ಅರಣ್ಯಕಾಂಡ 9:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಇಸ್ರಾಯೇಲರು ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿದ ದಿನದಲ್ಲಿ ಮೇಘವು ದೇವದರ್ಶನದ ಗುಡಾರವನ್ನು ಆವರಿಸಿಕೊಂಡಿತು. ಅದು ಸಂಜೆಯಿಂದ ಮುಂಜಾನೆಯವರೆಗೆ ಬೆಂಕಿಯಂತೆ ಕಾಣಿಸುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಇಸ್ರಯೇಲರು ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿದಾಗ ಮೇಘವೊಂದು ಅದರ ಮೇಲೆ ಆವರಿಸಿಕೊಂಡಿತು. ಸಂಜೆಯಿಂದ ಮುಂಜಾನೆಯವರೆಗೂ ಅದು ಬೆಂಕಿಯಂತೆ ಕಾಣಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಇಸ್ರಾಯೇಲ್ಯರು ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿದ ದಿನದಲ್ಲಿ ಮೇಘವು ಅದರ ಮೇಲೆ ಮುಚ್ಚಿಕೊಂಡಿತು. ಅದು ಸಂಜೆಯಿಂದ ಮುಂಜಾನೆಯವರೆಗೆ ಬೆಂಕಿಯಂತೆ ಕಾಣಿಸುತ್ತಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಇಸ್ರೇಲರು ಒಡಂಬಡಿಕೆಯ ಗುಡಾರವಾದ ಪವಿತ್ರ ಗುಡಾರವನ್ನು ಎತ್ತಿ ನಿಲ್ಲಿಸಿದ ದಿನದಲ್ಲಿ ಮೇಘವು ಅದರ ಮೇಲೆ ಮುಚ್ಚಿಕೊಂಡಿತು ಮತ್ತು ಅದು ರಾತ್ರಿಯಲ್ಲಿ ಬೆಂಕಿಯಂತೆ ಕಾಣಿಸುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿದ ದಿವಸದಲ್ಲಿ ಮೇಘವು ಸಾಕ್ಷಿ ಗುಡಾರವನ್ನು ಮುಚ್ಚಿತು. ಸಂಜೆಯಿಂದ ಮುಂಜಾನೆಯವರೆಗೆ ಅದು ಬೆಂಕಿಯಂತೆ ಗುಡಾರದ ಮೇಲೆ ಇತ್ತು. ಅಧ್ಯಾಯವನ್ನು ನೋಡಿ |