Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 6:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯಾಜಕನು ಅವುಗಳನ್ನು ನೈವೇದ್ಯವಾಗಿ ನಿವಾಳಿಸಿ ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಬೇಕು. ನೈವೇದ್ಯ ಮಾಡುವ ಎದೆಯ ಭಾಗದಂತೆ ಹಾಗೂ ಯಾಜಕರಿಗಾಗಿ ಪ್ರತ್ಯೇಕಿಸುವ ತೊಡೆಯಂತೆ ಯಾಜಕನಿಗೆ ಸಲ್ಲಿಸಬೇಕು. ಅನಂತರ ಆ ನಾಜೀರನು ದ್ರಾಕ್ಷಾರಸವನ್ನು ಪಾನಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಇದು ನೈವೇದ್ಯವಾಗಿ ಆರತಿಯೆತ್ತುವ ಎದೆಯ ಭಾಗದಂತೆ ಹಾಗೂ ಯಾಜಕರಿಗಾಗಿ ಪ್ರತ್ಯೇಕಿಸುವ ತೊಡೆಯಂತೆ ಯಾಜಕನಿಗೆ ಸಲ್ಲಬೇಕು. ಇದಾದ ನಂತರ ನಾಜೀರ ವ್ರತಸ್ಥನು ದ್ರಾಕ್ಷಾರಸವನ್ನು ಪಾನಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಇದು ನೈವೇದ್ಯವಾಗಿ ನಿವಾಳಿಸುವ ಎದೆಯ ಭಾಗದಂತೆಯೂ ಯಾಜಕರಿಗೋಸ್ಕರ ಪ್ರತ್ಯೇಕಿಸುವ ತೊಡೆಯಂತೆಯೂ ಯಾಜಕನಿಗೆ ಸಲ್ಲಬೇಕು. ಅನಂತರ ಆ ನಾಜೀರನು ದ್ರಾಕ್ಷಾರಸವನ್ನು ಪಾನಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನೈವೇದ್ಯವಾಗಿ ಅದನ್ನು ಯೆಹೋವನ ಸನ್ನಿಧಿಯಲ್ಲಿ ವಿಶೇಷ ಕಾಣಿಕೆಯಾಗಿ ನಿವಾಳಿಸಬೇಕು. ಇವುಗಳು ಪವಿತ್ರವಾಗಿದ್ದು ಯಾಜಕರ ಪಾಲಾಗುತ್ತವೆ. ಅಲ್ಲದೆ ಮೀಸಲಾಗಿಟ್ಟಿರುವ ನಿವಾಳಿಸಲ್ಪಟ್ಟ ಕಾಣಿಕೆಯ ಎದೆಯ ಭಾಗ ಮತ್ತು ತೊಡೆಯ ಭಾಗ ಸಹ ಯಾಜಕನ ಭಾಗವಾಗಿರುತ್ತದೆ. ಇದರ ನಂತರ ನಾಜೀರನು ದ್ರಾಕ್ಷಾರಸವನ್ನು ಕುಡಿಯಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಯಾಜಕನು ಅವುಗಳನ್ನು ನೈವೇದ್ಯವಾಗಿ ನಿವಾಳಿಸುವ ಅರ್ಪಣೆಗಾಗಿ ಯೆಹೋವ ದೇವರ ಎದುರಿನಲ್ಲಿ ಸಮರ್ಪಿಸಬೇಕು. ನೈವೇದ್ಯ ಮಾಡುವ ಎದೆಯ ಸಂಗಡ ಅದು ಯಾಜಕನಿಗೆ ಪರಿಶುದ್ಧವಾಗಿದೆ. ಆಮೇಲೆ ನಾಜೀರರು ದ್ರಾಕ್ಷಾರಸವನ್ನು ಕುಡಿಯಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 6:20
24 ತಿಳಿವುಗಳ ಹೋಲಿಕೆ  

ಹೋಗು, ನಿನ್ನ ಅನ್ನವನ್ನು ಸಂತೋಷದಿಂದ ಉಣ್ಣು. ನಿನ್ನ ದ್ರಾಕ್ಷಾರಸವನ್ನು ಒಳ್ಳೆಯ ಮನಸ್ಸಿನಿಂದ ಕುಡಿ. ದೇವರು ನಿನ್ನ ಕೆಲಸಗಳನ್ನು ಈಗ ಒಪ್ಪಿಕೊಳ್ಳುತ್ತಾನೆ.


ಬಳಿಕ ಯಾಜಕನು ಆ ಸ್ತ್ರೀಯ ಕೈಯಿಂದ ವ್ಯಭಿಚಾರದ ಸಂಶಯ ಸೂಚಕವಾದ ಕಾಣಿಕೆಯನ್ನು ತೆಗೆದುಕೊಂಡು, ಆ ಕಾಣಿಕೆಯನ್ನು ಯೆಹೋವನ ಸಮ್ಮುಖದಲ್ಲಿ ನೈವೇದ್ಯಮಾಡಿ ಯಜ್ಞವೇದಿಯ ಹತ್ತಿರ ತರಬೇಕು.


ಯೇಸು ಆ ಹುಳಿರಸವನ್ನು ತೆಗೆದುಕೊಂಡ ಮೇಲೆ, “ತೀರಿತು” ಎಂದು ಹೇಳಿ ತಲೆ ಬಾಗಿಸಿ ತನ್ನ ಆತ್ಮವನ್ನು ಒಪ್ಪಿಸಿಕೊಟ್ಟನು.


ನಿಮಗೆ ಸತ್ಯವಾಗಿ ಹೇಳುತ್ತೇನೆ; ನಾನು ದೇವರ ರಾಜ್ಯದಲ್ಲಿ ದ್ರಾಕ್ಷಾರಸವನ್ನು ಹೊಸದಾಗಿ ಕುಡಿಯುವ ದಿನದವರೆಗೂ ಅದನ್ನು ಇನ್ನು ಕುಡಿಯುವುದೇ ಇಲ್ಲ” ಎಂದನು.


ನಾನು ನನ್ನ ತಂದೆಯ ರಾಜ್ಯದಲ್ಲಿ ನಿಮ್ಮ ಸಂಗಡ ಹೊಸದಾಗಿ ದ್ರಾಕ್ಷಾರಸವನ್ನು ಕುಡಿಯುವ ದಿನದವರೆಗೂ ಇನ್ನು ಇದನ್ನು ಕುಡಿಯುವುದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ” ಅಂದನು.


ಎಫ್ರಾಯೀಮ್ಯರು ಶೂರರಂತಿರುವರು, ದ್ರಾಕ್ಷಾರಸ ಕುಡಿದಂತೆ ಅವರ ಮನಸ್ಸು ಉತ್ಸಾಹಗೊಳ್ಳುವುದು; ಅವರ ಸಂತಾನದವರು ಇದನ್ನು ನೋಡಿ ಸಂತೋಷಪಡುವರು, ಅವರ ಹೃದಯವು ಯೆಹೋವನಲ್ಲಿ ಆನಂದಿಸುವುದು.


ಆಹಾ, ಅವರ ಸೌಖ್ಯವೆಷ್ಟು, ಅವರ ಸೌಂದರ್ಯವೆಷ್ಟು! ಧಾನ್ಯವು ಯುವಕರನ್ನು, ದ್ರಾಕ್ಷಾರಸವು ಯುವತಿಯರನ್ನು ಪುಷ್ಟಿಗೊಳಿಸುವುದು.


ಸೇನಾಧೀಶ್ವರನಾದ ಯೆಹೋವನು ತನ್ನ ಜನರನ್ನು ಕಾಪಾಡುವನು; ಅವರು ಶತ್ರುಗಳನ್ನು ನುಂಗಿಬಿಡುವರು, ಕವಣೆಯ ಕಲ್ಲುಗಳನ್ನು ತುಳಿದುಹಾಕುವರು; ರಕ್ತವನ್ನು ಕುಡಿದು ಅಮಲೇರಿದವರಾಗಿ ಭೋರ್ಗರೆಯುವರು; ಬೋಗುಣಿಗಳಂತೆಯೂ, ಯಜ್ಞವೇದಿಯ ಮೂಲೆಗಳಂತೆ ರಕ್ತಪೂರ್ಣರಾಗಿರುವರು.


ಯೆಹೋವನು ವಿಮೋಚಿಸಿದವರು ಹಿಂದಿರುಗಿ, ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು, ದುಃಖವೂ, ನಿಟ್ಟುಸಿರೂ ಓಡಿಹೋಗುವವು.


ಇದಲ್ಲದೆ, ಸೇನಾಧೀಶ್ವರನಾದ ಯೆಹೋವನು ಈ ಪರ್ವತದಲ್ಲಿ ಸಕಲ ಜನಾಂಗಗಳಿಗೆ ಸಾರವತ್ತಾದ ಕೊಬ್ಬಿದ ಮೃಷ್ಟಾನ್ನದಿಂದಲೂ, ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾರಸದಿಂದಲೂ ಕೂಡಿದ ಔತಣವನ್ನು ಸಿದ್ಧಮಾಡುವನು.


ಅವುಗಳ ಮಾಂಸವು ಸಮಾಧಾನಯಜ್ಞಗಳಲ್ಲಿ ನೈವೇದ್ಯವಾಗಿ ನಿವಾಳಿಸುವ ಎದೆಯ ಭಾಗದಂತೆಯೂ, ಬಲತೊಡೆಯಂತೆಯೂ ನಿನಗೇ ಸಲ್ಲಬೇಕು.


ನೀವು ದೇವರಿಗೆ ಅಂಗೀಕಾರವಾಗುವಂತೆ ಯಾಜಕನು ಅದನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಿ ಸಮರ್ಪಿಸುವನು. ಸಬ್ಬತ್ ದಿನದ ಮರು ದಿನದಲ್ಲಿಯೇ ಅದನ್ನು ನಿವಾಳಿಸಬೇಕು.


ಜನರು ಹೋಮಕ್ಕಾಗಿ ಕೊಬ್ಬನ್ನು ತಂದು ಸಮರ್ಪಿಸುವಾಗೆಲ್ಲಾ ಯಾಜಕರಿಗೋಸ್ಕರ ಪ್ರತ್ಯೇಕಿಸಬೇಕಾದ ಆ ತೊಡೆಯನ್ನು ನೈವೇದ್ಯವಾಗಿ ನಿವಾಳಿಸಬೇಕಾದ ಆ ಎದೆಯ ಭಾಗವನ್ನು ಯೆಹೋವನ ಸನ್ನಿಧಿಯಲ್ಲಿ ತರಬೇಕು. ಯೆಹೋವನು ಆಜ್ಞಾಪಿಸಿದಂತೆ ಅವು ನಿನಗೂ ಮತ್ತು ನಿನ್ನ ವಂಶದವರಿಗೂ ಸಲ್ಲತಕ್ಕದ್ದು; ಇದು ಶಾಶ್ವತನಿಯಮ” ಎಂದು ಹೇಳಿದನು.


ಮೋಶೆಯು ಆಜ್ಞಾಪಿಸಿದಂತೆ ಆರೋನನು ಅವುಗಳ ಎದೆಯ ಭಾಗಗಳನ್ನು ಮತ್ತು ಬಲತೊಡೆಯನ್ನು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಿದನು.


ಇಸ್ರಾಯೇಲರು ಸಮಾಧಾನಯಜ್ಞಪಶುವಿನ ಮಾಂಸದಲ್ಲಿ ನೈವೇದ್ಯರೂಪವಾಗಿ ನಿವಾಳಿಸುವ ಎದೆಯ ಭಾಗವನ್ನು ಮತ್ತು ಯಾಜಕನಿಗೋಸ್ಕರ ಪ್ರತ್ಯೇಕಿಸುವ ತೊಡೆಯನ್ನು ನಾನು ತೆಗೆದುಕೊಂಡು ಮಹಾಯಾಜಕನಾದ ಆರೋನನಿಗೂ ಹಾಗು ಅವನ ವಂಶದವರಿಗೂ ಕೊಟ್ಟು ಇವು ಇಸ್ರಾಯೇಲರಿಂದ ಯಾಜಕರಿಗೆ ಯಾವಾಗಲೂ ಸಲ್ಲಬೇಕೆಂದು ಶಾಶ್ವತವಾದ ನಿಯಮವನ್ನು ಮಾಡಿದ್ದೇನೆ’” ಎಂದು ಹೇಳಿದನು.


ಯಾಜಕನು ಆ ಕೊಬ್ಬನ್ನು ಯಜ್ಞವೇದಿಯ ಮೇಲೆ ಹೋಮಮಾಡಬೇಕು; ಎದೆಯ ಭಾಗವು ಆರೋನನಿಗೂ ಮತ್ತು ಅವನ ವಂಶದವರಿಗೂ ಸೇರಬೇಕು.


ಯೆಹೋವನಿಗೆ ಹೋಮರೂಪವಾಗಿ ಸಮರ್ಪಿಸಬೇಕಾದುದನ್ನು ಅಂದರೆ ಪಶುವಿನ ಕೊಬ್ಬನ್ನು ತನ್ನ ಕೈಯಿಂದಲೇ ಕೊಡಬೇಕು. ಅದರೊಂದಿಗೆ ಅದರ ಎದೆಯ ಭಾಗವನ್ನು ನೈವೇದ್ಯರೂಪವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸುವುದಕ್ಕಾಗಿ ತಂದು ಸಮರ್ಪಿಸಬೇಕು.


ನೀವು ಸಮಾಧಾನಯಜ್ಞದ್ರವ್ಯಗಳಲ್ಲಿ ಬಲತೊಡೆಯನ್ನು ಯಾಜಕನಿಗೋಸ್ಕರ ಪ್ರತ್ಯೇಕಿಸಿ ಕೊಡಬೇಕು.


ಹರಕೆಮಾಡಿಕೊಂಡ ನಾಜೀರರ ವ್ರತ ನಿಯಮವು ಇದೇ. ಅವರು ತಮ್ಮ ವ್ರತಪೂರ್ತಿಗಾಗಿ ಯೆಹೋವನಿಗೆ ಸಮರ್ಪಿಸಬೇಕಾದ ಕಾಣಿಕೆ ಇದೇ. ಅವರು ತಮ್ಮ ಶಕ್ತಿಗನುಸಾರ ಹೆಚ್ಚಾಗಿಯೂ ಕೊಡಬಹುದು. ಆದರೆ ತಾವು ಕೊಡುತ್ತೆವೆಂದು ಹರಕೆಮಾಡಿದಷ್ಟು ವ್ರತವಿಧಿಗನುಸಾರವಾಗಿ ಕೊಡಲೇಬೇಕು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು