Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 5:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅಂಥವರು ಗಂಡಸರೇ ಆಗಲಿ ಅಥವಾ ಹೆಂಗಸರೇ ಆಗಲಿ, ಅವರೆಲ್ಲರನ್ನೂ ಪಾಳೆಯದಿಂದ ಹೊರಗೆಹಾಕಬೇಕು. ನಾನೇ ಅವರ ಪಾಳೆಯದಲ್ಲಿ ವಾಸವಾಗಿರುವುದರಿಂದ ಅವರು ಅದನ್ನು ಅಪವಿತ್ರ ಮಾಡಬಾರದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅಂಥವರು ಗಂಡಸರೇ ಆಗಿರಲಿ, ಹೆಂಗಸರೇ ಆಗಿರಲಿ, ಅವರೆಲ್ಲರನ್ನು ಪಾಳೆಯದಿಂದ ಹೊರಡಿಸಬೇಕು. ನಾನೇ ವಾಸವಾಗಿರುವ ಪಾಳೆಯವನ್ನು ಅವರು ಅಪವಿತ್ರಗೊಳಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಪಾಳೆಯದಿಂದ ಹೊರಡಿಸಬೇಕೆಂದು ಇಸ್ರಾಯೇಲ್ಯರಿಗೆ ಆಜ್ಞಾಪಿಸು. ಅಂಥವರು ಗಂಡಸರೇ ಆಗಲಿ ಹೆಂಗಸರೇ ಆಗಲಿ, ಅವರೆಲ್ಲರನ್ನೂ ಪಾಳೆಯದಿಂದ ಹೊರಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅಂಥವರು ಗಂಡಸರೇ ಆಗಲಿ ಹೆಂಗಸರೇ ಆಗಲಿ ಅವರೆಲ್ಲರನ್ನೂ ಪಾಳೆಯದಿಂದ ಹೊರಡಿಸಬೇಕು. ನಾನೇ ಅವರ ಪಾಳೆಯದಲ್ಲಿ ವಾಸಮಾಡುವುದರಿಂದ ಅವರು ಅದನ್ನು ಅಪವಿತ್ರ ಮಾಡಬಾರದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಸ್ತ್ರೀ ಪುರುಷವೆಂಬ ವ್ಯತ್ಯಾಸವಿಲ್ಲದೆ ಎಲ್ಲರನ್ನು ಹೊರಹಾಕಬೇಕು. ನಾನು ಅವರ ಮಧ್ಯದಲ್ಲಿ ವಾಸಮಾಡುವ ಪಾಳೆಯವನ್ನು ಅವರು ಅಶುದ್ಧ ಮಾಡದ ಹಾಗೆ ನೀವು ಅವರನ್ನು ಪಾಳೆಯದ ಹೊರಗೆ ಕಳುಹಿಸಬೇಕು,” ಎಂಬುದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 5:3
23 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಕಾಪಾಡುವುದಕ್ಕೂ, ಶತ್ರುಗಳನ್ನು ನಿಮ್ಮ ಕೈವಶಮಾಡುವುದಕ್ಕೂ ನಿಮ್ಮ ಪಾಳೆಯದೊಳಗೆ ಸಂಚಾರಮಾಡುತ್ತಾನಲ್ಲಾ; ಆದುದರಿಂದ ಪಾಳೆಯವು ನಿಮರ್ಲವಾಗಿರಬೇಕು; ನಿಮ್ಮಲ್ಲಿ ಅಶುದ್ಧವೇನಾದರೂ ಕಂಡುಬಂದರೆ ಆತನು ನಿಮ್ಮನ್ನು ಬಿಟ್ಟುಹೋದಾನು.


ಅದರಲ್ಲಿ ಅಶುದ್ಧವಾದದ್ದೊಂದು ಸೇರುವುದಿಲ್ಲ. ಅವಮಾನವಾದದ್ದಾಗಲಿ ವಂಚನೆಯಾಗಲಿ ಮಾಡುವವನು ಅದರೊಳಗೆ ಪ್ರವೇಶಿಸಲಾರನು. ಆದರೆ ಯಜ್ಞದ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆಯಲ್ಪಟ್ಟಿವೆಯೋ ಅವರು ಮಾತ್ರ ಸೇರುವರು.


ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, “ಇಗೋ ದೇವರ ನಿವಾಸವು ಮನುಷ್ಯರೊಂದಿಗೆ ಇದೆ. ಆತನು ಅವರೊಡನೆ ವಾಸಮಾಡುವನು. ಅವರು ಆತನಿಗೆ ಪ್ರಜೆಗಳಾಗಿರುವರು. ದೇವರು ತಾನೇ ಅವರ ಸಂಗಡ ಇರುವನು ಮತ್ತು ಅವರ ದೇವರಾಗಿರುವನು.


ಸಭೆಯಲ್ಲಿ ಭಿನ್ನಭೇದಗಳನ್ನುಂಟುಮಾಡುವ ಮನುಷ್ಯನನ್ನು ಒಂದೆರಡು ಸಾರಿ ಬುದ್ಧಿ ಹೇಳಿದ ಮೇಲೆ ಬಿಟ್ಟು ಬಿಡು;


ಸಹೋದರರೇ, ನಾವು ಬೋಧಿಸಿದ ಸಂಪ್ರದಾಯವನ್ನು ಅನುಸರಿಸದೆ ಸೋಮಾರಿಯಾಗಿ ಜೀವಿಸುವ ಪ್ರತಿಯೊಬ್ಬ ಸಹೋದರನಿಂದ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮಗೆ ಆಜ್ಞಾಪಿಸುತ್ತೇವೆ.


ಚೀಯೋನಿನ ನಿವಾಸಿಗಳೇ, ಉತ್ಸಾಹ ಧ್ವನಿಮಾಡಿರಿ; ಜಯಘೋಷಮಾಡಿರಿ. ಇಸ್ರಾಯೇಲರ ಪರಿಶುದ್ಧನು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ” ಎಂಬುದೇ.


ನೀನು ಜಯಿಸಿದ ಬಹು ಜನರನ್ನು ಸೆರೆಹಿಡಿದುಕೊಂಡು ಹೋಗಿ, ನಿನಗೆ ದ್ರೋಹಿಗಳಾದ ಮನುಷ್ಯರಿಂದಲೇ ಕಪ್ಪಗಳನ್ನು ಸಂಗ್ರಹಿಸಿ, ದೇವನಾದ ಯಾಹುವು ಅಲ್ಲೇ ವಾಸಿಸುವಂತೆ, ಉನ್ನತಸ್ಥಾನಕ್ಕೆ ಏರಿದ್ದೀ.


ಸ್ತಂಭಗಳ ಮೇಲಿರುವ ತೊಲೆಗಳ ಮೇಲೆ ದೇವದಾರಿನ ಹಲಿಗೆಗಳಿಂದ ಮಾಡಿದ ಮಾಳಿಗೆಯಿತ್ತು. ಸ್ತಂಭಗಳು ಪ್ರತಿಯೊಂದು ಸಾಲಿನಲ್ಲಿ ಹದಿನೈದರಂತೆ ಒಟ್ಟು ನಲ್ವತ್ತೈದು ಇದ್ದವು.


ನೀವು ವಾಸಿಸುವ ದೇಶವನ್ನು ಅಪವಿತ್ರಮಾಡಬಾರದು. ಯೆಹೋವನೆಂಬ ನಾನೇ ಇಸ್ರಾಯೇಲರ ಮಧ್ಯದಲ್ಲಿ ವಾಸಿಸುತ್ತೇನೆ.’”


ಅಶುದ್ಧನಿಗೆ ಸೋಂಕಿದ ವಸ್ತು ಯಾವುದೇ ಆಗಲಿ ಅಶುದ್ಧವೆಂದು ನೀವು ತಿಳಿದುಕೊಳ್ಳಬೇಕು. ಅದು ಯಾರಿಗೆ ಸೋಂಕುವುದೋ ಅವನೂ ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು.”


“ನಾನು ಅವರ ಮಧ್ಯದಲ್ಲಿ ವಾಸಮಾಡುವುದಕ್ಕೆ ನನಗೆ ಒಂದು ಗುಡಾರವನ್ನು ಕಟ್ಟಿಸಬೇಕು.


ನಾನು ಇಸ್ರಾಯೇಲರ ಮಧ್ಯದಲ್ಲಿ ವಾಸವಾಗಿದ್ದು ಅವರಿಗೆ ದೇವರಾಗಿರುವೆನು.


ಆಗ ಶುದ್ಧಮಾಡಿಸಿಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು, ಸರ್ವಾಂಗಕ್ಷೌರ ಮಾಡಿಸಿಕೊಂಡು ಸ್ನಾನಮಾಡಿದ ಮೇಲೆ ಶುದ್ಧನಾಗುವನು; ತರುವಾಯ ಅವನು ಪಾಳೆಯದೊಳಗೆ ಬರಬಹುದು; ಆದರೂ ಏಳು ದಿನಗಳ ತನಕ ತನ್ನ ಡೇರೆಯ ಹೊರಗೆ ಇರಬೇಕು.


ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಹಾಗೆಯೇ ಮಾಡಿದರು. ಇಸ್ರಾಯೇಲರು ಯೆಹೋವನಿಗೆ ವಿಧೇಯರಾಗಿ ಅಶುದ್ಧರಾದವರನ್ನೆಲ್ಲಾ ಪಾಳೆಯದಿಂದ ಹೊರಗೆ ಕಳುಹಿಸಿದರು.


ಅವರು ಒಟ್ಟಾಗಿ ಕೂಡಿಕೊಂಡು ಮೋಶೆ ಮತ್ತು ಆರೋನರ ಬಳಿಗೆ ಬಂದು ಅವರಿಗೆ, “ನೀವು ಹೆಚ್ಚು ಅಧಿಕಾರ ನಡೆಸುತ್ತೀರಿ. ಈ ಸಮೂಹದವರಲ್ಲಿ ಪ್ರತಿಯೊಬ್ಬನು ದೇವರಿಗೆ ಪ್ರತಿಷ್ಠಿತನಾದವನು, ಯೆಹೋವನು ಇವರೆಲ್ಲರ ಮಧ್ಯದಲ್ಲಿ ಇದ್ದಾನೆ. ಹೀಗಿರಲಾಗಿ ಯೆಹೋವನ ಸಮೂಹದವರಿಗಿಂತಲೂ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದು ಏಕೆ?” ಎಂದು ಕೇಳಿದರು.


“‘ಇಸ್ರಾಯೇಲರು ಅಶುದ್ಧತೆಗೆ ದೂರವಾಗಿರುವಂತೆ ನೀವು ಅವರನ್ನು ಈ ರೀತಿಯಾಗಿ ಕಾಪಾಡಬೇಕು. ಅವರು ಅಪವಿತ್ರರಾಗಿದ್ದು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಹೊಲೆಮಾಡಿದರೆ ನಾಶವಾಗುವರು.


ತಪ್ಪಿಸಿಕೊಂಡ ಗುಲಾಮನು ನಿಮ್ಮಲ್ಲಿರುವುದಕ್ಕೆ ಬಂದರೆ ಅವನನ್ನು ಅವನ ದಣಿಗೆ ಪುನಃ ವಶಪಡಿಸಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು