Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 8:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅಂಥವರು ತಮ್ಮ ಸ್ವಕುಲದವರ ಜೊತೆಯಲ್ಲಿ ದೇವದರ್ಶನ ಗುಡಾರವನ್ನು ಕಾಯುವ ಸೇವೆಯನ್ನು ಮಾಡಬಹುದೇ ಹೊರತು ಅವರಿಂದ ಬೇರೆ ಸೇವಾಕಾರ್ಯವನ್ನು ಮಾಡಿಸಬಾರದು. ಲೇವಿಯರು ಕಾಪಾಡಬೇಕಾದ ಕರ್ತವ್ಯಗಳನ್ನು ನೀನು ಹೀಗೆ ಅವರಿಗೆ ನೇಮಿಸಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅಂಥವರು ತಮ್ಮ ಸ್ವಕುಲದವರ ಜೊತೆ ದೇವದರ್ಶನದ ಗುಡಾರವನ್ನು ಕಾಯುವ ಸೇವೆ ಮಾಡಬಹುದು. ಅದೊಂದನ್ನು ಬಿಟ್ಟು ಅವರಿಂದ ಬೇರೆ ಪರಿಚರ್ಯೆಯನ್ನು ಮಾಡಿಸಕೂಡದು. ಲೇವಿಯರು ಮಾಡಬೇಕಾದ ಕರ್ತವ್ಯಗಳನ್ನು ನೀನು ಹೀಗೆ ವಿಧಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅಂಥವರು ತಮ್ಮ ಸ್ವಕುಲದವರ ಜೊತೆಯಲ್ಲಿ ದೇವದರ್ಶನದ ಗುಡಾರವನ್ನು ಕಾಯುವ ಸೇವೆ ಮಾಡಬಹುದೇ ಹೊರತು ಅವರಿಂದ ಬೇರೆ ಪರಿಚರ್ಯವನ್ನು ಮಾಡಿಸಕೂಡದು. ಲೇವಿಯರು ಕಾಪಾಡಬೇಕಾದವುಗಳ ವಿಷಯದಲ್ಲಿ ನೀನು ಹೀಗೆ ಅವರಿಗೆ ನೇವಿುಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಅವರು ಕಾವಲುಗಾರರಾಗಿ ದೇವದರ್ಶನಗುಡಾರದ ಬಳಿ ಇತರ ಲೇವಿಯರಿಗೆ ಸಹಾಯ ಮಾಡಬಹುದೇ ಹೊರತು ಭಾರವಾದ ಕೆಲಸವನ್ನು ಮಾಡಲೇಕೂಡದು. ನೀನು ಈ ರೀತಿಯಲ್ಲಿ ಲೇವಿಯರಿಗೆ ಕೆಲಸವನ್ನು ಹಂಚಿಕೊಡಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆದರೆ ಅವರು ದೇವದರ್ಶನದ ಗುಡಾರದಲ್ಲಿ ಅಪ್ಪಣೆಯನ್ನು ಕೈಗೊಂಡು ತಮ್ಮ ಸಹೋದರರೊಂದಿಗೆ ಕೆಲಸಮಾಡಲಿ, ಆದರೆ ಅವರು ಸೇವೆಯನ್ನು ತಾವಾಗಿ ಮಾಡಬಾರದು. ಈ ಪ್ರಕಾರ ನೀನು ಲೇವಿಯರಿಗೆ ಕರ್ತವ್ಯಗಳನ್ನು ಆಜ್ಞಾಪಿಸಬೇಕು,” ಎಂಬುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 8:26
10 ತಿಳಿವುಗಳ ಹೋಲಿಕೆ  

ಆದರೆ ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗಾದರೆ ಯೆಹೋವನ ಕೋಪವು ಇಸ್ರಾಯೇಲರ ಮೇಲೆ ಬರುವುದಕ್ಕೆ ಆಸ್ಪದವಿರುವುದಿಲ್ಲ. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು.”


ಈ ಕಾರ್ಯಗಳನ್ನು ಸಾಧಿಸುತ್ತಾ, ಅವುಗಳಲ್ಲಿ ಮಗ್ನನಾಗಿರು. ಇದರಿಂದ ನಿನ್ನ ಅಭಿವೃದ್ಧಿಯು ಎಲ್ಲರಿಗೂ ಪ್ರಸಿದ್ಧವಾಗುವುದು.


ಅವರು ನನ್ನ ಪವಿತ್ರಾಲಯದಲ್ಲಿ ಪರಿಚಾರಕರೂ, ಮಂದಿರ ದ್ವಾರಪಾಲಕರೂ ಆಗಿ ಮಂದಿರದಲ್ಲಿ ಸೇವೆಮಾಡಬೇಕು; ಜನರ ಪಕ್ಷವಾಗಿ ಸರ್ವಾಂಗಹೋಮ ಪಶುವನ್ನೂ, ಸಮಾಧಾನಯಜ್ಞ ಪಶುವನ್ನೂ ವಧಿಸಿ ಅವರಿಗೆ ಸೇವೆ ಮಾಡಲು ಸಿದ್ಧರಾಗಿರಬೇಕು.


ನೀವು ನನ್ನ ಪರಿಶುದ್ಧ ವಸ್ತುಗಳನ್ನು ಕಾಯಲಿಲ್ಲ. ಈ ಮ್ಲೇಚ್ಛರನ್ನು ನನ್ನ ಪವಿತ್ರಾಲಯದಲ್ಲಿ ನನ್ನ ವಸ್ತುಗಳನ್ನು ಕಾಯುವುದಕ್ಕಾಗಿ ನೇಮಿಸಿಕೊಂಡಿರಿ; ನಿಮ್ಮ ದುರಾಚಾರಗಳು ಇನ್ನು ಸಾಕು.’


ಹೀಗೆ ಅವರು ತಮ್ಮ ಸಹೋದರನಾದ ಆರೋನನ ಸಹಾಯಕರಾಗಿದ್ದು ದೇವದರ್ಶನದ ಗುಡಾರವನ್ನೂ, ಪರಿಶುದ್ಧವಾದ ಎಲ್ಲಾ ವಸ್ತುಗಳನ್ನು ನೋಡಿಕೊಳ್ಳುವುದೇ ಯೆಹೋವನ ಆಲಯದಲ್ಲಿ ಮಾಡತಕ್ಕ ಕರ್ತವ್ಯಗಳು.


ಉಳಿದ ಇಸ್ರಾಯೇಲರಿಗೆ ಬರುವ ಭಾಗದಿಂದ ಮನುಷ್ಯ, ದನ, ಕತ್ತೆ, ಆಡು, ಕುರಿ ಇವುಗಳಲ್ಲಿ ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಂಡು ಯೆಹೋವನ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಡಬೇಕು” ಎಂದು ಆಜ್ಞಾಪಿಸಿದನು.


ಅವರೇ ನಿನ್ನ ಜೊತೆಯಲ್ಲಿದ್ದು ದೇವದರ್ಶನದ ಗುಡಾರವನ್ನು ನೋಡಿಕೊಂಡು ಅದರ ಸಕಲ ಸೇವಾಕಾರ್ಯವನ್ನು ಮಾಡಬೇಕು. ಇತರ ಕುಲದವರು ನಿಮ್ಮ ಹತ್ತಿರಕ್ಕೆ ಬರಬಾರದು.


ಅದಲ್ಲದೆ ಮಹಾಯಾಜಕ ಆರೋನನ ಮಗನಾದ ಎಲ್ಲಾಜಾರನು ಲೇವಿಯರ ಪ್ರಧಾನಪುರುಷರ ಅಧ್ಯಕ್ಷನಾಗಿ ದೇವಸ್ಥಾನವನ್ನು ನೋಡಿಕೊಳ್ಳುವವರ ಮೇಲ್ವಿಚಾರಕನಾಗಿರಬೇಕು.


ಅವರು ಐವತ್ತು ವರ್ಷದವರಾದ ನಂತರ ಆ ಮಂಡಳಿಯನ್ನು ಬಿಟ್ಟು ದೇವಾಲಯದ ಸೇವಾಕಾರ್ಯದಿಂದ ಬಿಡುಗಡೆಯಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು