ಅರಣ್ಯಕಾಂಡ 7:88 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201988 ಸಮಾಧಾನಯಜ್ಞಕ್ಕಾಗಿ ಕೊಟ್ಟ ಒಟ್ಟು ಪಶುಗಳು: 24 ಹೋರಿಗಳು, 60 ಟಗರುಗಳು, 60 ಹೋತಗಳು, ಒಂದು ವರ್ಷದ 60 ಕುರಿಗಳು, ಯಜ್ಞವೇದಿಯು ಅಭಿಷೇಕಿಸಲ್ಪಟ್ಟ ನಂತರ ಇದೇ ಅದರ ಪ್ರತಿಷ್ಠೆಗೆ ಸಮರ್ಪಿಸಲ್ಪಟ್ಟ ಕಾಣಿಕೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)88 ಸಮಾಧಾನಯಜ್ಞಕ್ಕಾಗಿ ಕೊಟ್ಟ ಪಶುಗಳು - ಹೋರಿಗಳು 24, ಟಗರುಗಳು 60, ಹೋತಗಳು 60, ವರುಷದ ಕುರಿಗಳು 60. ಯಜ್ಞವೇದಿಯು ಅಭಿಷೇಕಿಸಲ್ಪಟ್ಟ ನಂತರ ಇದೇ ಅದರ ಪ್ರತಿಷ್ಠೆಗೆ ಸಮರ್ಪಿಸಲ್ಪಟ್ಟ ಕಾಣಿಕೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್88 ಸಮಾಧಾನಯಜ್ಞಕ್ಕಾಗಿಯೂ ಪ್ರಧಾನರು ಪಶುಗಳನ್ನು ಕೊಟ್ಟರು. ಅವುಗಳ ಒಟ್ಟು ಸಂಖ್ಯೆ ಇಪ್ಪತ್ನಾಲ್ಕು ಹೋರಿಗಳು, ಅರವತ್ತು ಟಗರುಗಳು, ಅರವತ್ತು ಹೋತಗಳು, ಒಂದು ವರ್ಷದ ಅರವತ್ತು ಗಂಡು ಕುರಿಮರಿಗಳು. ಯಜ್ಞವೇದಿಕೆಯನ್ನು ಅಭಿಷೇಕಿಸಿ ಪ್ರತಿಷ್ಠಿಸಿದಾಗ ಅದಕೋಸ್ಕರ ಅವರು ಕೊಟ್ಟ ಕಾಣಿಕೆಗಳು ಇವೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ88 ಸಮಾಧಾನದ ಬಲಿಗಾಗಿರುವ ಒಟ್ಟು ಪಶುಗಳು: 24 ಹೋರಿಗಳು, 60 ಟಗರುಗಳು, 60 ಹೋತಗಳು, ಒಂದು ವರ್ಷದ ಗಂಡು ಕುರಿಮರಿಗಳು 60. ಅದನ್ನು ಅಭಿಷೇಕಿಸಿದ ತರುವಾಯ ಬಲಿಪೀಠಕ್ಕೆ ಮಾಡಿದ ಪ್ರತಿಷ್ಠೆ ಇದಾಗಿತ್ತು. ಅಧ್ಯಾಯವನ್ನು ನೋಡಿ |