Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 1:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಭೂಮಿಯಲ್ಲಿ ಸಸ್ಯಗಳು ಬೆಳೆದವು. ತಮ್ಮ ತಮ್ಮ ಜಾತಿಯ ಪ್ರಕಾರ ಬೀಜಬಿಡುವ ಕಾಯಿಪಲ್ಯದ ಗಿಡಗಳು ಉಂಟಾದವು. ತಮ್ಮ ತಮ್ಮ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣಿನ ಮರಗಳು ಉತ್ಪತ್ತಿಯಾದವು. ದೇವರು ಅದನ್ನು ಒಳ್ಳೆಯದೆಂದು ಕಂಡನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಭೂಮಿಯಲ್ಲಿ ಸಸ್ಯಗಳು ಬೆಳೆದವು; ಎಲ್ಲ ತರದ ದವಸಧಾನ್ಯಗಳನ್ನೂ ಹಣ್ಣುಹಂಪಲುಗಳನ್ನೂ ಬಿಡುವ ಗಿಡಮರಬಳ್ಳಿಗಳು ಕಾಣಿಸಿಕೊಂಡವು. ದೇವರ ಕಣ್ಣಿಗೆ ಅವು ಚೆನ್ನಾಗಿ ಕಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಭೂವಿುಯಲ್ಲಿ ಹುಲ್ಲು ಬೆಳೆಯಿತು; ತಮ್ಮತಮ್ಮ ಜಾತಿಯ ಪ್ರಕಾರ ಬೀಜಬಿಡುವ ಕಾಯಿಪಲ್ಯದ ಗಿಡಗಳು ಉಂಟಾದವು; ತಮ್ಮತಮ್ಮ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣಿನ ಮರಗಳು ಕಾಣಿಸಿದವು. ದೇವರು ಅದನ್ನು ಒಳ್ಳೇದೆಂದು ನೋಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಸಸಿಗಳು ಭೂಮಿಯ ಮೇಲೆ ಬೆಳೆದವು. ಅವುಗಳಲ್ಲಿ ಬೀಜ ಫಲಿಸುವ ಗಿಡಗಳೂ ಬೀಜವುಳ್ಳ ಹಣ್ಣುಗಳನ್ನು ಫಲಿಸುವ ಮರಗಳೂ ಇದ್ದವು. ಪ್ರತಿಯೊಂದು ಸಸಿಯು ತನ್ನದೇ ಆದ ರೀತಿಯ ಬೀಜವನ್ನು ಫಲಿಸಿತು. ದೇವರಿಗೆ ಇವು ಒಳ್ಳೆಯದಾಗಿ ಕಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಭೂಮಿಯ ಮೇಲೆ ತಮ್ಮ ತಮ್ಮ ಜಾತಿಯ ಪ್ರಕಾರ ಬೀಜಬಿಡುವ ಕಾಯಿಪಲ್ಯದ ಗಿಡಗಳು ಉಂಟಾದವು ಮತ್ತು ಅದರದರ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣಿನ ಮರಗಳನ್ನು ಮೊಳೆಯಿಸಿದವು. ದೇವರು ಅದನ್ನು ಒಳ್ಳೆಯದೆಂದು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 1:12
11 ತಿಳಿವುಗಳ ಹೋಲಿಕೆ  

ಭೂಮಿಯು ಮೊದಲು ಮೊಳಕೆಯನ್ನೂ, ಆ ಮೇಲೆ ತೆನೆಯನ್ನೂ, ತರುವಾಯ ತೆನೆಯಲ್ಲಿ ತುಂಬಾ ಕಾಳನ್ನೂ ತನ್ನಷ್ಟಕ್ಕೆ ತಾನೇ ಹುಟ್ಟಿಸುತ್ತದೆ.


ಪ್ರತಿಯೊಂದು ಮರದ ಗುಣವು ಅದರ ಫಲದಿಂದಲೇ ಗೊತ್ತಾಗುವುದು. ಮುಳ್ಳುಗಿಡಗಳಲ್ಲಿ ಅಂಜೂರದ ಹಣ್ಣುಗಳನ್ನು ಕೀಳುವುದಿಲ್ಲ, ಕಳ್ಳಿ ಗಿಡದಲ್ಲಿ ದ್ರಾಕ್ಷಿಹಣ್ಣುಗಳನ್ನು ಕೊಯ್ಯುಲು ಸಾಧ್ಯವಿಲ್ಲ.


ಮೋಸಹೋಗಬೇಡಿರಿ. ದೇವರನ್ನು ಅಪಹಾಸ್ಯ ಮಾಡಲಾಗುವುದಿಲ್ಲ. ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು.


ಬಿತ್ತುವವನಿಗೆ ಬೀಜವನ್ನೂ, ತಿನ್ನುವವನಿಗೆ ಆಹಾರವನ್ನು ಕೊಡುವಾತನು ನಿಮಗೂ ಬಿತ್ತುವುದಕ್ಕೆ ಬೀಜವನ್ನು ಕೊಟ್ಟು ಅದನ್ನು ಹೆಚ್ಚಿಸಿ ನಿಮ್ಮ ಧರ್ಮಕಾರ್ಯಗಳಿಂದಾಗುವ ಫಲಗಳನ್ನು ವೃದ್ಧಿಪಡಿಸುವನು.


ಭೂಮಿಯು ತನ್ನೊಳಗಿಂದ ಮೊಳಕೆಯನ್ನು ಹೊರಡಿಸುವಂತೆ, ತೋಟವು ತನ್ನಲ್ಲಿ ಬಿತ್ತಿದ್ದನ್ನು ಮೊಳೆಯಿಸುವ ಹಾಗೆ, ಕರ್ತನಾದ ಯೆಹೋವನು ಎಲ್ಲಾ ಜನಾಂಗಗಳ ಎದುರಿನಲ್ಲಿ ಧರ್ಮವನ್ನೂ ಮತ್ತು ಸ್ತೋತ್ರವನ್ನೂ ಮೊಳೆತು ಅಭಿವೃದ್ಧಿ ಹೊಂದುವಂತೆ ಮಾಡುವನು.


ಭೂಮಿಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು, ಅದು ಯಾರ ನಿಮಿತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ, ಅವರಿಗೆ ಅನುಕೂಲವಾದ ಬೆಳೆಯನ್ನು ಕೊಡುತ್ತದೆ, ಅದು ದೇವರ ಆಶೀರ್ವಾದವನ್ನು ಹೊಂದುತ್ತದೆ.


ತರುವಾಯ ದೇವರು, “ಭೂಮಿಯು ಹುಲ್ಲನ್ನು, ಸಸ್ಯಗಳನ್ನೂ, ಬೀಜಬಿಡುವ ಕಾಯಿಪಲ್ಯದ ಗಿಡಗಳನ್ನೂ ಬೆಳೆಯಿಸಲಿ ಮತ್ತು ಬೀಜವುಳ್ಳ ಹಣ್ಣಿನ ಮರಗಳನ್ನು ಅವುಗಳ ಜಾತಿಗನುಸಾರವಾಗಿ ಫಲಿಸಲಿ” ಎಂದು ಹೇಳಿದನು, ಹಾಗೆಯೇ ಆಯಿತು.


ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಮೂರನೆಯ ದಿನವಾಯಿತು.


ಪಶುಗಳಿಗೋಸ್ಕರ ಹುಲ್ಲನ್ನು ಮೊಳಿಸುತ್ತೀ; ಮನುಷ್ಯರಿಗೋಸ್ಕರ ಪೈರುಗಳನ್ನು ಹುಟ್ಟಿಸುತ್ತೀ. ಅವರು ಭೂವ್ಯವಸಾಯಮಾಡಿ ಆಹಾರವನ್ನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು