಯಲ್ಲಿ ಪರಿಶುದ್ಧಜಲವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ನೆಲದಿಂದ ಸ್ವಲ್ಪ ಧೂಳನ್ನು ಆ ನೀರಿನಲ್ಲಿ ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಬಳಿಕ ಅವನು ಮಣ್ಣಿನ ಪಾತ್ರೆಯಲ್ಲಿ ಸ್ವಲ್ಪ ಪವಿತ್ರ ಜಲವನ್ನು ತೆಗೆದುಕೊಂಡು ಪವಿತ್ರ ಗುಡಾರದ ನೆಲದಿಂದ ಸ್ವಲ್ಪ ಧೂಳನ್ನು ಆ ನೀರಿನಲ್ಲಿ ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ಯಾಜಕನು ಪವಿತ್ರ ನೀರನ್ನು ಮಣ್ಣಿನ ಗಡಿಗೆಗಳಲ್ಲಿ ತೆಗೆದುಕೊಳ್ಳಬೇಕು. ಗುಡಾರದ ನೆಲದಲ್ಲಿರುವ ಧೂಳನ್ನು ಯಾಜಕನು ತೆಗೆದುಕೊಂಡು, ಆ ನೀರಿನೊಳಗೆ ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 5:17
9 ತಿಳಿವುಗಳ ಹೋಲಿಕೆ  

“ಸ್ನಾನಕ್ಕಾಗಿ ಒಂದು ತಾಮ್ರದ ತೊಟ್ಟಿಯನ್ನೂ ಅದಕ್ಕೆ ತಾಮ್ರದ ಪೀಠವನ್ನೂ ಮಾಡಿಸಿ ದೇವದರ್ಶನದ ಗುಡಾರಕ್ಕೂ, ಯಜ್ಞವೇದಿಗೂ ನಡುವೆ ಇಟ್ಟು ಅದರಲ್ಲಿ ನೀರು ತುಂಬಿಸಬೇಕು.


ಅವರು ಆತನನ್ನು ಪರೀಕ್ಷಿಸುವವರಾಗಿ ಆತನ ಮೇಲೆ ತಪ್ಪುಹೊರಿಸಬೇಕೆಂದೇ ಹೀಗೆ ಕೇಳಿದರು. ಆದರೆ ಯೇಸು ಬಗ್ಗಿಕೊಂಡು ಬೆರಳಿನಿಂದ ನೆಲದ ಮೇಲೆ ಬರೆಯುತ್ತಾ ಇದ್ದನು.


ತಿರುಗಿ ಆತನು ಬಗ್ಗಿಕೊಂಡು ಬೆರಳಿನಿಂದ ನೆಲದ ಮೇಲೆ ಬರೆಯುತ್ತಾ ಇದ್ದನು.


ಒಂದು ವೇಳೆ ಯೆಹೋವನಿಂದ ಸುಗತಿಯಾದೀತೆಂಬ ನಿರೀಕ್ಷೆಯಿಂದ ತನ್ನ ಮುಖವನ್ನು ಕೊಳಕಿನ ಮೇಲೆ ಹಾಕಲಿ.


ಯೆಹೋವನೇ, ಇಸ್ರಾಯೇಲರ ನಿರೀಕ್ಷೆಯೇ, ನಿನ್ನನ್ನು ಬಿಟ್ಟುಹೋಗುವವರು ಆಶಾಭಂಗಪಡುವರು. ಯೆಹೋವನಾದ ನಿನ್ನನ್ನು ತೊರೆದವರು ಜೀವಜಲದ ಬುಗ್ಗೆಯನ್ನು ತೊರೆದವರಾಗಿದ್ದಾರೆ; ಅವರ ಹೆಸರು ಧೂಳಿನಲ್ಲಿ ಬರೆಯಲ್ಪಡುವುದು.


ಅವರು ದೂರದಿಂದ ಕಣ್ಣೆತ್ತಿ ನೋಡಿ ಯೋಬನ ಗುರುತನ್ನು ಹಿಡಿಯಲಾರದೆ ಹೋದ ಕಾರಣ ಗಟ್ಟಿಯಾಗಿ ಅತ್ತು ತಮ್ಮ ತಮ್ಮ ಮೇಲಂಗಿಗಳನ್ನು ಹರಿದುಕೊಂಡು, ಮಣ್ಣನ್ನು ಮೇಲಕ್ಕೆ ತೂರಿ ತಮ್ಮ ತಲೆಯ ಮೇಲೆ ಸುರಿದುಕೊಂಡರು.


“‘ಯಾಜಕನು ಅವಳನ್ನು ಕರೆದು ಯೆಹೋವನ ಸಮ್ಮುಖದಲ್ಲಿ ನಿಲ್ಲಿಸಬೇಕು.


ಯಾಜಕನು ಆ ಸ್ತ್ರೀಯನ್ನು ಯೆಹೋವನ ಸಮ್ಮುಖದಲ್ಲಿ ನಿಲ್ಲಿಸಿ, ಅವಳ ತಲೆಯ ಮೇಲಿರುವ ಮುಸುಕನ್ನು ತೆಗೆದು, ಕೂದಲನ್ನು ಕೆದರಿಸಿ ವ್ಯಭಿಚಾರದ ಸಂಶಯವನ್ನು ಸೂಚಿಸುವ ಆ ನೈವೇದ್ಯದ ಹಿಟ್ಟನ್ನು ಅವಳ ಕೈಯಲ್ಲಿ ಇಟ್ಟು, ಶಾಪವನ್ನುಂಟುಮಾಡುವ ವಿಷಕರವಾದ ಆ ನೀರನ್ನು ಯಾಜಕನು ತನ್ನ ಕೈಯಲ್ಲಿ ಹಿಡಿದುಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು