Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 7:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ತಟ್ಟೆಯು; ಎಪ್ಪತ್ತು ಶೆಕೆಲ್ ತೂಕವುಳ್ಳ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯ ನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಹರಿವಾಣ; 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವನ ಕಾಣಿಕೆ ಯಾವದಂದರೆ - ದೇವರ ಸೇವೆಗೆ ನೇಮಕವಾದ ರೂಪಾಯಿಯ ತೂಕದ ಮೇರೆಗೆ ನೂರ ಮೂವತ್ತು ರೂಪಾಯಿ ತೂಕದ ಬೆಳ್ಳಿಯ ಹರಿವಾಣವು; ಎಪ್ಪತ್ತು ತೊಲೆ ತೂಕವುಳ್ಳ ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅವನ ಅರ್ಪಣೆ ಏನೆಂದರೆ: ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ, 130 ಶೆಕೆಲ್ ತೂಕದ ಒಂದು ಬೆಳಿಯ್ಳ ತಟ್ಟೆ, 70 ಶೆಕೆಲ್ ತೂಕದ ಬೆಳ್ಳಿಯ ಒಂದು ಬಟ್ಟಲು, ಧಾನ್ಯ ಸಮರ್ಪಣೆಗಾಗಿ ಈ ಎರಡೂ ಎಣ್ಣೆ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 7:19
10 ತಿಳಿವುಗಳ ಹೋಲಿಕೆ  

ಅವಳು ತನ್ನ ತಾಯಿಯ ಪ್ರೇರೇಪಣೆಗೆ ಒಳಗಾಗಿ, “ಸ್ನಾನಿಕ ಯೋಹಾನನ ತಲೆಯನ್ನು ಹರಿವಾಣದಲ್ಲಿ ನನಗೆ ತರಿಸಿಕೊಡು” ಅಂದಳು.


ಎರಡನೆಯ ದಿನದಲ್ಲಿ ಇಸ್ಸಾಕಾರ್ ಕುಲಾಧಿಪತಿಯೂ ಚೂವಾರನ ಮಗನೂ ಆದ ನೆತನೇಲನು ಕಾಣಿಕೆಯನ್ನು ಸಮರ್ಪಿಸಿದನು.


ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕವುಳ್ಳ ಚಿನ್ನದ ಧೂಪಾರತಿಯನ್ನು ಸಮರ್ಪಿಸಿದನು.


ಮೇಜಿನ ಮೇಲಿಡಬೇಕಾದ ಹರಿವಾಣಗಳನ್ನು, ಧೂಪಾರತಿಗಳನ್ನು, ಹೂಜಿಗಳನ್ನು, ಪಾನದ್ರವ್ಯವನ್ನು ಅರ್ಪಿಸುವುದಕ್ಕೆ ಬೇಕಾದ ಬಟ್ಟಲುಗಳನ್ನು ಚೊಕ್ಕ ಬಂಗಾರದಿಂದಲೇ ಮಾಡಿಸಬೇಕು.


“‘ಯಾವನಾದರೂ ಯೆಹೋವನಿಗೆ ಧಾನ್ಯನೈವೇದ್ಯವನ್ನು ಮಾಡಬೇಕೆಂದಿದ್ದರೆ ಅದು ಗೋದಿಹಿಟ್ಟಿನದಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಹೊಯ್ದು ಅದರ ಮೇಲೆ ಧೂಪವನ್ನು ಇಡಬೇಕು.


“‘ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ಕೊಡುವುದಕ್ಕೂ ಗತಿಯಿಲ್ಲದೆ ಹೋದರೆ, ಅವನು ದೋಷಪರಿಹಾರಕ್ಕಾಗಿ ಮೂರು ಸೇರು ಗೋದಿಹಿಟ್ಟನ್ನು ತರಬೇಕು. ಆ ಹೋಮದ್ರವ್ಯವು ದೋಷಪರಿಹಾರಾರ್ಥವಾಗಿ ಇರುವುದರಿಂದ ಅದರ ಮೇಲೆ ಎಣ್ಣೆಯನ್ನು ಹೊಯ್ಯಬಾರದು ಅಥವಾ ಧೂಪವನ್ನು ಇಡಬಾರದು.


ಆ ಸಾಮಾನುಗಳ ಲೆಕ್ಕ: ಬಂಗಾರದ ಬೋಗುಣಿಗಳು ಮೂವತ್ತು; ಬೆಳ್ಳಿಯ ಬೋಗುಣಿಗಳು ಒಂದು ಸಾವಿರ; ಕತ್ತಿಗಳು ಇಪ್ಪತ್ತೊಂಭತ್ತು;


ಅವುಗಳ ಎಲ್ಲಾ ತಾಮ್ರವನ್ನೂ ಯೆಹೋವನ ಆಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಬಟ್ಟಲು, ಧೂಪಾರತಿ ಮೊದಲಾದ ತಾಮ್ರದ ಸಾಮಾನುಗಳನ್ನೂ ಬಾಬಿಲೋನಿಗೆ ತೆಗೆದುಕೊಂಡು ಹೋದರು.


ಆ ದಿನದಲ್ಲಿ, “ಯೆಹೋವನಿಗೆ ಮೀಸಲು” ಎಂಬ ಲಿಪಿಯು ಕುದುರೆಗಳ ಘಂಟೆಗಳ ಮೇಲೂ ಕೆತ್ತಿರುವುದು; ಯೆಹೋವನ ಆಲಯದ ಪಾತ್ರೆಗಳೆಲ್ಲವೂ ಯಜ್ಞವೇದಿಯ ಪಕ್ಕದ ಬೋಗುಣಿಗಳಂತೆ ಪರಿಶುದ್ಧವಾಗಿರುವವು.


ಕೂಡಲೆ ಅವಳು ಅರಸನ ಬಳಿಗೆ ಅವಸರದಿಂದ ಬಂದು, “ಈ ಕ್ಷಣದಲ್ಲೇ ಸ್ನಾನಿಕನಾದ ಯೋಹಾನನ ತಲೆಯನ್ನು ಪರಾತಿನಲ್ಲಿ ನನಗೆ ತರಿಸಿಕೊಡಬೇಕು, ಇದೇ ನನ್ನ ಬೇಡಿಕೆ” ಎಂದು ಕೇಳಿಕೊಂಡಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು