Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 6:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಹೋವನಿಗೆ ಸಮರ್ಪಿಸಬೇಕಾದ ಕಾಣಿಕೆಗಳು ಯಾವುವೆಂದರೆ: ಅವನು ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಪೂರ್ಣಾಂಗವಾದ ಒಂದು ವರ್ಷದ ಟಗರಿನ ಮರಿಯನ್ನು, ದೋಷಪರಿಹಾರ ಯಜ್ಞಕ್ಕಾಗಿ ದೋಷವಿಲ್ಲದ ಪೂರ್ಣಾಂಗವಾದ ಒಂದು ವರ್ಷದ ಹೆಣ್ಣು ಕುರಿಮರಿಯನ್ನು, ಸಮಾಧಾನಯಜ್ಞಕ್ಕಾಗಿ ದೋಷವಿಲ್ಲದ ಪೂರ್ಣಾಂಗವಾದ ಟಗರನ್ನು ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ದಹನಬಲಿಗಾಗಿ ಕಳಂಕರಹಿತವಾದ ಒಂದು ವರ್ಷದ ಟಗರು, ಪಾಪಪರಿಹಾರ ಬಲಿಗಾಗಿ ಕಳಂಕರಹಿತವಾದ ಒಂದು ವರ್ಷದ ಕುರಿ, ಸಮಾಧಾನ ಬಲಿಗಾಗಿ ಕಳಂಕರಹಿತವಾದ ಒಂದು ಟಗರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಸರ್ವಾಂಗಹೋಮಕ್ಕಾಗಿ ಪೂರ್ಣಾಂಗವಾದ ಒಂದು ವರುಷದ ಟಗರು, ದೋಷಪರಿಹಾರಕಯಜ್ಞಕ್ಕಾಗಿ ಪೂರ್ಣಾಂಗವಾದ ಒಂದು ವರುಷದ ಕುರಿ, ಸಮಾಧಾನಯಜ್ಞಕ್ಕಾಗಿ ಪೂರ್ಣಾಂಗವಾದ ಟಗರು ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೋವನಿಗೆ ತನ್ನ ಸಮರ್ಪಣೆಯನ್ನು ಮಾಡಬೇಕು. ಅವನು ಸಮರ್ಪಿಸಬೇಕಾದದು ಯಾವುವೆಂದರೆ, ಸರ್ವಾಂಗಹೋಮಕ್ಕೆ ದೋಷವಿಲ್ಲದ ಒಂದು ವರ್ಷದ ಗಂಡು ಕುರಿಮರಿ, ದೋಷಪರಿಹಾರ ಯಜ್ಞಕ್ಕಾಗಿ ಯಾವ ದೋಷವಿಲ್ಲದ ಒಂದು ವರ್ಷದ ಹೆಣ್ಣು ಕುರಿಮರಿ, ಸಮಾಧಾನಯಜ್ಞಕ್ಕಾಗಿ ಯಾವ ದೋಷವಿಲ್ಲದ ಒಂದು ಟಗರು ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವರು ಯೆಹೋವ ದೇವರಿಗೆ ತಮ್ಮ ಅರ್ಪಣೆಗಳನ್ನು ಅರ್ಪಿಸಬೇಕು. ಅದೇನೆಂದರೆ, ದಹನಬಲಿಗಾಗಿ ಒಂದು ವರ್ಷದ ಕಳಂಕವಿಲ್ಲದ ಒಂದು ಟಗರಿನ ಮರಿಯನ್ನೂ, ಪಾಪ ಪರಿಹಾರದ ಬಲಿಗಾಗಿ ಒಂದು ವರ್ಷದ ಕಳಂಕವಿಲ್ಲದ ಒಂದು ಹೆಣ್ಣು ಕುರಿಮರಿಯನ್ನೂ, ಸಮಾಧಾನದ ಬಲಿಗಾಗಿ ಒಂದು ಕಳಂಕವಿಲ್ಲದ ಟಗರನ್ನೂ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 6:14
12 ತಿಳಿವುಗಳ ಹೋಲಿಕೆ  

“‘ಅವನು ತನ್ನ ದೋಷಪರಿಹಾರಕ್ಕಾಗಿ ತರುವುದು ಕುರಿಯಾದರೆ ಅದು ಪೂರ್ಣಾಂಗವಾದ ಹೆಣ್ಣಾಗಿರಬೇಕು.


“‘ಸಮಾಧಾನಯಜ್ಞಕ್ಕಾಗಿ ಯೆಹೋವನಿಗೆ ಸಮರ್ಪಿಸುವಂಥದು ಕುರಿ ಅಥವಾ ಆಡು ಆಗಿರುವ ಪಕ್ಷದಲ್ಲಿ, ಅದು ಗಂಡಾಗಲಿ ಅಥವಾ ಹೆಣ್ಣಾಗಲಿ ಪೂರ್ಣಾಂಗವಾಗಿರಬೇಕು.


ಯೇಸು ಕ್ರಿಸ್ತನೆಂಬ ನಿಷ್ಕಳಂಕವೂ, ನಿರ್ಮಲವೂ ಆದ ಕುರಿಮರಿಯ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.


ಯೆಹೋವನ ಒಡಂಬಡಿಕೆ ಮಂಜೂಷವನ್ನು ಹೊತ್ತ ಲೇವಿಯರಿಗೆ ದೇವರ ಸಹಾಯ ದೊರೆತದ್ದರಿಂದ ಏಳು ಹೋರಿಗಳನ್ನೂ ಮತ್ತು ಏಳು ಟಗರುಗಳನ್ನೂ ಯಜ್ಞಮಾಡಿದರು.


“‘ಯಾವನಾದರೂ ತಿಳಿಯದೆ ತಪ್ಪು ಮಾಡಿದರೆ ಅವನು ದೋಷಪರಿಹಾರಕ ಯಜ್ಞಕ್ಕಾಗಿ ಒಂದು ವರ್ಷದ ಆಡನ್ನು ಸಮರ್ಪಿಸಬೇಕು.


“ಎಂಟನೆಯ ದಿನದಲ್ಲಿ ಅವನು ಪೂರ್ಣಾಂಗವಾದ ಎರಡು ಟಗರುಗಳನ್ನು, ಪೂರ್ಣಾಂಗವಾದ ಒಂದು ವರ್ಷದ ಕುರಿಯನ್ನು, ನೈವೇದ್ಯಕ್ಕಾಗಿ ಎಣ್ಣೆ ಬೆರೆಸಿದ ಒಂಭತ್ತು ಸೇರು ಗೋದಿಹಿಟ್ಟನ್ನು ಮತ್ತು ಒಂದು ಸೇರು ಎಣ್ಣೆಯನ್ನು ತೆಗೆದುಕೊಂಡು ಬರಬೇಕು.


“‘ನಿಮ್ಮ ದೇಶದ ಜನರಲ್ಲಿ ಬೇರೆ ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ,


ನಿನಗೆ ಟಗರು ಮುಂತಾದ ಪುಷ್ಟಪಶುಗಳನ್ನು ಯಜ್ಞರೂಪವಾಗಿ ಸಮರ್ಪಿಸಿ, ಸುವಾಸನೆಯನ್ನು ಉಂಟುಮಾಡುವೆನು; ಯಜ್ಞಕ್ಕಾಗಿ ಹೋತ ಮತ್ತು ಹೋರಿಗಳನ್ನು ಅರ್ಪಿಸುವೆನು. ಸೆಲಾ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು