ಅರಣ್ಯಕಾಂಡ 6:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅವನು ಎಷ್ಟು ದಿನಗಳವರೆಗೆ ತನ್ನನ್ನು ಪ್ರತಿಷ್ಠಿಸಿಕೊಂಡಿದ್ದಾನೋ, ಅಷ್ಟು ದಿನಗಳವರೆಗೆ ಹೊಸದಾಗಿ ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಳ್ಳಬೇಕು ಮತ್ತು ಪ್ರಾಯಶ್ಚಿತ್ತಯಜ್ಞವಾಗಿ ಒಂದು ವರ್ಷದ ಕುರಿಮರಿಯನ್ನು ಸಮರ್ಪಿಸಬೇಕು. ಮೊದಲು ಮಾಡಿದ್ದ ಹರಕೆಗೆ ವಿಘ್ನಪ್ರಾಪ್ತವಾದುದರಿಂದ ಕಳೆದುಹೋದ ದಿನಗಳು ವ್ಯರ್ಥವಾದುದೆಂದು ಪರಿಗಣಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅವನು ಎಷ್ಠು ದಿನಗಳವರೆಗೆ ತನ್ನನ್ನು ಪ್ರತಿಷ್ಠಿಸಿಕೊಂಡಿದ್ದನೋ ಅಷ್ಟು ದಿನಗಳವರೆಗೆ ಹೊಸದಾಗಿ ತನ್ನನ್ನು ಸರ್ವೇಶ್ವರನಿಗೆ ಪ್ರತಿಷ್ಠಿಸಿಕೊಳ್ಳಬೇಕು. ಅದಲ್ಲದೆ ಪ್ರಾಯಶ್ಚಿತ್ತ ಬಲಿಯಾಗಿ ಒಂದು ವರ್ಷದ ಕುರಿಯನ್ನು ಸಮರ್ಪಿಸಬೇಕು. ಮೊದಲು ಮಾಡಿದ್ದ ವ್ರತಕ್ಕೆ ವಿಘ್ನಪ್ರಾಪ್ತವಾದ್ದರಿಂದ ಕಳೆದುಹೋದ ದಿನಗಳು ವ್ಯರ್ಥವಾದುವೆಂದು ಪರಿಗಣಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅವನು ಎಷ್ಟು ದಿನಗಳವರೆಗೆ ತನನ್ನು ಪ್ರತಿಷ್ಠಿಸಿಕೊಂಡಿದ್ದನೋ ಅಷ್ಟು ದಿನಗಳವರೆಗೆ ಹೊಸದಾಗಿ ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಳ್ಳಬೇಕು; ಮತ್ತು ಪ್ರಾಯಶ್ಚಿತ್ತಯಜ್ಞವಾಗಿ ಒಂದು ವರುಷದ ಕುರಿಯನ್ನು ಸಮರ್ಪಿಸಬೇಕು. ಮೊದಲು ಮಾಡಿದ್ದ ಹರಕೆಗೆ ವಿಘ್ನಪ್ರಾಪ್ತವಾದದರಿಂದ ಕಳೆದುಹೋದ ದಿನಗಳು ವ್ಯರ್ಥವಾದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅವನು ಮತ್ತೊಮ್ಮೆ ನಿರ್ದಿಷ್ಟ ಕಾಲದವರೆಗೆ ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಳ್ಳಬೇಕೆಂಬುದೇ ಇದರರ್ಥ. ಅವನು ಒಂದು ವರ್ಷದ ಕುರಿಮರಿಯನ್ನು ತಂದು ಅದನ್ನು ದೋಷಪರಿಹಾರಕ ಯಜ್ಞಕ್ಕಾಗಿ ಕೊಡಬೇಕು. ಶವವು ಅವನನ್ನು ಅಶುದ್ಧನನ್ನಾಗಿ ಮಾಡಿದ್ದರಿಂದ ಮೊದಲಿನ ದಿನಗಳು ಲೆಕ್ಕಿಸಲ್ಪಡುವುದಿಲ್ಲ. ಅವನು ಮತ್ತೊಮ್ಮೆ ಪ್ರತಿಷ್ಠೆಯನ್ನು ಹೊಸದಾಗಿ ಆರಂಭಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಎಷ್ಟು ದಿನಗಳವರೆಗೆ ತಮ್ಮನ್ನು ಪ್ರತಿಷ್ಠಿಸಿಕೊಂಡಿದ್ದಾರೋ, ಅಷ್ಟು ದಿನಗಳವರೆಗೆ ಹೊಸದಾಗಿ ತಮ್ಮನ್ನು ಯೆಹೋವ ದೇವರಿಗೆ ಪ್ರತಿಷ್ಠಿಸಿಕೊಳ್ಳಬೇಕು ಮತ್ತು ಪ್ರಾಯಶ್ಚಿತ್ತ ಬಲಿಯಾಗಿ ಒಂದು ವರ್ಷದ ಕುರಿಮರಿಯನ್ನು ಸಮರ್ಪಿಸಬೇಕು. ಅವರ ಸಮರ್ಪಣೆಯ ಅವಧಿಯಲ್ಲಿ ಅವರು ಅಶುದ್ಧವಾದುದರಿಂದ ಮೊದಲಿನ ದಿವಸಗಳು ವ್ಯರ್ಥವಾದುವೆಂದು ಪರಿಗಣಿಸಬೇಕು. ಅಧ್ಯಾಯವನ್ನು ನೋಡಿ |