Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 1:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಬಳಿಕ ದೇವರು, “ಭೂಮಿಯಿಂದ ಜೀವಜಂತುಗಳು ಉಂಟಾಗಲಿ; ಪಶು, ಕ್ರಿಮಿಗಳೂ ಕಾಡುಮೃಗಗಳು, ತಮ್ಮ ತಮ್ಮ ಜಾತಿಗನುಸಾರವಾಗಿ ಹುಟ್ಟಲಿ” ಅಂದನು. ಹಾಗೆಯೇ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಆ ಬಳಿಕ ದೇವರು, “ಭೂಮಿಯಿಂದ ಎಲ್ಲ ತರದ ಜೀವಜಂತುಗಳು ಸೃಷ್ಟಿಯಾಗಲಿ. ದೊಡ್ಡ - ಚಿಕ್ಕ ಸಾಕುಪ್ರಾಣಿಗಳೂ ಕಾಡುಮೃಗಗಳೂ ಹುಟ್ಟಲಿ,“ ಎಂದರು. ಅಂತೆಯೇ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಮತ್ತು ದೇವರು - ಭೂವಿುಯಿಂದ ಜೀವಜಂತುಗಳು ಉಂಟಾಗಲಿ; ಪಶುಕ್ರಿವಿುಗಳೂ ಕಾಡುಮೃಗಗಳೂ ತಮ್ಮ ತಮ್ಮ ಜಾತಿಗನುಸಾರವಾಗಿ ಹುಟ್ಟಲಿ ಅಂದನು; ಹಾಗೆಯೇ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಬಳಿಕ ದೇವರು, “ಭೂಮಿಯು ಅನೇಕ ಬಗೆಯ ಪ್ರಾಣಿಗಳನ್ನು ಅವುಗಳ ಜಾತಿಗನುಸಾರವಾಗಿ ಹುಟ್ಟಿಸಲಿ. ಪ್ರತಿಯೊಂದು ಬಗೆಯ ದೊಡ್ಡ ಪ್ರಾಣಿಗಳು ಮತ್ತು ಹರಿದಾಡುವ ಚಿಕ್ಕ ಪ್ರಾಣಿಗಳು ಹುಟ್ಟಿಕೊಂಡು ಅಭಿವೃದ್ಧಿಯಾಗಲಿ” ಅಂದನು. ಹಾಗೆಯೇ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆಮೇಲೆ ದೇವರು, “ಭೂಮಿಯಿಂದ ಎಲ್ಲಾ ತರಹದ ಜೀವಿಗಳು ಉಂಟಾಗಲಿ: ಪಶುಗಳು, ನೆಲದ ಮೇಲೆ ಹರಿದಾಡುವ ಜೀವಿಗಳು, ಕಾಡುಮೃಗಗಳು, ತಮ್ಮ ತಮ್ಮ ಜಾತಿಗನುಸಾರವಾಗಿ ಉಂಟಾಗಲಿ,” ಎಂದರು. ಅದು ಹಾಗೆಯೇ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 1:24
15 ತಿಳಿವುಗಳ ಹೋಲಿಕೆ  

ನಿನ್ನಂತೆ ನನ್ನ ಸೃಷ್ಟಿಯಾಗಿರುವ ನೀರಾನೆಯನ್ನು ನೋಡು; ಎತ್ತಿನ ಹಾಗೆ ಹುಲ್ಲನ್ನು ಮೇಯುವುದು.


ಪಶು, ಪಕ್ಷಿ, ಕಾಡುಮೃಗ, ಕ್ರಿಮಿ, ಕೀಟ ಇವುಗಳ ಸಕಲ ಜಾತಿಗಳಲ್ಲಿಯೂ ಎರಡೆರಡು ಬದುಕುವುದಕ್ಕಾಗಿ ನಿನ್ನ ಬಳಿಗೆ ಬರುವವು.


ಎಲ್ಲಾ ಮೃಗಗಳು, ಪಶು ಪಕ್ಷಿಗಳು, ಕ್ರಿಮಿಕೀಟಗಳ ಸಹಿತವಾಗಿ ತಮ್ಮತಮ್ಮ ಜಾತಿಗನುಸಾರವಾಗಿ ನಾವೆಯಿಂದ ಹೊರಗೆ ಬಂದವು.


ಎಲ್ಲಾ ಮೃಗ, ಪಶು, ಪಕ್ಷಿ, ಕ್ರಿಮಿಕೀಟಗಳು,


ಕಾಡುಕತ್ತೆಯನ್ನು ಸ್ವತಂತ್ರವಾಗಿರುವಂತೆ ಯಾರು ಕಳುಹಿಸಿಬಿಟ್ಟರು? ಅದರ ಕಟ್ಟನ್ನು ಬಿಚ್ಚಿದವರು ಯಾರು?


ಎಲ್ಲಾ ಪ್ರಾಣಿಗಳಲ್ಲಿ ಅಂದರೆ ಸಕಲ ಜಾತಿಯ ಮೃಗ, ಪಶು, ಕ್ರಿಮಿಕೀಟಗಳಲ್ಲಿಯೂ ಪಕ್ಷಿ ಮೊದಲಾದ ರೆಕ್ಕೆಯಿರುವ ಎಲ್ಲಾ ಜೀವಿಗಳಲ್ಲಿಯೂ


ಮನುಷ್ಯನು ತನ್ನ ಕೆಲಸಕ್ಕೆ ಹೊರಟು ಹೋಗುತ್ತಾನೆ; ಸಾಯಂಕಾಲದವರೆಗೆ ದುಡಿಯುತ್ತಾನೆ.


ಕಾಡಕುರಿಗಳಿಗೆ ಉನ್ನತವಾದ ಪರ್ವತಗಳೂ, ಬೆಟ್ಟದ ಮೊಲಗಳಿಗೆ ಬಂಡೆಗಳೂ ಆಶ್ರಯಸ್ಥಾನಗಳಾಗಿವೆ.


ನೀನು ಕುದುರೆಗೆ ಶಕ್ತಿಯನ್ನು ಕೊಟ್ಟು, ಅದರ ಕೊರಳಿಗೆ ಗುಡುಗನ್ನು ಕಟ್ಟಿದವನು ನಿನಲ್ಲವೇ?


ಕಾಡುಕೋಣವು ನಿನ್ನನ್ನು ಸೇವಿಸಲು ಒಪ್ಪಿ, ನಿನ್ನ ಗೋದಲಿಯ ಹತ್ತಿರ ತಂಗುವುದೋ?


ಬೆಟ್ಟದ ಮೇಕೆಗಳು ಈಯುವ ಸಮಯವನ್ನು ತಿಳಿದುಕೊಂಡಿದ್ದೀಯೋ? ಹರಿಣಗಳ ಹೆರಿಗೆಯನ್ನು ನೋಡಿಕೊಳ್ಳುವೆಯಾ?


ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಐದನೆಯ ದಿನವಾಯಿತು.


ಯೆಹೋವನು ಎಲ್ಲಾ ಭೂಜಂತುಗಳನ್ನೂ ಆಕಾಶದ ಪಕ್ಷಿಗಳನ್ನೂ, ನೆಲದ ಮಣ್ಣಿನಿಂದ ಸೃಷ್ಟಿಸಿ ಇವುಗಳಿಗೆ ಮನುಷ್ಯನು ಏನೇನು ಹೆಸರಿಡುವನೋ ನೋಡೋಣ ಎಂದು ಅವನ ಬಳಿಗೆ ಬರಮಾಡಿದನು. ಮನುಷ್ಯನು ಒಂದೊಂದು ಪ್ರಾಣಿಗೆ ಯಾವ ಯಾವ ಹೆಸರಿಟ್ಟನೋ ಅದೇ ಅವುಗಳ ಹೆಸರಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು