Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 7:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರು ಆರು ಕಮಾನು ಬಂಡಿಯನ್ನೂ ಮತ್ತು ಹನ್ನೆರಡು ಎತ್ತುಗಳನ್ನೂ ಯೆಹೋವನ ಸನ್ನಿಧಿಗೆ ಕಾಣಿಕೆಯಾಗಿ ತಂದರು. ನಾಯಕರಾದ ಇಬ್ಬರಿಬ್ಬರೂ ಒಂದು ಕಮಾನು ಬಂಡಿಯನ್ನೂ, ಪ್ರತಿ ನಾಯಕನು ಒಂದು ಜೋಡಿ ಎತ್ತನ್ನೂ, ದೇವದರ್ಶನ ಗುಡಾರದ ಮುಂದೆ ತಂದರು. ಹೀಗೆ ಆರು ಜೊತೆ ಬಂಡಿ ಆರು ಜೊತೆ ಎತ್ತುಗಳನ್ನು ತಂದು ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇಬ್ಬರಿಬ್ಬರು ಒಂದು ಕಮಾನು ಬಂಡಿಯನ್ನೂ ಒಂದು ಜೊತೆ ಎತ್ತುಗಳನ್ನೂ ಅಂತು ಆರು ಬಂಡಿಗಳನ್ನೂ ಆರು ಜೊತೆ ಎತ್ತುಗಳನ್ನೂ ದೇವದರ್ಶನದ ಗುಡಾರದ ಮುಂದೆ ಸರ್ವೇಶ್ವರನ ಸನ್ನಿಧಿಗೆ ತಂದು ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇಬ್ಬರಿಬ್ಬರು ಒಂದು ಕಮಾನುಬಂಡಿಯನ್ನೂ ಒಂದು ಜೋಡಿ ಎತ್ತುಗಳನ್ನೂ ಅಂತು ಆರು ಬಂಡಿಗಳನ್ನೂ ಆರು ಜೋಡಿ ಎತ್ತುಗಳನ್ನೂ ದೇವದರ್ಶನದ ಗುಡಾರದ ಮುಂದೆ ಯೆಹೋವನ ಸನ್ನಿಧಿಗೆ ತಂದು ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಗೋತ್ರಪ್ರಧಾನರು ಮುಂದೆ ಬಂದು, ತಮ್ಮ ಕಾಣಿಕೆಗಳನ್ನು ಸಮರ್ಪಿಸಿದರು. ಇಬ್ಬಿಬ್ಬರು ಆರು ಕಮಾನು ಬಂಡಿಗಳನ್ನೂ ಅವುಗಳನ್ನು ಎಳೆಯುವುದಕ್ಕೆ ಆರು ಜೊತೆ ಎತ್ತುಗಳನ್ನೂ ಕೊಟ್ಟರು. ಪ್ರಧಾನರು ಇವುಗಳನ್ನು ಪವಿತ್ರಗುಡಾರದಲ್ಲಿ ಯೆಹೋವನಿಗೆ ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವರು ಯೆಹೋವ ದೇವರ ಎದುರಿನಲ್ಲಿ ತಂದ ಅರ್ಪಣೆ ಏನೆಂದರೆ ಆರು ಕಮಾನುಬಂಡಿಗಳು, ಹನ್ನೆರಡು ಎತ್ತುಗಳು, ಪ್ರಧಾನರಲ್ಲಿ ಇಬ್ಬರಿಗೆ ಒಂದು ಬಂಡಿಯಂತೆ, ಒಬ್ಬೊಬ್ಬನಿಗೆ ಒಂದೊಂದು ಎತ್ತುಗಳನ್ನು ಅವರು ದೇವದರ್ಶನ ಗುಡಾರದ ಮುಂದೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 7:3
7 ತಿಳಿವುಗಳ ಹೋಲಿಕೆ  

ಮತ್ತು ನಿಮ್ಮ ಹೆಂಡತಿ ಮಕ್ಕಳಿಗೋಸ್ಕರ ಐಗುಪ್ತ ದೇಶದಿಂದ ರಥಗಳನ್ನು ತೆಗೆದುಕೊಂಡು ಹೋಗಿ ನಿಮ್ಮ ತಂದೆಯನ್ನು ಕರೆದುಕೊಂಡು ಬನ್ನಿರಿ.


ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,


ಯೆಹೋವನು ಹೀಗೆನ್ನುತ್ತಾನೆ, “ಇಸ್ರಾಯೇಲರು ಯೆಹೋವನ ಆಲಯಕ್ಕೆ ಶುದ್ಧಪಾತ್ರೆಯಲ್ಲಿ ನೈವೇದ್ಯವನ್ನು ತೆಗೆದುಕೊಂಡು ಬರುವ ಪ್ರಕಾರ ಸಮಸ್ತ ಜನಾಂಗಗಳಲ್ಲಿ ಚದರಿಹೋಗಿರುವ ನಮ್ಮ ಸಹೋದರರನ್ನು ಕುದುರೆ, ತೇರು, ಪಲ್ಲಕಿ, ಹೇಸರಗತ್ತೆ, ಒಂಟೆ ಇವುಗಳ ಮೇಲೆ ಯೆಹೋವನ ನೈವೇದ್ಯಕ್ಕಾಗಿ ಯೆರೂಸಲೇಮೆಂಬ ನನ್ನ ಪರಿಶುದ್ಧಪರ್ವತಕ್ಕೆ ಕರೆತರುವರು.


ಇಗೋ, ನೀವು ನಿಂತಿರುವಲ್ಲಿಯೇ ನಿಮ್ಮನ್ನು ಸಿವುಡು ತುಂಬಿದ ಬಂಡಿ ಒತ್ತುವ ಪ್ರಕಾರ ನಾನು ನಿಮ್ಮನ್ನು ಕೆಳಗೆ ಹಾಕಿ ಒತ್ತುವೆನು.


ಇಸ್ರಾಯೇಲನ ಮಕ್ಕಳು ಅದೇ ರೀತಿಯಾಗಿ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಯೋಸೇಫನು ಅವರಿಗೆ ರಥಗಳನ್ನೂ ಮಾರ್ಗಕ್ಕೆ ಬೇಕಾದ ಆಹಾರವನ್ನೂ ಕೊಡಿಸಿದನು.


“ಇಸ್ರಾಯೇಲರು ನನಗಾಗಿ ಕಾಣಿಕೆಯನ್ನು ತರಬೇಕೆಂದು ಅವರಿಗೆ ಹೇಳು. ಮನಃಪೂರ್ವಕವಾಗಿ ಕೊಡುವವರಿಂದಲೇ ಆ ಕಾಣಿಕೆಯನ್ನು ತೆಗೆದುಕೊಳ್ಳಬೇಕು.


ಗೋತ್ರಪ್ರಧಾನರಲ್ಲಿ ಕೆಲವರು ಯೆರೂಸಲೇಮಿನಲ್ಲಿ ಯೆಹೋವನ ಆಲಯವಿದ್ದ ಸ್ಥಳಕ್ಕೆ ಬಂದಾಗ ದೇವಾಲಯವನ್ನು ಪುನಃ ಅದರ ಸ್ಥಳದಲ್ಲಿ ಕಟ್ಟುವುದಕ್ಕೋಸ್ಕರ ಕಾಣಿಕೆಗಳನ್ನು ಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು