Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 6:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ವಿಶೇಷವಾದ ಹರಕೆಯನ್ನು ಮಾಡಿದಾಗ ದ್ರಾಕ್ಷಾರಸವನ್ನೂ ಮತ್ತು ಮದ್ಯಪಾನವನ್ನೂ ಮುಟ್ಟಬಾರದು. ದ್ರಾಕ್ಷಾರಸದ ಹುಳಿಯನ್ನಾಗಲಿ ಬೇರೆ ಮದ್ಯಪಾನದ ಹುಳಿಯನ್ನಾಗಲಿ ಕುಡಿಯಬಾರದು. ದ್ರಾಕ್ಷಿ ಹಣ್ಣಿನಿಂದ ಮಾಡಿದ ಯಾವ ಪಾನವನ್ನೂ ಕುಡಿಯಬಾರದು. ಹಸಿ ಅಥವಾ ಒಣಗಿದ ದ್ರಾಕ್ಷಿ ಹಣ್ಣನ್ನೂ ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ದ್ರಾಕ್ಷಾರಸವನ್ನು ಹಾಗೂ ಮದ್ಯಪಾನವನ್ನು ಮುಟ್ಟಬಾರದು; ದ್ರಾಕ್ಷಾರಸದ ಹುಳಿಯನ್ನಾಗಲಿ ಬೇರೆ ಮದ್ಯದ ಹುಳಿಯನ್ನಾಗಲಿ ಕುಡಿಯಬಾರದು. ದ್ರಾಕ್ಷಿಹಣ್ಣಿನಿಂದ ಮಾಡಿದ ಯಾವ ಪಾನವನ್ನೂ ಕುಡಿಯಬಾರದು; ಹಸಿ ಅಥವಾ ಒಣಗಿದ ದ್ರಾಕ್ಷಿಹಣ್ಣನ್ನು ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ವಿಶೇಷವಾದ ಹರಕೆಯನ್ನು ಮಾಡಿದಾಗ ದ್ರಾಕ್ಷಾರಸವನ್ನೂ ಮದ್ಯವನ್ನೂ ಮುಟ್ಟಬಾರದು; ದ್ರಾಕ್ಷಾರಸದ ಹುಳಿಯನ್ನಾಗಲಿ ಬೇರೆ ಮದ್ಯದ ಹುಳಿಯನ್ನಾಗಲಿ ಕುಡಿಯಬಾರದು; ದ್ರಾಕ್ಷೇ ಹಣ್ಣಿನಿಂದ ಮಾಡಿದ ಯಾವ ಪಾನವನ್ನೂ ಕುಡಿಯಬಾರದು; ಹಸಿದಾಗಲಿ ಒಣಗಿದ್ದಾಗಲಿ ದ್ರಾಕ್ಷೇ ಹಣ್ಣನ್ನು ತಿನ್ನಬಾರದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆ ಸಮಯದಲ್ಲಿ ಅವನು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಮುಟ್ಟಬಾರದು; ದ್ರಾಕ್ಷಾರಸದ ಹುಳಿಯನ್ನಾಗಲಿ ಬೇರೆ ಮದ್ಯದ ಹುಳಿಯನ್ನಾಗಲಿ ಕುಡಿಯಬಾರದು; ದ್ರಾಕ್ಷಿಯ ಹಣ್ಣಿನಿಂದ ಮಾಡಿದ ಯಾವ ಪಾನವನ್ನೂ ಕುಡಿಯಬಾರದು; ಹಸಿ ಅಥವಾ ಒಣ ದ್ರಾಕ್ಷಿಯನ್ನು ಸಹ ತಿನ್ನಬಾರದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ದ್ರಾಕ್ಷಾರಸಕ್ಕೂ ಮದ್ಯಪಾನಕ್ಕೂ ದೂರವಾಗಿದ್ದು, ದ್ರಾಕ್ಷಾರಸದ ಹುಳಿಯನ್ನೂ ಮದ್ಯಪಾನದ ಹುಳಿಯನ್ನೂ ಕುಡಿಯದೆ, ದ್ರಾಕ್ಷಿಯಿಂದ ಮಾಡಿದ ಯಾವ ಪಾನವನ್ನಾದರೂ ಕುಡಿಯದೆ ಹಸಿಯದಾಗಲಿ, ಒಣಗಿದ್ದಾಗಲಿ ದ್ರಾಕ್ಷಿಹಣ್ಣನ್ನು ತಿನ್ನದೆ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 6:3
15 ತಿಳಿವುಗಳ ಹೋಲಿಕೆ  

ಅವನು ಕರ್ತನ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು; ದ್ರಾಕ್ಷಾರಸವನ್ನಾಗಲಿ, ಯಾವ ಮದ್ಯವನ್ನಾಗಲಿ ಕುಡಿಯಬಾರದು; ಅವನು ಹುಟ್ಟಿದಂದಿನಿಂದಲೇ ಪವಿತ್ರಾತ್ಮಭರಿತನಾಗಿರುವನು.


ಇನ್ನು ಮೇಲೆ ನೀರನ್ನು ಮಾತ್ರ ಕುಡಿಯುವವನಾಗಿರದೆ, ನಿನ್ನ ಅಜೀರ್ಣದ ಮತ್ತು ನಿನಗೆ ಆಗಾಗ್ಗೆ ಉಂಟಾಗುವ ಅಸ್ವಸ್ಥತೆಯ ಪರಿಹಾರಕ್ಕಾಗಿ ದ್ರಾಕ್ಷಾರಸವನ್ನು ಸ್ವಲ್ಪವಾಗಿ ತೆಗೆದುಕೊ.


ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದರಿಂದ ಪಟಿಂಗತನವು ಹುಟ್ಟುತ್ತದೆ. ಆದರೆ ಪವಿತ್ರಾತ್ಮಭರಿತರಾಗಿದ್ದು,


“ಆದರೆ ನೀವೋ ಪ್ರತಿಷ್ಠಿತರಿಗೆ ದ್ರಾಕ್ಷಾರಸವನ್ನು ಕುಡಿಯಲು ಕೊಟ್ಟಿರಿ ಮತ್ತು ಪ್ರವಾದಿಗಳಿಗೆ ಪ್ರವಾದಿಸಬೇಡಿರೆಂದು ಆಜ್ಞಾಪಿಸಿದ್ದಿರಿ.


ದ್ರಾಕ್ಷಾಫಲವನ್ನು ತಿನ್ನದಿರಲಿ; ದ್ರಾಕ್ಷಾರಸವನ್ನಾಗಲಿ, ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರಲಿ; ನಿಷಿದ್ಧಾಹಾರವನ್ನು ಮುಟ್ಟದಿರಲಿ; ಹೀಗೆ ನಾನು ಆಜ್ಞಾಪಿಸಿದ್ದನ್ನೆಲ್ಲಾ ಕೈಕೊಳ್ಳಲಿ” ಅಂದನು.


“ನೀನೂ ಹಾಗು ನಿನ್ನ ಮಕ್ಕಳೂ ದ್ರಾಕ್ಷಾರಸವನ್ನಾಗಲಿ ಅಥವಾ ಮದ್ಯವನ್ನಾಗಲಿ ಕುಡಿದು ದೇವದರ್ಶನದ ಗುಡಾರದೊಳಗೆ ಬರಬಾರದು; ಹಾಗೆ ಬಂದರೆ ಸಾಯುವಿರಿ. ಇದು ನಿನಗೂ ಮತ್ತು ನಿನ್ನ ಸಂತತಿಯವರೆಲ್ಲರಿಗೂ ಶಾಶ್ವತನಿಯಮ.


ಸಕಲವಿಧವಾದ ಕೆಟ್ಟತನಕ್ಕೆ ದೂರವಾಗಿರಿ.


“ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ. ಅತಿ ಭೋಜನದ ಮದದಿಂದಲೂ, ಅಮಲಿನಿಂದಲೂ, ಪ್ರಾಪಂಚಿಕವಾದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿನವು ನಿಮ್ಮ ಮೇಲೆ ಉರುಲಿನಂತೆ ಫಕ್ಕನೆ ಬಂದೀತು.


ಅವು ಅನ್ನಪಾನಗಳೂ ಮತ್ತು ವಿವಿಧ ಆಚರಣೆಗಳಿಗೂ ಒಳಪಟ್ಟಿರುವ ಸ್ನಾನಗಳು ಸಹಿತವಾಗಿ ದೇಹಕ್ಕೆ ಮಾತ್ರ ಸಂಬಂಧಪಟ್ಟ ನಿಯಮಗಳಾಗಿದ್ದು. ಇವು ಸುಧಾರಣೆಯ ಕಾಲದವರೆಗೆ ಮಾತ್ರ ನೇಮಕವಾಗಿದ್ದವು.


ಅವನು ಹರಕೆಮಾಡಿ ಪ್ರತಿಷ್ಠಿಸಿಕೊಂಡ ದಿನಗಳಲ್ಲೆಲ್ಲಾ ದ್ರಾಕ್ಷಾಲತೆಯಿಂದ ಬೆಳೆದ ಬೀಜವನ್ನಾಗಲಿ, ಸಿಪ್ಪೆಯನ್ನಾಗಲಿ ತಿನ್ನಬಾರದು.


ಆದುದರಿಂದ ಜಾಗರೂಕತೆಯಿಂದಿರು; ದ್ರಾಕ್ಷಾರಸವನ್ನಾಗಲಿ, ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರು; ಯಾವ ನಿಷಿದ್ಧ ಪದಾರ್ಥಗಳನ್ನು ಊಟಮಾಡದಿರು.


ನಿಮ್ಮ ಪುತ್ರರಲ್ಲಿ ಪ್ರವಾದಿಗಳನ್ನೂ ಮತ್ತು ನಿಮ್ಮ ಯುವಕರಲ್ಲಿ ಪ್ರತಿಷ್ಠಿತರನ್ನೂ ಎಬ್ಬಿಸಿದೆನು. ಇಸ್ರಾಯೇಲಿನ ಜನರೇ, ಇದು ಸತ್ಯವಲ್ಲವೋ?” ಎಂದು ಯೆಹೋವನು ಅನ್ನುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು