ಅರಣ್ಯಕಾಂಡ 8:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಇಸ್ರಾಯೇಲರಿಗಾಗಿ ದೇವದರ್ಶನ ಗುಡಾರದ ಸೇವಾಕಾರ್ಯವನ್ನು ನಡಿಸುವುದಕ್ಕೂ ದೋಷಪರಿಹಾರವನ್ನು ಮಾಡುವುದಕ್ಕೂ ಲೇವಿಯರನ್ನು ಆರೋನನ ಮತ್ತು ಅವನ ಮಕ್ಕಳ ವಶಕ್ಕೆ ಕೊಟ್ಟಿದ್ದೇನೆ. ಹೀಗಿರುವುದರಿಂದ ಇಸ್ರಾಯೇಲರು ದೇವಾಲಯದ ಹತ್ತಿರಕ್ಕೆ ಬಂದಾಗ ಅವರಿಗೆ ಅಪಾಯವು ಸಂಭವಿಸುವುದಿಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಇಸ್ರಯೇಲರ ಪರವಾಗಿ ದೇವದರ್ಶನದ ಗುಡಾರದ ಪರಿಚರ್ಯವನ್ನು ನಡೆಸುವುದಕ್ಕೂ ಪಾಪಪರಿಹಾರವನ್ನು ಮಾಡುವುದಕ್ಕೂ ಲೇವಿಯರನ್ನು ಆರಿಸಿಕೊಂಡು ಆರೋನನ ಮತ್ತು ಅವನ ಮಕ್ಕಳ ವಶಕ್ಕೆ ಕೊಟ್ಟಿದ್ದೇನೆ. ಆದುದರಿಂದ ಇಸ್ರಯೇಲರು ದೇವಸ್ಥಾನದ ಹತ್ತಿರಕ್ಕೆ ಬಂದಾಗ ಅವರಿಗೆ ಯಾವ ಅಪಾಯವು ಸಂಭವಿಸುವುದಿಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಇಸ್ರಾಯೇಲ್ಯರಿಗೋಸ್ಕರ ದೇವದರ್ಶನದ ಗುಡಾರದ ಪರಿಚರ್ಯವನ್ನು ನಡಿಸುವದಕ್ಕೂ ದೋಷಪರಿಹಾರವನ್ನು ಮಾಡುವದಕ್ಕೂ ಲೇವಿಯರನ್ನು ಆರೋನನ ಮತ್ತು ಅವನ ಮಕ್ಕಳ ವಶಕ್ಕೆ ಕೊಟ್ಟಿದ್ದೇನೆ. ಹೀಗಿರುವದರಿಂದ ಇಸ್ರಾಯೇಲ್ಯರು ದೇವಸ್ಥಾನದ ಹತ್ತಿರಕ್ಕೆ ಬಂದಾಗ ಅವರಿಗೆ ಅಪಾಯವು ಸಂಭವಿಸುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಇಸ್ರೇಲರ ಮಧ್ಯದಿಂದ ನಾನು ಲೇವಿಯರನ್ನು ಆರಿಸಿಕೊಂಡಿದ್ದೇನೆ ಮತ್ತು ದೇವದರ್ಶನಗುಡಾರದಲ್ಲಿ ಇಸ್ರೇಲರ ಪರವಾಗಿ ಕೆಲಸ ಮಾಡಲೂ ಮತ್ತು ಇಸ್ರೇಲರಿಗೆ ದೋಷಪರಿಹಾರ ಮಾಡುವುದಕ್ಕೂ ನಾನು ಅವರನ್ನು ಆರೋನ ಮತ್ತು ಅವನ ಪುತ್ರರಿಗೆ ಒಪ್ಪಿಸಿಕೊಟ್ಟಿದ್ದೇನೆ. ಇಸ್ರೇಲರನ್ನು ಶುದ್ಧಿಗೊಳಿಸುವ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಅವರು ಸಹಾಯ ಮಾಡುವರು. ಹೀಗಿರುವುದರಿಂದ ಇಸ್ರೇಲರು ಪವಿತ್ರವಸ್ತುಗಳ ಅತೀ ಸಮೀಪಕ್ಕೆ ಬಂದರೂ ಅವರಿಗೆ ಅಪಾಯವು ಸಂಭವಿಸುವುದಿಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅವರು ದೇವದರ್ಶನದ ಗುಡಾರದಲ್ಲಿ ಇಸ್ರಾಯೇಲರ ಸೇವೆಯನ್ನು ಮಾಡುವುದಕ್ಕೂ ಇಸ್ರಾಯೇಲರಿಗೋಸ್ಕರ ಪ್ರಾಯಶ್ಚಿತ್ತ ಮಾಡುವುದಕ್ಕೂ ಪರಿಶುದ್ಧ ಸ್ಥಳಕ್ಕೆ ಇಸ್ರಾಯೇಲರು ಸಮೀಪಿಸುವಾಗ ಇಸ್ರಾಯೇಲರೊಳಗೆ ವ್ಯಾಧಿಯು ಇರದಂತೆ ನಾನು ಲೇವಿಯರನ್ನು ಇಸ್ರಾಯೇಲರೊಳಗಿಂದ ಆರೋನನಿಗೂ, ಅವನ ಪುತ್ರರಿಗೂ ದಾನವಾಗಿ ಕೊಟ್ಟಿದ್ದೇನೆ.” ಅಧ್ಯಾಯವನ್ನು ನೋಡಿ |