Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 5:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ಆದರೆ ದಂಡವನ್ನು ತೆಗೆದುಕೊಳ್ಳುವವನು ಮೃತನಾಗಿ ಅವನ ಸಂಬಂಧಿಕರು ಯಾರೂ ಇಲ್ಲದಿದ್ದರೆ, ಆ ದ್ರವ್ಯವು ಯೆಹೋವನಿಗೆ ಸೇರಬೇಕು. ಆ ದ್ರವ್ಯ ಮತ್ತು ದೋಷಪರಿಹಾರಕ್ಕಾಗಿ ಸಮರ್ಪಿಸಲ್ಪಡುವ ಪ್ರಾಯಶ್ಚಿತ್ತದ ಟಗರು ಈ ಎರಡೂ ಯಾಜಕನಿಗೆ ಸೇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ದಂಡವನ್ನು ತೆಗೆದುಕೊಳ್ಳ ತಕ್ಕವನು ತೀರಿಹೋಗಿ ಬಾಧ್ಯಸ್ಥನೂ ಇಲ್ಲದ ಪಕ್ಷಕ್ಕೆ ಆ ದ್ರವ್ಯ ಸರ್ವೇಶ್ವರನಿಗೆ ಸೇರಬೇಕು. ಅದು ಮತ್ತು ದೋಷಪರಿಹಾರಕ್ಕಾಗಿ ಅರ್ಪಿಸಲ್ಪಡುವ ಪ್ರಾಯಶ್ಚಿತ್ತ ಬಲಿಪ್ರಾಣಿಯಾದ ಟಗರು ಇವೆರಡೂ ಯಾಜಕನಿಗೆ ಸೇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ದಂಡವನ್ನು ತೆಗೆದುಕೊಳ್ಳತಕ್ಕವನು [ತೀರಿಹೋಗಿ] ಬಾಧ್ಯನೂ ಇಲ್ಲದ ಪಕ್ಷಕ್ಕೆ ಆ ದ್ರವ್ಯವು ಯೆಹೋವನಿಗೆ ಸೇರಬೇಕು. ಅದು ಮತ್ತು ದೋಷಪರಿಹಾರಕ್ಕಾಗಿ ಸಮರ್ಪಿಸಲ್ಪಡುವ ಪ್ರಾಯಶ್ಚಿತ್ತಯಜ್ಞದ ಟಗರು ಈ ಎರಡೂ ಯಾಜಕನಿಗೆ ಆಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ದಂಡವನ್ನು ತೆಗೆದುಕೊಳ್ಳತಕ್ಕವನು ತೀರಿಹೋಗಿ, ಹತ್ತಿರ ಸಂಬಂಧಿಯೂ ಇಲ್ಲದ ಪಕ್ಷಕ್ಕೆ, ಆ ದ್ರವ್ಯವನ್ನು ಯೆಹೋವನಿಗೆ ಕೊಡಬೇಕು. ಅವನು ಯಾಜಕನಿಗೆ ಪೂರ್ಣ ಬೆಲೆಯನ್ನು ಕೊಡಬೇಕು. ತಪ್ಪು ಮಾಡಿದವನು ಯಾಜಕನಿಗೆ ಒಂದು ಟಗರನ್ನೂ ತಂದುಕೊಡಬೇಕು. ಈ ಟಗರನ್ನು ತಪ್ಪುಮಾಡಿದವನ ಪ್ರಾಯಶ್ಚಿತ್ತಕ್ಕಾಗಿ ಯಜ್ಞಮಾಡಬೇಕು. ಆದರೆ ಉಳಿದದ್ದನ್ನು ಯಾಜಕನು ಇಟ್ಟುಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದರೆ ಅಪರಾಧಕ್ಕೆ ಬದಲು ಕೊಡುವುದಕ್ಕೆ ಆ ಮನುಷ್ಯನಿಗೆ ಸಂಬಂಧಿಕನು ಇಲ್ಲದಿದ್ದರೆ ಅದು ಯೆಹೋವ ದೇವರಿಗೆ ಸೇರಬೇಕು. ಅದು ದೋಷಪರಿಹಾರಕ್ಕಾಗಿ ಅರ್ಪಿಸಲಾಗುವ ಪ್ರಾಯಶ್ಚಿತ್ತದ ಟಗರು, ಇವೆರಡೂ ಯಾಜಕನಿಗೆ ಸೇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 5:8
8 ತಿಳಿವುಗಳ ಹೋಲಿಕೆ  

ಪ್ರಾಯಶ್ಚಿತ್ತಯಜ್ಞದ ಹೋಮಶೇಷದ ವಿಷಯದಲ್ಲಿಯೂ ಮತ್ತು ದೋಷಪರಿಹಾರಕ ಯಜ್ಞದ ಹೋಮಶೇಷದ ವಿಷಯದಲ್ಲಿಯೂ ಒಂದೇ ನಿಯಮಯುಂಟು; ಹೇಗೆಂದರೆ ಆ ಹೋಮಶೇಷವು ದೋಷಪರಿಹಾರವನ್ನು ಮಾಡಿಸುವ ಯಾಜಕನಿಗೆ ಸಲ್ಲತಕ್ಕದ್ದು.


ಅವನು ತಾನು ಅನ್ಯಾಯವಾಗಿ ಇಟ್ಟುಕೊಂಡಿರುವ ದೇವರ ಪವಿತ್ರ ವಸ್ತುಗಳನ್ನು ಮಾತ್ರವಲ್ಲದೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಯಾಜಕನಿಗೆ ತಂದುಕೊಡಬೇಕು. ಅವನು ಪ್ರಾಯಶ್ಚಿತ್ತಕ್ಕಾಗಿ ತಂದ ಟಗರಿನಿಂದ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು.


ಬೇರೆ ಯಾವುದರ ವಿಷಯದಲ್ಲಿ ಅವನು ಸುಳ್ಳಾಣೆಯಿಟ್ಟನೋ ಅದನ್ನು ಪೂರ್ತಿಯಾಗಿ ತಂದುಕೊಡಬೇಕಲ್ಲದೆ, ಐದನೆಯ ಒಂದು ಪಾಲನ್ನು ಹೆಚ್ಚಾಗಿ ಕೊಡಬೇಕು. ಅವನು ಪ್ರಾಯಶ್ಚಿತ್ತಯಜ್ಞವನ್ನು ಮಾಡುವ ದಿನದಲ್ಲೇ ಅದನ್ನು ನ್ಯಾಯವಾದ ಅದರ ಒಡೆಯನಿಗೆ ಹಿಂದಕ್ಕೆ ಕೊಡಬೇಕು.


ಅಂಥವರು ತಮ್ಮ ಅಪರಾಧವನ್ನು ಅರಿಕೆಮಾಡಬೇಕು. ಅದಲ್ಲದೆ ಅಪರಾಧ ಮಾಡಿದವನು ನಷ್ಟಪಟ್ಟವನಿಗೆ ಮೂಲದ್ರವ್ಯದ ಬೆಲೆಗೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಸೇರಿಸಿ ಕೊಡಬೇಕು.


ಇಸ್ರಾಯೇಲರು ಪರಿಶುದ್ಧವಾದ ವಸ್ತುಗಳಿಂದ ಪ್ರತ್ಯೇಕಿಸಿ ತರುವ ಕಾಣಿಕೆಗಳೆಲ್ಲಾ ಯಾಜಕನಿಗೇ ಸಲ್ಲಬೇಕು.


ಅಪರಾಧ ಪ್ರಾಯಶ್ಚಿತ್ತಕ್ಕಾಗಿಯೂ, ದೋಷಪರಿಹಾರಕ್ಕಾಗಿಯೂ ತರಲ್ಪಟ್ಟ ಹಣವು ಯಾಜಕರ ಪಾಲಿಗೆ ಸೇರುತ್ತಿತ್ತು. ಅದು ಯೆಹೋವನ ಆಲಯಕ್ಕೆ ಸೇರುತ್ತಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು