ಅರಣ್ಯಕಾಂಡ 6:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 “ಅವನು ತನ್ನ ಹರಕೆಯ ದಿನಗಳಲ್ಲಿ ಕ್ಷೌರಮಾಡಿಸಿಕೊಳ್ಳಬಾರದು. ಅವನು ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಂಡ ದಿನಗಳು ಮುಗಿಯುವ ತನಕ ತಾನು ದೇವರಿಗೆ ಮೀಸಲಾಗಿದ್ದು ತನ್ನ ತಲೆಯ ಕೂದಲನ್ನು ಕತ್ತರಿಸದೆ ಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅವನು ತನ್ನ ವ್ರತ ದಿನಗಳಲ್ಲೆಲ್ಲಾ ಕ್ಷೌರ ಮಾಡಿಸಿಕೊಳ್ಳಬಾರದು. ತನ್ನನ್ನೇ ಪ್ರತಿಷ್ಠಿಸಿಕೊಂಡ ದಿನಗಳು ಮುಗಿಯುವ ತನಕ ವ್ರತಬದ್ಧನಾಗಿದ್ದು ತನ್ನ ತಲೆಯ ಕೂದಲನ್ನು ಕತ್ತರಿಸದೆ ಬೆಳೆಯಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅವನು ತನ್ನ ಹರಕೆಯ ದಿನಗಳಲ್ಲೆಲ್ಲಾ ಕ್ಷೌರಮಾಡಿಸಿಕೊಳ್ಳಬಾರದು. ಅವನು ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಂಡ ದಿನಗಳು ಮುಗಿಯುವ ತನಕ ತಾನು ಮೀಸಲಾಗಿದ್ದು ತನ್ನ ತಲೆಯ ಕೂದಲನ್ನು ಕತ್ತರಿಸದೆ ಬಿಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 “ಅವನ ವ್ರತದ ಕಾಲದಲ್ಲಿ ಕ್ಷೌರದ ಕತ್ತಿಯು ಅವನ ತಲೆಯನ್ನು ಸೋಂಕಬಾರದು. ಯೆಹೋವನಿಗೋಸ್ಕರ ಪ್ರತಿಷ್ಠಿತವಾದ ತನ್ನ ಕಾಲವನ್ನು ಪೂರ್ಣಗೊಳಿಸುವ ತನಕ ಅವನು ಪರಿಶುದ್ಧನಾಗಿರಬೇಕು. ತನ್ನ ವ್ರತದ ದಿನಗಳು ಮುಗಿಯುವ ತನಕ ಅವನು ಕೂದಲನ್ನು ಬೆಳೆಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 “ ‘ಅವರ ನಾಜೀರ ವ್ರತದ ದಿನಗಳಲ್ಲೆಲ್ಲಾ ಕ್ಷೌರಮಾಡಿಸಿಕೊಳ್ಳಬಾರದು. ಅವರು ಯೆಹೋವ ದೇವರಿಗೆ ತಮ್ಮನ್ನು ಪ್ರತ್ಯೇಕಿಸಿಕೊಂಡ ದಿವಸಗಳು ಪೂರ್ತಿಯಾಗುವವರೆಗೆ ಅವರು ಪರಿಶುದ್ಧರಾಗಿರುವರು, ಅವರು ತಮ್ಮ ತಲೆಗೂದಲನ್ನು ಕತ್ತರಿಸದೇ ಬೆಳೆಯಬಿಡಬೇಕು. ಅಧ್ಯಾಯವನ್ನು ನೋಡಿ |