Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 8:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಲೇವಿಯರು ತಮ್ಮನ್ನು ಶುದ್ಧಪಡಿಸಿಕೊಂಡು ಬಟ್ಟೆಗಳನ್ನು ಒಗೆದುಕೊಂಡರು. ಆರೋನನು ಅವರನ್ನು ನೈವೇದ್ಯದಂತೆ ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಿ, ಅವರನ್ನು ಶುದ್ಧೀಕರಿಸುವುದಕ್ಕಾಗಿ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಲೇವಿಯರು ತಮ್ಮನ್ನು ಶುದ್ಧಮಾಡಿಕೊಂಡು ಬಟ್ಟೆಗಳನ್ನು ಒಗೆದುಕೊಂಡರು. ಆರೋನನು ಅವರನ್ನು ನೈವೇದ್ಯದಂತೆ ಸರ್ವೇಶ್ವರನ ಸನ್ನಿಧಿಯಲ್ಲಿ ಸಮರ್ಪಿಸಿದನು. ಅವರನ್ನು ಶುದ್ಧೀಕರಿಸುವುದಕ್ಕಾಗಿ ಅವರಿಗೋಸ್ಕರ ಪಾಪಪರಿಹಾರವನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಲೇವಿಯರು ತಮ್ಮನ್ನು ಶುದ್ಧಮಾಡಿಕೊಂಡು ಬಟ್ಟೆಗಳನ್ನು ಒಗೆದುಕೊಂಡರು; ಆರೋನನು ಅವರನ್ನು ನೈವೇದ್ಯದಂತೆ ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಿ ಅವರನ್ನು ಶುದ್ಧೀಕರಿಸುವದಕ್ಕೆ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಲೇವಿಯರು ತಮ್ಮನ್ನು ಶುದ್ಧಮಾಡಿಕೊಂಡು ಬಟ್ಟೆಗಳನ್ನು ಒಗೆದುಕೊಂಡರು. ಬಳಿಕ ಆರೋನನು ಅವರನ್ನು ಯೆಹೋವನಿಗೆ ವಿಶೇಷ ಕೊಡುಗೆಯಾಗಿ ಕೊಟ್ಟನು. ಆರೋನನು ಅವರನ್ನು ಶುದ್ಧೀಕರಿಸುವುದಕ್ಕಾಗಿ ದೋಷಪರಿಹಾರ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಲೇವಿಯರು ತಮ್ಮನ್ನು ಶುದ್ಧಿಮಾಡಿಕೊಂಡು, ತಮ್ಮ ವಸ್ತ್ರಗಳನ್ನು ತೊಳೆದುಕೊಂಡರು. ಆರೋನನು ಅವರನ್ನು ಯೆಹೋವ ದೇವರ ಮುಂದೆ ನೈವೇದ್ಯದಂತೆ ಅರ್ಪಿಸಿದನು. ಅವರು ಶುದ್ಧರಾಗುವ ಹಾಗೆ ಆರೋನನು ಅವರಿಗೋಸ್ಕರ ಪ್ರಾಯಶ್ಚಿತ್ತ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 8:21
10 ತಿಳಿವುಗಳ ಹೋಲಿಕೆ  

ಅವರನ್ನು ಶುದ್ಧೀಕರಿಸಬೇಕಾದ ಕ್ರಮ ಹೇಗೆಂದರೆ: ನೀನು ಅವರ ಮೇಲೆ ದೋಷಪರಿಹಾರಕ ಜಲವನ್ನು ಚಿಮುಕಿಸಬೇಕು. ಅವರು ಸರ್ವಾಂಗ ಕ್ಷೌರಮಾಡಿಸಿಕೊಳ್ಳಲಿ. ಅವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ತಮ್ಮನ್ನು ಶುದ್ಧಪಡಿಸಿಕೊಳ್ಳಬೇಕು.


ಶುದ್ಧನಾದವನು ಮೂರನೆಯ ದಿನದಲ್ಲಿಯೂ, ಏಳನೆಯ ದಿನದಲ್ಲಿಯೂ ಅಶುದ್ಧನಾದವನ ಮೇಲೆ ಅದನ್ನು ಚಿಮಿಕಿಸಬೇಕು. ಅಶುದ್ಧನಾದವನು ಏಳನೆಯ ದಿನದಲ್ಲಿ ದೋಷಪರಿಹಾರ ಹೊಂದಿದವನಾಗಿ ತನ್ನ ಬಟ್ಟೆಗಳನ್ನು ಒಗೆದುಕೊಂಡು, ಸ್ನಾನಮಾಡಿ ಸಾಯಂಕಾಲದಲ್ಲಿ ಶುದ್ಧನಾಗುವನು.


“ಅದಾದ ನಂತರ ಲೇವಿಯರು ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಬೇಕು. ನೀನು ಅವರನ್ನು ಶುದ್ಧೀಕರಿಸಿ ನೈವೇದ್ಯದಂತೆ ಸಮರ್ಪಿಸಬೇಕು.


ಮೂರನೆಯ ದಿನದಲ್ಲಿ ಆ ಬೂದಿಯಿಂದ ದೋಷಪರಿಹಾರ ಮಾಡಿಕೊಂಡು ಏಳನೆಯ ದಿನದಲ್ಲಿ ಶುದ್ಧನಾಗುವನು. ಮೂರನೆಯ ದಿನದಲ್ಲಿ ಅವನು ದೋಷಪರಿಹಾರ ಮಾಡಿಕೊಳ್ಳದೆ ಹೋದರೆ ಏಳನೆಯ ದಿನದಲ್ಲಿಯೂ ಶುದ್ಧನಾಗುವುದಿಲ್ಲ.


“ನಾನು ಇಸ್ರಾಯೇಲರಲ್ಲಿ ಚೊಚ್ಚಲಾದ ಗಂಡಸರಿಗೆ ಬದಲಾಗಿ ಲೇವಿಯರನ್ನು ತೆಗೆದುಕೊಂಡಿದ್ದೇನೆ ಎಂದು ತಿಳಿದುಕೋ. ಆದುದರಿಂದ ಲೇವಿಯರು ನನ್ನ ಸೊತ್ತು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು ಜನರ ಬಳಿಗೆ ಹೋಗಿ, ಈ ದಿನ ಮತ್ತು ನಾಳೆ ಅವರನ್ನು ಶುದ್ಧಗೊಳಿಸು. ನನ್ನ ಬರುವಿಕೆಗಾಗಿ ಅವರನ್ನು ಸಿದ್ಧಗೊಳಿಸು. ಅವರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡು,


ಯೆಹೋವನು ಲೇವಿಯರ ವಿಷಯದಲ್ಲಿ ಆಜ್ಞಾಪಿಸಿದಂತೆಯೇ ಮೋಶೆ, ಆರೋನರೂ ಮತ್ತು ಇಸ್ರಾಯೇಲರ ಸಮೂಹದವರೆಲ್ಲರೂ ಮಾಡಿದರು.


ಆ ಮೇಲೆ ಲೇವಿಯರು ತಮಗೆ ನೇಮಕವಾದ ಕೆಲಸವನ್ನು ದೇವದರ್ಶನ ಗುಡಾರದಲ್ಲಿ ಆರೋನನ ಮತ್ತು ಅವನ ಮಕ್ಕಳ ಕೈಕೆಳಗೆ ಆರಂಭಿಸಿದರು. ಅವರ ವಿಷಯದಲ್ಲಿ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಮಾಡಿದರು.


ಶುದ್ಧಿ ಮಾಡುವ ಯಾಜಕನು ಶುದ್ಧಮಾಡಿಸಿಕೊಳ್ಳುವವನನ್ನು ಇವುಗಳೊಂದಿಗೆ ದೇವದರ್ಶನ ಗುಡಾರದ ಬಾಗಿಲಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಲ್ಲಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು