ಅರಣ್ಯಕಾಂಡ 6:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ತರುವಾಯ ಯಾಜಕನು ಬೇಯಿಸಿದ ಆ ಟಗರಿನ ಮುಂದೊಡೆಯನ್ನೂ, ಪುಟ್ಟಿಯಲ್ಲಿನ ಹುಳಿಯಿಲ್ಲದ ಒಂದು ರೊಟ್ಟಿಯನ್ನು, ಹಾಗೂ ಹುಳಿಯಿಲ್ಲದ ಒಂದು ಕಡುಬನ್ನೂ ತೆಗೆದುಕೊಂಡು ನಾಜೀರನು ಕ್ಷೌರಮಾಡಿಸಿಕೊಂಡ ನಂತರ ಅವನ ಕೈಯಲ್ಲಿ ಅರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ತರುವಾಯ ಯಾಜಕನು ಆ ಟಗರಿನ ಬೆಂದ ಮುಂದೊಡೆಯನ್ನು ಬುಟ್ಟಿಯಲ್ಲಿನ ಹುಳಿಯಿಲ್ಲದ ಒಂದು ರೊಟ್ಟಿಯನ್ನು ಹಾಗೂ ಹುಳಿಯಿಲ್ಲದ ಒಂದು ಕಡುಬನ್ನು ತೆಗೆದುಕೊಂಡು ನಾಜೀರ ವ್ರತಸ್ಥನು ಕ್ಷೌರಮಾಡಿಸಿಕೊಂಡ ನಂತರ ಅವನ ಕೈಯಲ್ಲಿ ಇಡಬೇಕು; ನೈವೇದ್ಯವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಆರತಿ ಎತ್ತಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ತರುವಾಯ ಯಾಜಕನು ಆ ಟಗರಿನ ಬೆಂದ ಮುಂದೊಡೆಯನ್ನೂ ಪುಟ್ಟಿಯಲ್ಲಿನ ಒಂದು ಹುಳಿಯಿಲ್ಲದ ರೊಟ್ಟಿಯನ್ನೂ ಒಂದು ಹುಳಿಯಿಲ್ಲದ ಕಡುಬನ್ನೂ ತೆಗೆದುಕೊಂಡು ನಾಜೀರನು ಕ್ಷೌರಮಾಡಿಸಿಕೊಂಡನಂತರ ಅವನ ಕೈಯಲ್ಲಿ ಇಟ್ಟು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 “ನಾಜೀರನು ತನ್ನ ತಲೆಕೂದಲನ್ನು ಕ್ಷೌರಮಾಡಿಸಿಕೊಂಡ ನಂತರ, ಯಾಜಕನು ಅವನಿಗೆ ಆ ಟಗರಿನ ಬೆಂದ ಮುಂದೊಡೆಯನ್ನೂ ಪುಟ್ಟಿಯಲ್ಲಿನ ಒಂದು ಹುಳಿಯಿಲ್ಲದ ಸಿಹಿರೊಟ್ಟಿಯನ್ನೂ ಒಂದು ಹುಳಿಯಿಲ್ಲದ ತೆಳುವಾದ ರೊಟ್ಟಿಯನ್ನೂ ಅವನ ಕೈಯಲ್ಲಿ ಇಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 “ ‘ಯಾಜಕನು ಬೇಯಿಸಿದ ಆ ಟಗರಿನ ಮುಂದೊಡೆಯನ್ನೂ, ಆ ಪುಟ್ಟಿಯೊಳಗಿಂದ ಹುಳಿಯಿಲ್ಲದ ಒಂದು ರೊಟ್ಟಿಯನ್ನೂ, ಹುಳಿಯಿಲ್ಲದ ಒಂದು ದೋಸೆಯನ್ನೂ, ಆ ನಾಜೀರರ ಪ್ರತ್ಯೇಕಿಸಿದ ಕೂದಲನ್ನು ಕ್ಷೌರಮಾಡಿಸಿದ ತರುವಾಯ ಅವರ ಕೈಗಳಲ್ಲಿ ಕೊಡಬೇಕು. ಅಧ್ಯಾಯವನ್ನು ನೋಡಿ |