Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 5:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆದರೆ ಆ ಸ್ತ್ರೀಯು ಪರಿಶುದ್ಧಳಾಗಿ ನಿರಪರಾಧಿಯಾದ ಪಕ್ಷಕ್ಕೆ ಯಾವ ಹಾನಿಯನ್ನು ಅನುಭವಿಸದೆ ಸಂತಾನವನ್ನು ಪಡೆಯುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಆದರೆ ಆಕೆ ದುಷ್ಟಳಾಗಿರದೆ, ನಿರಪರಾಧಿಯಾಗಿದ್ದ ಪಕ್ಷಕ್ಕೆ ಅವಳಿಗೆ ಯಾವ ಹಾನಿಯೂ ಸಂಭವಿಸದೆ ಗರ್ಭವತಿಯಾಗುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆದರೆ ಆ ಸ್ತ್ರೀಯು ದುಷ್ಟಳಾಗಿರದೆ ನಿರಪರಾಧಿಯಾದ ಪಕ್ಷಕ್ಕೆ ಯಾವ ಹಾನಿಯನ್ನೂ ಅನುಭವಿಸದೆ ಗರ್ಭವತಿಯಾಗುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆದರೆ ಅವಳು ತನ್ನ ಗಂಡನಿಗೆ ವಿರುದ್ಧವಾಗಿ ಪಾಪ ಮಾಡದೆ ಶುದ್ಧಳಾಗಿದ್ದರೆ, ಯಾಜಕನು ಅವಳನ್ನು ದೋಷಿಯಲ್ಲವೆಂದು ಹೇಳುವನು. ಆಗ ಅವಳಿಗೆ ಯಾವ ಹಾನಿಯಾಗದೆ, ಇನ್ನೂ ಮಕ್ಕಳನ್ನು ಹೆರಲು ಶಕ್ತಳಾಗಿರುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆದರೆ ಆ ಸ್ತ್ರೀ ಅಶುದ್ಧಳಲ್ಲದೆ ಶುದ್ಧಳಾಗಿದ್ದರೆ, ಅವಳು ನಿರಪರಾಧಿಯಾಗಿದ್ದು ಸಂತಾನವನ್ನು ಪಡೆಯುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 5:28
8 ತಿಳಿವುಗಳ ಹೋಲಿಕೆ  

ನಾಶವಾಗುವಂತಹದ್ದೂ, ಬೆಂಕಿಯಿಂದ ಶೋಧಿಸುವಂತಹದ್ದೂ ಆಗಿರುವ ಬಂಗಾರಕ್ಕಿಂತಲೂ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವಂತಹದ್ದಾಗಿದೆ.


ಹೇಗೆಂದರೆ ಕ್ಷಣಮಾತ್ರವಿರುವ ನಮ್ಮ ಈ ಸ್ವಲ್ಪ ಸಂಕಟವು ಅತ್ಯಂತಾಧಿಕವಾಗಿ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಅತಿಶ್ರೇಷ್ಟ ತೇಜಸ್ಸನ್ನು ದೊರಕಿಸುತ್ತದೆ.


ಬಂಜೆಯು ಮಕ್ಕಳೊಂದಿಗೆ, ಸಂತೋಷದಿಂದ ಮನೆಯಲ್ಲಿ ವಾಸಿಸುವ ಹಾಗೆ ಮಾಡುತ್ತಾನೆ. ಯೆಹೋವನಿಗೆ ಸ್ತೋತ್ರ!


ಯಾಜಕನೂ ಅವಳಿಂದ ಪ್ರಮಾಣಮಾಡಿಸಿ ಹೀಗೆ ಹೇಳಬೇಕು, “ಒಬ್ಬ ಪರಪುರುಷನ ಸಂಗಮಮಾಡದಿದ್ದರೆ, ನಿನ್ನ ಗಂಡನನ್ನು ಬಿಟ್ಟು ನೀನು ಜಾರತ್ವ ಮಾಡದೇ ನಿರಪರಾಧಿಯಾಗಿದ್ದರೆ ಶಪಿಸಲ್ಪಟ್ಟ ವಿಷಕರವಾದ ಈ ನೀರು ನಿನಗೆ ಯಾವ ಹಾನಿಯನ್ನು ಮಾಡುವುದಿಲ್ಲ.


ಅವಳು ಅಶುದ್ಧಳಾಗಿ ಗಂಡನಿಗೆ ದ್ರೋಹಮಾಡಿದವಳಾಗಿದ್ದರೆ ಆ ನೀರನ್ನು ಕುಡಿದ ನಂತರ ಆ ನೀರು ಅವಳೊಳಗೆ ಸೇರಿ ವಿಷವಾಗುವುದರಿಂದ ಅವಳ ಹೊಟ್ಟೆ ಉಬ್ಬುವುದು, ಅವಳ ತೊಡೆಗಳು ಕ್ಷೀಣವಾಗಿ ಹೋಗುವವು. ಆಗ ಆ ಸ್ತ್ರೀಯು ತನ್ನ ಜನರ ಮಧ್ಯದಲ್ಲಿ ಶಾಪಗ್ರಸ್ತಳಾಗುವಳು.


ಒಬ್ಬ ಹೆಂಡತಿ ತನ್ನ ಗಂಡನನ್ನು ಬಿಟ್ಟು ಜಾರತ್ವಮಾಡಿ ಅಶುದ್ಧಳಾದರೆ ಇಂತಹ ವ್ಯಭಿಚಾರದ ಸಂಶಯವನ್ನು ಪರಿಹರಿಸುವ ನಿಯಮ ಇದೇ.


ಯಾವನಾದರೂ ತಾನು ಮದುವೆಮಾಡಿಕೊಂಡ ಸ್ತ್ರೀಯಲ್ಲಿ ಏನೋ ಅವಲಕ್ಷಣವನ್ನು ಕಂಡು ಅವಳಲ್ಲಿ ಸಂತೋಷಪಡದೆ ಇದ್ದರೆ ಅವನು ತ್ಯಾಗಪತ್ರವನ್ನು ಬರೆದುಕೊಟ್ಟು ಅವಳನ್ನು ಮನೆಯಿಂದ ಕಳುಹಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು