Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 1:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ತರುವಾಯ ದೇವರು, “ಭೂಮಿಯು ಹುಲ್ಲನ್ನು, ಸಸ್ಯಗಳನ್ನೂ, ಬೀಜಬಿಡುವ ಕಾಯಿಪಲ್ಯದ ಗಿಡಗಳನ್ನೂ ಬೆಳೆಯಿಸಲಿ ಮತ್ತು ಬೀಜವುಳ್ಳ ಹಣ್ಣಿನ ಮರಗಳನ್ನು ಅವುಗಳ ಜಾತಿಗನುಸಾರವಾಗಿ ಫಲಿಸಲಿ” ಎಂದು ಹೇಳಿದನು, ಹಾಗೆಯೇ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ತರುವಾಯ ದೇವರು, “ಭೂಮಿಯಲ್ಲಿ ಸಸ್ಯಗಳನ್ನೂ - ಎಲ್ಲ ತರದ ದವಸಧಾನ್ಯ, ಹಣ್ಣು ಹಂಪಲು ಇವುಗಳನ್ನು ಬಿಡುವ ಗಿಡಮರಬಳ್ಳಿಗಳನ್ನೂ ಬೆಳೆಯಿಸಲಿ,” ಎಂದರು. ಅದು ಹಾಗೆಯೇ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ತರುವಾಯ ದೇವರು - ಭೂವಿುಯು ಹುಲ್ಲನ್ನೂ ಬೀಜಬಿಡುವ ಕಾಯಿಪಲ್ಯದ ಗಿಡಗಳನ್ನೂ ಬೆಳೆಸಲಿ; ಮತ್ತು ಬೀಜವುಳ್ಳ ಹಣ್ಣಿನ ಮರಗಳನ್ನೂ ಅವುಗಳ ಜಾತಿಗನುಸಾರವಾಗಿ ಹುಟ್ಟಿಸಲಿ ಎಂದು ಹೇಳಿದನು; ಹಾಗೆಯೇ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಬಳಿಕ ದೇವರು, “ಭೂಮಿಯು ಸಸ್ಯರಾಶಿಯನ್ನು ಬೆಳೆಸಲಿ; ಬೀಜಗಳನ್ನು ಫಲಿಸುವ ಸಸ್ಯಗಳು ಬೆಳೆಯಲಿ; ತನ್ನತನ್ನ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣುಗಳನ್ನು ಫಲಿಸುವ ಹಣ್ಣಿನ ಮರಗಳು ಭೂಮಿಯ ಮೇಲೆ ಬೆಳೆಯಲಿ” ಅಂದನು. ಹಾಗೆಯೇ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅನಂತರ ದೇವರು, “ಭೂಮಿಯು ಹುಲ್ಲನ್ನೂ ಬೀಜಬಿಡುವ ಗಿಡಗಳನ್ನೂ ಅದರದರ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣಿನ ಮರಗಳನ್ನೂ ಉತ್ಪತ್ತಿ ಮಾಡಲಿ,” ಎಂದು ಹೇಳಿದರು. ಅದು ಹಾಗೆಯೇ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 1:11
20 ತಿಳಿವುಗಳ ಹೋಲಿಕೆ  

ಭೂಮಿಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು, ಅದು ಯಾರ ನಿಮಿತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ, ಅವರಿಗೆ ಅನುಕೂಲವಾದ ಬೆಳೆಯನ್ನು ಕೊಡುತ್ತದೆ, ಅದು ದೇವರ ಆಶೀರ್ವಾದವನ್ನು ಹೊಂದುತ್ತದೆ.


ಆತನು ಆಕಾಶದಲ್ಲಿ ಮೋಡಗಳನ್ನು ಕವಿಸುತ್ತಾನೆ, ಭೂಮಿಗೋಸ್ಕರ ಮಳೆಯನ್ನು ಸಿದ್ಧಮಾಡುತ್ತಾನೆ, ಬೆಟ್ಟಗಳಲ್ಲಿ ಹುಲ್ಲನ್ನು ಬೆಳೆಸುತ್ತಾನೆ.


ಅಲ್ಲದೆ ದೇವರು, “ಇಗೋ, ಸಮಸ್ತ ಭೂಮಿಯ ಮೇಲಿರುವ ಬೀಜವುಳ್ಳ ಎಲ್ಲಾ ಪೈರುಗಳನ್ನೂ, ಬೀಜವುಳ್ಳ ಎಲ್ಲಾ ಹಣ್ಣಿನ ಮರಗಳನ್ನೂ ನಿಮಗೆ ಆಹಾರಕ್ಕಾಗಿ ಕೊಟ್ಟಿದ್ದೇನೆ


ಆನಂತರ ಯೆಹೋವನಾದ ದೇವರು ನೋಡುವುದಕ್ಕೆ ರಮ್ಯವಾಗಿಯೂ, ತಿನ್ನುವುದಕ್ಕೆ ಉತ್ತಮವಾಗಿಯೂ ಇರುವ ಎಲ್ಲಾ ತರಹದ ಮರಗಳನ್ನು ಆ ಭೂಮಿಯಲ್ಲಿ ಬೆಳೆಯುವಂತೆ ಮಾಡಿದನು. ಅದಲ್ಲದೆ ಆ ವನದ ಮಧ್ಯದಲ್ಲಿ ಜೀವದಾಯಕ ವೃಕ್ಷವನ್ನೂ ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ವೃಕ್ಷವನ್ನು ಬೆಳೆಯಿಸಿದನು.


ಭೂಮಿಯು ಮೊದಲು ಮೊಳಕೆಯನ್ನೂ, ಆ ಮೇಲೆ ತೆನೆಯನ್ನೂ, ತರುವಾಯ ತೆನೆಯಲ್ಲಿ ತುಂಬಾ ಕಾಳನ್ನೂ ತನ್ನಷ್ಟಕ್ಕೆ ತಾನೇ ಹುಟ್ಟಿಸುತ್ತದೆ.


ಎಲೈ ಅಲ್ಪ ವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೇ ದೇವರು ಹೀಗೆ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನಲ್ಲವೇ!


ಭೂಮಿಯು ಅನ್ನವನ್ನು ಕೊಡುವುದು, ಅದರ ಕೆಳಭಾಗವು ಬೆಂಕಿ ಬಿದ್ದಂತೆ ಹಾಳಾಗಿರುವುದು.


ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗೆ ಅವನಿರುವನು. ಅಂಥ ಮರವು ಸೂಕ್ತಕಾಲದಲ್ಲಿ ಫಲಕೊಡುತ್ತದಲ್ಲಾ. ಅದರ ಎಲೆ ಬಾಡುವುದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವುದು.


ಯೆಹೋವನಾದ ದೇವರು ಭೂಮ್ಯಾಕಾಶಗಳನ್ನು ಉಂಟುಮಾಡಿದಾಗ ಯಾವ ವಿಧವಾದ ಗಿಡವೂ ಭೂಮಿಯಲ್ಲಿ ಇರಲಿಲ್ಲ. ಯಾವ ಸಸ್ಯವೂ ಮೊಳೆತಿರಲಿಲ್ಲ. ಏಕೆಂದರೆ ಯೆಹೋವನಾದ ದೇವರು ಭೂಮಿಯ ಮೇಲೆ ಮಳೆಯನ್ನು ಸುರಿಸಿರಲಿಲ್ಲ. ಭೂಮಿಯನ್ನು ವ್ಯವಸಾಯ ಮಾಡುವುದಕ್ಕೆ ಮನುಷ್ಯನೂ ಇರಲಿಲ್ಲ.


ನನ್ನ ಸಹೋದರರೇ, ಅಂಜೂರದ ಮರವು ಎಣ್ಣೆ ಮರದ ಕಾಯಿ ಬಿಡುವುದೋ? ದ್ರಾಕ್ಷಿ ಬಳ್ಳಿಯಲ್ಲಿ ಅಂಜೂರದ ಹಣ್ಣು ಬಿಡುವುದೋ? ಹಾಗೆಯೇ ಉಪ್ಪುನೀರಿನ ಬುಗ್ಗೆಯಿಂದ ಸಿಹಿ ನೀರು ಬರುವುದಿಲ್ಲ.


ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿದೆ; ಆದ್ದರಿಂದ ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು.


ನೀರಾವರಿಯಲ್ಲಿ ನೆಡಲ್ಪಟ್ಟು ಹೊಳೆಯ ದಡದಲ್ಲಿ ತನ್ನ ಬೇರುಗಳನ್ನು ಹರಡಿ, ಧಗೆಗೆ ಭಯಪಡದೆ, ಹಸುರೆಲೆಯನ್ನು ಚಿಗುರಿಸುತ್ತಾ, ಕ್ಷಾಮದ ವರ್ಷದಲ್ಲಿಯೂ ನಿಶ್ಚಿಂತೆಯಾಗಿ ಸದಾ ಫಲಕೊಡುತ್ತಾ ಇರುವ ಮರಕ್ಕೆ ಅವರು ಸಮಾನವಾಗಿರುವರು.”


ಇದಲ್ಲದೆ ಯೆಹೋವನಾದ ದೇವರು ಆ ಮನುಷ್ಯನಿಗೆ, “ನೀನು ತೋಟದಲ್ಲಿರುವ ಎಲ್ಲಾ ಮರಗಳ ಹಣ್ಣುಗಳನ್ನು ಯಥೇಚ್ಛವಾಗಿ ತಿನ್ನಬಹುದು.


ಆದರೆ ದೇವರು ತನ್ನ ಇಷ್ಟದಂತೆ ಅದಕ್ಕೆ ದೇಹವನ್ನು ಕೊಡುತ್ತಾನೆ. ಒಂದೊಂದು ಬೀಜಕ್ಕೂ ಅದಕ್ಕೆ ತಕ್ಕ ದೇಹವನ್ನು ಕೊಡುತ್ತಾನೆ.


ಭೂಮಿಯಲ್ಲಿ ಸಸ್ಯಗಳು ಬೆಳೆದವು. ತಮ್ಮ ತಮ್ಮ ಜಾತಿಯ ಪ್ರಕಾರ ಬೀಜಬಿಡುವ ಕಾಯಿಪಲ್ಯದ ಗಿಡಗಳು ಉಂಟಾದವು. ತಮ್ಮ ತಮ್ಮ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣಿನ ಮರಗಳು ಉತ್ಪತ್ತಿಯಾದವು. ದೇವರು ಅದನ್ನು ಒಳ್ಳೆಯದೆಂದು ಕಂಡನು


ಭೂಮಿಯು ತನ್ನೊಳಗಿಂದ ಮೊಳಕೆಯನ್ನು ಹೊರಡಿಸುವಂತೆ, ತೋಟವು ತನ್ನಲ್ಲಿ ಬಿತ್ತಿದ್ದನ್ನು ಮೊಳೆಯಿಸುವ ಹಾಗೆ, ಕರ್ತನಾದ ಯೆಹೋವನು ಎಲ್ಲಾ ಜನಾಂಗಗಳ ಎದುರಿನಲ್ಲಿ ಧರ್ಮವನ್ನೂ ಮತ್ತು ಸ್ತೋತ್ರವನ್ನೂ ಮೊಳೆತು ಅಭಿವೃದ್ಧಿ ಹೊಂದುವಂತೆ ಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು