Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 1:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆಮೇಲೆ ದೇವರು, ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟು ಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ, ಪ್ರಾಣಿಗಳ ಮೇಲೆಯೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಕೀಟಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ದೊರೆತನಮಾಡಲಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅದಾದನಂತರ ದೇವರು, “ನಮ್ಮಂತೆಯೇ ಇರುವ ಹಾಗು ನಮ್ಮನ್ನು ಹೋಲುವ, ಮನುಷ್ಯರನ್ನು ಉಂಟುಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ ದೊಡ್ಡ - ಚಿಕ್ಕ ಸಾಕುಪ್ರಾಣಿ ಹಾಗು ಕಾಡುಮೃಗಗಳ ಮೇಲೆಯೂ ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳ ಮೇಲೆಯೂ ದೊರೆತನ ಮಾಡಲಿ,” ಎಂದರು. ಹೀಗೆ ದೇವರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆಮೇಲೆ ದೇವರು - ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟುಮಾಡೋಣ; ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿವಿುಕೀಟಗಳ ಮೇಲೆಯೂ ಎಲ್ಲಾ ಭೂವಿುಯ ಮೇಲೆಯೂ ದೊರೆತನಮಾಡಲಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಬಳಿಕ ದೇವರು, “ಈಗ ನಾವು ಮನುಷ್ಯನನ್ನು ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ನಿರ್ಮಿಸೋಣ. ಅವರು ಸಮುದ್ರದಲ್ಲಿರುವ ಎಲ್ಲಾ ಮೀನುಗಳ ಮೇಲೆ, ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳ ಮೇಲೆ ಮತ್ತು ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳ ಮೇಲೆ ದೊರೆತನ ಮಾಡಲಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ತರುವಾಯ ದೇವರು, “ನಾವು ನಮ್ಮ ಸ್ವರೂಪದಲ್ಲಿ, ನಮ್ಮ ಹೋಲಿಕೆಯಲ್ಲಿ ಮನುಷ್ಯನನ್ನು ಉಂಟುಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ಕಾಡುಮೃಗಗಳ ಮೇಲೆಯೂ ನೆಲದ ಮೇಲೆ ಹರಿದಾಡುವ ಎಲ್ಲಾ ಜೀವಿಗಳ ಮೇಲೆಯೂ ಆಳ್ವಿಕೆ ಮಾಡಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 1:26
34 ತಿಳಿವುಗಳ ಹೋಲಿಕೆ  

ಈ ನೂತನ ಸ್ವಭಾವವು ಸೃಷ್ಟಿಸಿದಾತನ ಹೋಲಿಕೆಯ ಜ್ಞಾನದ ಮೇರೆಗೆ ಅದು ನೂತನವಾಗುತ್ತಾ ಬರುತ್ತದೆ.


ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ಸತ್ಯಕ್ಕನುಗುಣವಾಗಿ ನೀತಿಯುಳ್ಳದ್ದಾಗಿಯೂ, ಪರಿಶುದ್ಧತೆಯುಳ್ಳದ್ದಾಗಿಯೂ ನಿರ್ಮಿಸಲ್ಪಟ್ಟಿದೆ.


ಯೆಹೋವ ದೇವರು “ಈ ಮನುಷ್ಯನು ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನರಿತು ನಮ್ಮಲ್ಲಿ ಒಬ್ಬನಂತಾದನಲ್ಲಾ? ಇದರಿಂದ ಇವನು ಕೈಚಾಚಿ ಜೀವವೃಕ್ಷದ ಫಲವನ್ನು ಸಹ ತಿಂದು ಶಾಶ್ವತವಾಗಿ ಬದುಕುವವನಾಗಬಾರದು” ಎಂದು ಆಜ್ಞಾಪಿಸಿದನು.


ಆದಾಮನ ವಂಶದವರ ದಾಖಲೆ: ದೇವರು ಸೃಷ್ಟಿಕಾಲದಲ್ಲಿ ಮನುಷ್ಯನನ್ನು ತನ್ನ ಹೋಲಿಕೆಗನುಸಾರವಾಗಿ ಸೃಷ್ಟಿ ಮಾಡಿದನು.


ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಉಂಟುಮಾಡಿದವನು ಆತನೇ; ನಾವು ಆತನವರು, ಆತನ ಪ್ರಜೆಯೂ, ಆತನು ಪಾಲಿಸುವ ಹಿಂಡೂ ಆಗಿದ್ದೇವೆ.


ನಾವೆಲ್ಲರೂ ಮುಸುಕು ತೆಗೆದಿರುವ ಮುಖದಿಂದ ಕರ್ತನ ಪ್ರಭಾವವನ್ನು ದರ್ಪಣದಲ್ಲಿ ಕಾಣಿಸುತ್ತದೋ ಎಂಬಂತೆ ದೃಷ್ಟಿಸುವವರಾಗಿದ್ದು ನಾವೆಲ್ಲರೂ ಕರ್ತನ ದಾನವಾಗಿರುವ ಆತ್ಮದ ಮಹಿಮೆಯಿಂದ ಅಧಿಕ ಮಹಿಮೆಗೆ ಹೋಗುತ್ತಾ, ಆ ಮಹಿಮೆಯ ಸಾರೂಪ್ಯವುಳ್ಳವರೇ ಆಗುತ್ತೇವೆ. ಇದು ಆತ್ಮನಾಗಿರುವ ಕರ್ತನ ಕಾರ್ಯವೇ ಸರಿ.


ಈಗಲಾದರೋ ಯೆಹೋವನೇ, ನೀನು ನಮ್ಮ ತಂದೆಯಾಗಿದ್ದಿ; ನೀನು ಕುಂಬಾರನು, ನಾವು ಜೇಡಿಮಣ್ಣು, ನಾವೆಲ್ಲರೂ ನಿನ್ನ ಕೈಕೆಲಸವೇ.


ಕ್ರಿಸ್ತನು ಅದೃಶ್ಯನಾದ ದೇವರ ಪ್ರತಿರೂಪನೂ, ಸೃಷ್ಟಿಗೆಲ್ಲಾ ಜೇಷ್ಠಪುತ್ರನೂ ಆಗಿದ್ದಾನೆ.


ಅದೇ ನಾಲಿಗೆಯಿಂದ ನಮ್ಮ ಕರ್ತನಾದ ತಂದೆಯನ್ನು ಕೊಂಡಾಡುತ್ತೇವೆ, ಅದುದರಿಂದಲೇ ದೇವರ ಹೋಲಿಕೆಗೆ ಸಮಾನವಾಗಿ ಸೃಷ್ಟಿಸಲ್ಪಟ್ಟ ಮನುಷ್ಯರನ್ನು ನಾವು ಶಪಿಸುತ್ತೇವೆ.


ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ತೇಜಸ್ಸನ್ನು ತೋರಿಸುವ ಸುವಾರ್ತೆಯ ಬೆಳಕನ್ನು ನೋಡಬಾರದೆಂದು ಈ ಲೋಕದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಕುರುಡು ಮಾಡಿದ್ದಾನೆ.


ಪುರುಷನು ದೇವರ ಪ್ರತಿರೂಪವೂ ಮತ್ತು ಪ್ರಭಾವವೂ ಆಗಿರುವುದರಿಂದ ತಲೆಯನ್ನು ಮುಚ್ಚಿಕೊಳ್ಳಬಾರದು. ಸ್ತ್ರೀಯಾದರೋ ಪುರುಷನ ಪ್ರಭಾವವಾಗಿದ್ದಾಳೆ.


ದೇವರು ಮನುಷ್ಯರನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದ್ದರಿಂದ ಯಾರು ಮನುಷ್ಯನ ರಕ್ತವನ್ನು ಸುರಿಸುತ್ತಾನೋ ಅವನ ರಕ್ತವನ್ನು ಮನುಷ್ಯನೇ ಸುರಿಸುವನು.


ದೇವರು ಮನುಷ್ಯರನ್ನು ಸತ್ಯವಂತನನ್ನಾಗಿ ಸೃಷ್ಟಿಸಿದನು. ಅವರಾದರೋ ಬಹು ಯುಕ್ತಿಗಳನ್ನು ಕಲ್ಪಿಸಿಕೊಂಡಿದ್ದಾರೆ. ಇದನ್ನು ಮಾತ್ರ ನಾನು ಕಂಡುಕೊಂಡಿದ್ದೇನೆ.


ದೇವರು ಒಬ್ಬ ಮನುಷ್ಯನಿಂದ ಎಲ್ಲಾ ಜನಾಂಗಗಳನ್ನು ಸೃಷ್ಟಿಸಿ, ಅವರವರು ಇರತಕ್ಕ ಕಾಲಗಳನ್ನೂ ಹಾಗು ಅವರವರ ನಿವಾಸಗಳ ಮೇರೆಗಳನ್ನೂ ನಿಷ್ಕರ್ಷಿಸಿ ಭೂಮಂಡಲದಲ್ಲೆಲ್ಲಾ ಅವರನ್ನು ಇರಿಸಿ,


ಯೇಸು ಅವನಿಗೆ, “ಯಾವನಾದರೂ ನನ್ನನ್ನು ಪ್ರೀತಿಸುವುದಾದರೆ ನನ್ನ ಮಾತಿನಂತೆ ನಡೆಯುವನು. ಅವನನ್ನು ನನ್ನ ತಂದೆಯು ಪ್ರೀತಿಸುವನು ಮತ್ತು ನಾವಿಬ್ಬರೂ ಅವನ ಬಳಿಗೆ ಬಂದು, ಅವನೊಂದಿಗೆ ನೆಲೆಸುವೆವು.


ಇದಲ್ಲದೆ ಸಾಕ್ಷಿ ಕೊಡುವವರು ಮೂವರಿದ್ದಾರೆ.


ಸಕಲ ಜಾತಿಯ ಮೃಗ, ಪಕ್ಷಿ, ಹರಿದಾಡುವ ಜಂತು, ಜಲಚರಗಳನ್ನೂ ಮನುಷ್ಯರು ಹತೋಟಿಗೆ ತರುವುದುಂಟು ಮತ್ತು ತಂದದ್ದುಂಟು.


ಆಗ, “ಯಾರನ್ನು ಕಳುಹಿಸಲಿ? ಯಾರು ನಮಗೋಸ್ಕರ ಹೋಗುವನು?” ಎಂಬ ಕರ್ತನ ನುಡಿಯನ್ನು ಕೇಳಿ, “ಇಗೋ, ನಾನಿದ್ದೇನೆ, ನನ್ನನ್ನು ಕಳುಹಿಸು” ಎಂದೆನು.


ಇಸ್ರಾಯೇಲರು ತಮ್ಮ ಸೃಷ್ಟಿಕರ್ತನಲ್ಲಿ ಹೆಮ್ಮೆಪಡಲಿ; ಚೀಯೋನಿನವರು ತಮ್ಮ ರಾಜನಲ್ಲಿ ಹರ್ಷಿಸಲಿ.


ಇವರಲ್ಲಿ ಒಬ್ಬರ ಮಾತು ಒಬ್ಬರಿಗೆ ತಿಳಿಯದಂತೆ ಇವರ ಭಾಷೆಯನ್ನು ಗಲಿಬಿಲಿ ಮಾಡೋಣ ಬನ್ನಿ” ಎಂದನು.


ಈಗ ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನ ಕೈವಶಮಾಡಿದ್ದೇನೆ; ಅವನ ಸೇವೆಗಾಗಿ ಭೂಜಂತುಗಳನ್ನೂ ಕೊಟ್ಟಿದ್ದೇನೆ.


‘ನನ್ನ ಸೃಷ್ಟಿ ಕರ್ತನಾದ ದೇವರು ಎಲ್ಲಿ? ಆತನು ರಾತ್ರಿಯಲ್ಲಿಯೂ ಕೀರ್ತನೆಗಳನ್ನು ಹಾಡುತ್ತಾನಲ್ಲಾ ಎಂದು ಯಾರೂ ಹೇಳುವುದಿಲ್ಲ.


ಅದಕ್ಕೆ ಯೇಸು ಅವರಿಗೆ, “ನನ್ನ ತಂದೆಯು ಇಂದಿನವರೆಗೂ ಕೆಲಸ ಮಾಡುತ್ತಿದ್ದಾನೆ, ನಾನೂ ಕೆಲಸ ಮಾಡುತ್ತೇನೆ” ಎಂದು ಹೇಳಿದನು.


ಅಪೂರ್ವವಾದ ಸಂಗತಿಗಳನ್ನು ನಮಗೆ ತಿಳಿಸುತ್ತಿದ್ದೀಯಲ್ಲಾ; ಆದಕಾರಣ ಅದೇನು ಎಂಬುದರ ಕುರಿತು ತಿಳಿಯಬೇಕೆಂದು ನಮಗೆ ಅಪೇಕ್ಷೆಯಿದೆ” ಅಂದರು.


ಹೊಲದ ಕಲ್ಲುಗಳೊಂದಿಗೂ ಒಪ್ಪಂದ ಮಾಡಿಕೊಂಡಿರುವಿ; ಕಾಡುಮೃಗಗಳೂ ನಿನ್ನ ಸಂಗಡ ಸಮಾಧಾನವಾಗಿರುವವು.


ಯೆಹೋವನು ಎಲ್ಲಾ ಭೂಜಂತುಗಳನ್ನೂ ಆಕಾಶದ ಪಕ್ಷಿಗಳನ್ನೂ, ನೆಲದ ಮಣ್ಣಿನಿಂದ ಸೃಷ್ಟಿಸಿ ಇವುಗಳಿಗೆ ಮನುಷ್ಯನು ಏನೇನು ಹೆಸರಿಡುವನೋ ನೋಡೋಣ ಎಂದು ಅವನ ಬಳಿಗೆ ಬರಮಾಡಿದನು. ಮನುಷ್ಯನು ಒಂದೊಂದು ಪ್ರಾಣಿಗೆ ಯಾವ ಯಾವ ಹೆಸರಿಟ್ಟನೋ ಅದೇ ಅವುಗಳ ಹೆಸರಾಯಿತು.


ಆಕಾಶಮಂಡಲವನ್ನು ಸೃಷ್ಟಿಸಿದ ಯೆಹೋವನ ಮಾತನ್ನು ಕೇಳಿರಿ, ಆತನೇ ದೇವರು. ಭೂಲೋಕವನ್ನು ನಿರ್ಮಿಸಿ ರೂಪಿಸಿ ಸ್ಥಾಪಿಸಿದನು. ಅದನ್ನು ಶೂನ್ಯಸ್ಥಾನವಾಗಿರಲೆಂದು ಸೃಷ್ಟಿಸದೆ ಜನನಿವಾಸಕ್ಕಾಗಿಯೇ ರೂಪಿಸಿದನು. ಈತನು ಹೀಗೆನ್ನುತ್ತಾನೆ, “ನಾನೇ ಯೆಹೋವನು, ಇನ್ನು ಯಾರೂ ಇಲ್ಲ.


ಬಲ ಹೆಚ್ಚಾಗಿರುವುದರಿಂದ ಅದರಲ್ಲಿ ನಂಬಿಕೆಯಿಟ್ಟು, ನಿನ್ನ ಕೆಲಸವನ್ನು ಅದಕ್ಕೆ ಒಪ್ಪಿಸಿಬಿಡುವೆಯೋ?


ನಾನು ನಿನಗಾಗಿ ಬಂಗಾರದ ಅಂಚಿನಿಂದ ಕೂಡಿರುವ, ಬೆಳ್ಳಿಯ ಕುಚ್ಚಗಳನ್ನು ಮಾಡಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು