ಅರಣ್ಯಕಾಂಡ 9:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಕೆಲವು ಸಮಯಗಳಲ್ಲಿ ಮೇಘವು ಸಾಯಂಕಾಲದಿಂದ ಬೆಳಗ್ಗಿನವರೆಗೆ ಇರುತ್ತಿತ್ತು. ಬೆಳಗ್ಗೆ ಅದು ಮೇಲಕ್ಕೆ ಏಳುವಾಗ ಜನರು ಪ್ರಯಾಣಮಾಡುತ್ತಿದ್ದರು. ಕೆಲವು ಸಮಯಗಳಲ್ಲಿ ಅದು ಹಗಲಿರುಳು ನಿಂತಿರುತ್ತಿತ್ತು. ಅದು ಯಾವಾಗ ಮೇಲೇಳುತ್ತಿತ್ತೋ ಆಗ ಜನರು ಹೊರಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಕೆಲವೊಮ್ಮೆ ಆ ಮೇಘ ಸಾಯಂಕಾಲದಿಂದ ಹೊತ್ತಾರೆಯವರೆಗೆ ಇರುತ್ತಿತ್ತು. ಬೆಳಿಗ್ಗೆ ಅದು ಮೇಲಕ್ಕೆ ಎದ್ದಾಗ ಜನರು ಪ್ರಯಾಣ ಮಾಡುತ್ತಿದ್ದರು. ಕೆಲವು ಸಲ ಅದು ಹಗಲಿರುಳೂ ನಿಂತಿರುತ್ತಿತ್ತು. ಅದು ಯಾವಾಗ ಮೇಲೇಳುತ್ತಿತ್ತೋ ಆಗ ಜನರು ಹೊರಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಕೆಲವು ಸಮಯಗಳಲ್ಲಿ ಮೇಘವು ಸಾಯಂಕಾಲದಿಂದ ಹೊತ್ತಾರೆಯವರೆಗೆ ಇರುವದು; ಬೆಳಿಗ್ಗೆ ಅದು ಮೇಲಕ್ಕೆ ಎದ್ದಾಗ ಜನರು ಪ್ರಯಾಣಮಾಡುವರು. ಕೆಲವು ಸಮಯಗಳಲ್ಲಿ ಅದು ಹಗಲಿರುಳು ನಿಂತಿರುವದು; ಅದು ಯಾವಾಗ ಏಳುವದೋ ಆಗ ಜನರು ಹೊರಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಕೆಲವು ಸಮಯಗಳಲ್ಲಿ ಮೇಘವು ಸಾಯಂಕಾಲದಿಂದ ಹೊತ್ತಾರೆಯವರೆಗೂ ಇರುತ್ತಿತ್ತು; ಬೆಳಿಗ್ಗೆ ಅದು ಮೇಲಕ್ಕೆ ಎದ್ದಾಗ ಜನರು ಪ್ರಯಾಣ ಮಾಡುತ್ತಿದ್ದರು. ಮೋಡವು ಚಲಿಸಿದಾಗ ಅದು ಹಗಲಾಗಿರಲಿ ರಾತ್ರಿಯಾಗಿರಲಿ ಜನರು ಅದನ್ನು ಹಿಂಬಾಲಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಮೇಘವು ಸಂಜೆಯಿಂದ ಮುಂಜಾನೆಯವರೆಗೆ ಇದ್ದು, ಬೆಳಿಗ್ಗೆ ಮೇಲಕ್ಕೆ ಎದ್ದಾಗ, ಅವರು ಪ್ರಯಾಣ ಮಾಡುತ್ತಿದ್ದರು, ಹಗಲುರಾತ್ರಿ ಇದ್ದು ಮೇಘವು ಮೇಲಕ್ಕೇರಿದಾಗ ಅವರು ಪ್ರಯಾಣ ಮಾಡುತ್ತಿದ್ದರು. ಅಧ್ಯಾಯವನ್ನು ನೋಡಿ |