Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 5:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಬಳಿಕ ಯಾಜಕನು ಆ ಸ್ತ್ರೀಯ ಕೈಯಿಂದ ವ್ಯಭಿಚಾರದ ಸಂಶಯ ಸೂಚಕವಾದ ಕಾಣಿಕೆಯನ್ನು ತೆಗೆದುಕೊಂಡು, ಆ ಕಾಣಿಕೆಯನ್ನು ಯೆಹೋವನ ಸಮ್ಮುಖದಲ್ಲಿ ನೈವೇದ್ಯಮಾಡಿ ಯಜ್ಞವೇದಿಯ ಹತ್ತಿರ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆಮೇಲೆ ವ್ಯಭಿಚಾರ ಸಂಶಯ ಸೂಚಕವಾದ ಆ ಹಿಟ್ಟನ್ನು ಅವಳ ಕೈಯಿಂದ ತೆಗೆದುಕೊಂಡ ಯಾಜಕನು ಬಲಿಪೀಠದ ಹತ್ತಿರಕ್ಕೆ ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆಗ ಯಾಜಕನು ಸ್ತ್ರೀಯ ಕೈಯಿಂದ ವ್ಯಭಿಚಾರ ಸಂಶಯ ವಿಷಯವಾದ ಆ ಹಿಟ್ಟನ್ನು ತೆಗೆದುಕೊಂಡು ಯೆಹೋವನ ಮುಂದೆ ನೈವೇದ್ಯವಾಗಿ ನಿವಾಳಿಸಿ ಯಜ್ಞವೇದಿಯ ಹತ್ತಿರ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 “ಯಾಜಕನು ಈರ್ಷೆಯುಳ್ಳ ಗಂಡನ ಧಾನ್ಯಸಮರ್ಪಣೆಯನ್ನು ಆಕೆಯ ಕೈಗಳಿಂದ ತೆಗೆದುಕೊಂಡು ಅದನ್ನು ಯೆಹೋವನ ಮುಂದೆ ಪ್ರತಿಷ್ಠಿಸಿ, ಬಳಿಕ ಅದನ್ನು ವೇದಿಕೆಯ ಮೇಲೆ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಬಳಿಕ ಯಾಜಕನು ಆ ಸ್ತ್ರೀಯ ಕೈಯಿಂದ ಸಂಶಯ ಸೂಚಕ ಕಾಣಿಕೆಯನ್ನು ತೆಗೆದುಕೊಂಡು, ಆ ಕಾಣಿಕೆಯನ್ನು ಯೆಹೋವ ದೇವರ ಸಮ್ಮುಖದಲ್ಲಿ ನೈವೇದ್ಯ ಮಾಡಿ, ಬಲಿಪೀಠದ ಸಮೀಪಕ್ಕೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 5:25
6 ತಿಳಿವುಗಳ ಹೋಲಿಕೆ  

ಅವನು ಅವೆಲ್ಲವುಗಳನ್ನು ಆರೋನನ ಮತ್ತು ಅವನ ಮಕ್ಕಳ ಕೈಗಳಿಗೆ ಕೊಟ್ಟು ನೈವೇದ್ಯವೆಂದು ಸೂಚಿಸುವುದಕ್ಕೆ ಯೆಹೋವನ ಸನ್ನಿಧಿಯಲ್ಲಿ ಅದನ್ನು ನಿವಾಳಿಸಿದನು.


ಯಾಜಕನು ಆ ಸ್ತ್ರೀಯನ್ನು ಯೆಹೋವನ ಸಮ್ಮುಖದಲ್ಲಿ ನಿಲ್ಲಿಸಿ, ಅವಳ ತಲೆಯ ಮೇಲಿರುವ ಮುಸುಕನ್ನು ತೆಗೆದು, ಕೂದಲನ್ನು ಕೆದರಿಸಿ ವ್ಯಭಿಚಾರದ ಸಂಶಯವನ್ನು ಸೂಚಿಸುವ ಆ ನೈವೇದ್ಯದ ಹಿಟ್ಟನ್ನು ಅವಳ ಕೈಯಲ್ಲಿ ಇಟ್ಟು, ಶಾಪವನ್ನುಂಟುಮಾಡುವ ವಿಷಕರವಾದ ಆ ನೀರನ್ನು ಯಾಜಕನು ತನ್ನ ಕೈಯಲ್ಲಿ ಹಿಡಿದುಕೊಳ್ಳಬೇಕು.


ಆಗ ಅವನು ಮಾಡಬೇಕಾದದ್ದೇನೆಂದರೆ, ಆ ಪುರುಷನು ತನ್ನ ಹೆಂಡತಿಯನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು ಮತ್ತು ಅವಳ ಸಂಗತಿಯನ್ನು ವಿಚಾರಿಸುವುದಕ್ಕಾಗಿ ಅವನು ಯಾಜಕನಿಗೆ ಮೂರು ಸೇರು ಜವೆಗೋದಿಯ ಹಿಟ್ಟನ್ನು ಕಾಣಿಕೆಯಾಗಿ ತಂದುಕೊಡಬೇಕು. ಅದು ವ್ಯಭಿಚಾರ ಸಂಶಯವನ್ನು ಸೂಚಿಸುವುದಕ್ಕೂ ಮತ್ತು ಪಾಪವನ್ನು ಹೊರಪಡಿಸುವುದಕ್ಕೂ ಯೆಹೋವನಿಗೆ ನೈವೇದ್ಯವಾದ ಕಾಣಿಕೆಯಾದುದರಿಂದ ಆ ಹಿಟ್ಟಿನ ಮೇಲೆ ಎಣ್ಣೆಯನ್ನು ಹೊಯ್ಯಲೂಬಾರದು, ಧೂಪವನ್ನು ಇಡಲೂಬಾರದು.


ಅವುಗಳನ್ನೆಲ್ಲಾ ಆರೋನನ ಮತ್ತು ಅವನ ಮಕ್ಕಳ ಕೈಗೆ ಕೊಟ್ಟು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ಅರ್ಪಿಸಬೇಕು.


ಶಾಪವನ್ನುಂಟುಮಾಡುವ ವಿಷಕರವಾದ ನೀರನ್ನು ಆ ಸ್ತ್ರೀಗೆ ಕುಡಿಸಬೇಕು. ಆಗ ಶಪಿಸುವ ನೀರು ಅವಳಲ್ಲಿ ಸೇರಿ ವಿಷಕರವಾಗುವುದು.


ಆಗ ಯಾಜಕನು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ಕಾಣಿಕೆಯಿಂದ ಒಂದು ಹಿಡಿಯನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುಟ್ಟು ಆ ನೀರನ್ನು ಸ್ತ್ರೀಗೆ ಕುಡಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು