Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 9:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯೆಹೋವನ ಆಜ್ಞೆಯ ಪ್ರಕಾರ ಅವರು ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು. ಯೆಹೋವನ ಆಜ್ಞೆಯ ಪ್ರಕಾರವೇ ಅವರು ಡೇರೆಗಳನ್ನು ತೆಗೆದುಕೊಂಡು ಹೊರಡುತ್ತಿದ್ದರು. ಯೆಹೋವನು ಮೋಶೆಯ ಮೂಲಕವಾಗಿ ಆಜ್ಞಾಪಿಸಿದಂತೆಯೇ ಅವರು ಯೆಹೋವನ ಸೂಚನೆಗಳನ್ನು ಅನುಸರಿಸಿ ನಡೆಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಸರ್ವೇಶ್ವರನ ಆಜ್ಞೆಯ ಪ್ರಕಾರ ಅವರು ತಮ್ಮ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು. ಸರ್ವೇಶ್ವರನ ಆಜ್ಞೆಯ ಪ್ರಕಾರವೇ ಡೇರೆಗಳನ್ನು ಕಿತ್ತು ಹೊರಡುತ್ತಿದ್ದರು. ಮೋಶೆಯ ಮುಖಾಂತರ ಸರ್ವೇಶ್ವರ ಆಜ್ಞಾಪಿಸಿದಂತೆಯೇ ಅವನು ಸರ್ವೇಶ್ವರನ ಸೂಚನೆಗಳನ್ನು ಅನುಸರಿಸಿ ನಡೆಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಯೆಹೋವನ ಆಜ್ಞೆಯ ಪ್ರಕಾರ ಅವರು ತಮ್ಮ ಡೇರೆಗಳನ್ನು ಹಾಕಿಕೊಳ್ಳುವರು, ಯೆಹೋವನ ಆಜ್ಞೆಯ ಪ್ರಕಾರ ಡೇರೆಗಳನ್ನು ಕಿತ್ತು ಹೊರಡುವರು. ಯೆಹೋವನು ಮೋಶೆಯ ಮೂಲಕವಾಗಿ ಆಜ್ಞಾಪಿಸಿದಂತೆಯೇ ಅವರು ಯೆಹೋವನ ಸೂಚನೆಗಳನ್ನು ಅನುಸರಿಸಿ ನಡೆಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಹೀಗೆ ಯೆಹೋವನ ಸೂಚನೆಯಂತೆ ಜನರು ಪಾಳೆಯ ಮಾಡಿಕೊಳ್ಳುವರು; ಪ್ರಯಾಣ ಮುಂದುವರಿಸುವರು. ಮೋಶೆಯ ಮೂಲಕವಾಗಿ ಆಜ್ಞಾಪಿಸಿದಂತೆ ಜನರು ಯೆಹೋವನ ಸೂಚನೆಗಳನ್ನು ಲಕ್ಷ್ಯವಿಟ್ಟು ಅನುಸರಿಸಿ ನಡೆಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಯೆಹೋವ ದೇವರ ಆಜ್ಞೆಯ ಪ್ರಕಾರ ಅವರು ಇಳಿದುಕೊಳ್ಳುತ್ತಾ, ಯೆಹೋವ ದೇವರ ಆಜ್ಞೆಯ ಪ್ರಕಾರ ಪ್ರಯಾಣ ಮಾಡುತ್ತಾ ಇದ್ದರು. ಮೋಶೆಗೆ ಯೆಹೋವ ದೇವರು ಆಜ್ಞಾಪಿಸಿದಂತೆ ಯೆಹೋವ ದೇವರ ಅಪ್ಪಣೆಯನ್ನು ಕೈಗೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 9:23
11 ತಿಳಿವುಗಳ ಹೋಲಿಕೆ  

ಈ ಕಾಲದಲ್ಲೆಲ್ಲಾ ನೀವು ನಿಮ್ಮ ಸಹೋದರರಿಂದ ಬೇರ್ಪಡದೆ ನಿಮ್ಮ ದೇವರಾದ ಯೆಹೋವನ ಆಜ್ಞೆಗಳನ್ನು ಪಾಲಿಸುತ್ತಾ ಬಂದಿದ್ದೀರಿ.


ಆ ಮೇಘವು ಬಹುದಿನದವರೆಗೂ ದೇವದರ್ಶನದ ಗುಡಾರದ ಮೇಲೆ ಇರುವಾಗ ಇಸ್ರಾಯೇಲರು ಯೆಹೋವನ ಸೂಚನೆಯನ್ನು ಅನುಸರಿಸಿ ಪ್ರಯಾಣ ಮಾಡದೆ ಇರುತ್ತಿದ್ದರು.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನೀನು ನನ್ನ ಮಾರ್ಗಗಳಲ್ಲಿ ನಡೆದು, ನಾನು ನಿನಗೆ ವಹಿಸಿದ ಪಾರುಪತ್ಯವನ್ನು ನೆರವೇರಿಸಿದರೆ ನನ್ನ ಆಲಯದ ಮುಖ್ಯಾಧಿಕಾರಿಯಾಗಿ ನನ್ನ ಪ್ರಾಕಾರಗಳನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ನೀಡುವೆ; ನನ್ನ ಸನ್ನಿಧಾನದೂತರ ನಡುವೆ ಪ್ರವೇಶಿಸುವ ಹಕ್ಕನ್ನು ನಿನಗೆ ಕೊಡುವೆನು.


ನೀವು ನನ್ನ ಪರಿಶುದ್ಧ ವಸ್ತುಗಳನ್ನು ಕಾಯಲಿಲ್ಲ. ಈ ಮ್ಲೇಚ್ಛರನ್ನು ನನ್ನ ಪವಿತ್ರಾಲಯದಲ್ಲಿ ನನ್ನ ವಸ್ತುಗಳನ್ನು ಕಾಯುವುದಕ್ಕಾಗಿ ನೇಮಿಸಿಕೊಂಡಿರಿ; ನಿಮ್ಮ ದುರಾಚಾರಗಳು ಇನ್ನು ಸಾಕು.’


ಏಕೆಂದರೆ ಅಬ್ರಹಾಮನು ನನ್ನ ಮಾತಿಗೆ ವಿಧೇಯನಾಗಿ ನನ್ನ ವಿಧಿಗಳನ್ನು, ನನ್ನ ಆಜ್ಞೆಗಳನ್ನು, ನನ್ನ ನೇಮಗಳನ್ನು, ನನ್ನ ಕಟ್ಟಳೆಗಳನ್ನು, ಕೈಗೊಂಡು ನಡೆದನು” ಎಂದನು.


ಯೆಹೋವನು ಮೋಶೆಯ ಸಂಗಡ ಮಾತನಾಡಿ, ಆಜ್ಞಾಪಿಸಿದ್ದೇನೆಂದರೆ,


ನಿನ್ನ ಚಿತ್ತವನ್ನು ತಿಳಿಯಪಡಿಸಿ, ನನ್ನನ್ನು ನಡೆಸಿ ತರುವಾಯ ಮಹಿಮೆಗೆ ಸೇರಿಸಿಕೊಳ್ಳುವಿ.


ಜನವಿರುವ ಊರನ್ನು ಸೇರುವಂತೆ, ಅವರನ್ನು ಸರಿಯಾದ ದಾರಿಯಲ್ಲಿ ನಡೆಸಿದನು.


ತಗ್ಗಿಗೆ ಇಳಿಯುವ ದನಗಳೋಪಾದಿಯಲ್ಲಿ ಯೆಹೋವನ ಆತ್ಮವು ಅವರನ್ನು ವಿಶ್ರಾಂತಿಯ ಸ್ಥಾನಕ್ಕೆ ಕರೆತಂದಿತು; ನಿನ್ನ ನಾಮವನ್ನು ಘನಪಡಿಸಿಕೊಳ್ಳುವುದಕ್ಕಾಗಿ ನಿನ್ನ ಜನರನ್ನು ಹೀಗೆ ನಡೆಸಿದಿ.


ತರುವಾಯ ಇಸ್ರಾಯೇಲರ ಸಮೂಹವೆಲ್ಲಾ ಯೆಹೋವನ ಅಪ್ಪಣೆಯ ಮೇರೆಗೆ “ಸೀನ್” ಎಂಬ ಮರುಭೂಮಿಯಿಂದ ಹೊರಟು ಮುಂದೆ ಪ್ರಯಾಣ ಮಾಡಿ ರೆಫೀದೀಮಿನಲ್ಲಿ ಇಳಿದುಕೊಂಡರು. ಅಲ್ಲಿಯೂ ಜನರಿಗೆ ಕುಡಿಯುವುದಕ್ಕೆ ನೀರು ಇರಲಿಲ್ಲ.


ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದ ರೀತಿಯಲ್ಲಿ ಅವರು ಪ್ರಯಾಣಮಾಡಿದ್ದು ಇದೇ ಮೊದಲನೆಯ ಸಾರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು