Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 1:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಹೀಗೆ ದೇವರು; “ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದನು. ದೇವರ ಸ್ವರೂಪದಲ್ಲಿ ಅವನನ್ನು ಉಂಟುಮಾಡಿದನು. ಅವರನ್ನು ಗಂಡುಹೆಣ್ಣಾಗಿ ಸೃಷ್ಟಿ ಮಾಡಿದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಸೃಷ್ಟಿಸಿದರು ನರರನ್ನು ತಮ್ಮ ಹೋಲಿಕೆಯಲ್ಲಿ ಸೃಷ್ಟಿಸಿದರವರನ್ನು ದೇವಾನುರೂಪದಲ್ಲಿ ಸೃಷ್ಟಿಸಿದರವರನ್ನು ಸ್ತ್ರೀಪುರುಷರನ್ನಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಹೀಗೆ ದೇವರು ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದನು; ದೇವಸ್ವರೂಪದಲ್ಲಿ ಅವನನ್ನು ಉಂಟುಮಾಡಿದನು; ಅವರನ್ನು ಗಂಡುಹೆಣ್ಣಾಗಿ ನಿರ್ಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಹೀಗೆ ದೇವರು ಮನುಷ್ಯನನ್ನು ತನ್ನ ಸ್ವರೂಪದಲ್ಲಿ ತನ್ನ ಹೋಲಿಕೆಗೆ ಸರಿಯಾಗಿ ಸೃಷ್ಟಿಸಿದನು. ಆತನು ಅವರನ್ನು ಗಂಡು ಮತ್ತು ಹೆಣ್ಣುಗಳಾಗಿ ರೂಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಹೀಗೆ ದೇವರು ಮನುಷ್ಯನನ್ನು ತಮ್ಮ ಸ್ವರೂಪದಲ್ಲಿ ಸೃಷ್ಟಿ ಮಾಡಿದರು. ದೇವರ ಸ್ವರೂಪದಲ್ಲಿಯೇ ಅವರನ್ನು ಸೃಷ್ಟಿ ಮಾಡಿದರು. ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 1:27
20 ತಿಳಿವುಗಳ ಹೋಲಿಕೆ  

ಆತನು ಪ್ರತ್ಯುತ್ತರವಾಗಿ, “ಮನುಷ್ಯರನ್ನು ಉಂಟುಮಾಡಿದವನು ಆದಿಯಿಂದಲೇ ಅವರನ್ನು ಗಂಡು ಮತ್ತು ಹೆಣ್ಣಾಗಿ ಉಂಟುಮಾಡಿದನು,


ನಾವಾದರೋ ದೇವರ ಕಲಾಕೃತಿಯಾಗಿದ್ದೇವೆ, ದೇವರು ಮೊದಲೇ ನಮಗಾಗಿ ಸಂಕಲ್ಪಿಸಿದ್ದ ಸತ್ಕಾರ್ಯಗಳನ್ನು ಮಾಡುವವರಾಗಿ ಬದುಕಬೇಕೆಂದು ಯೇಸು ಕ್ರಿಸ್ತನಲ್ಲಿ ಸೃಷ್ಟಿಸಲ್ಪಟ್ಟಿದ್ದೇವೆ.


ದೇವರಾದರೋ ಸೃಷ್ಟಿಯ ಮೊದಲಿನಿಂದಲೇ ಮನುಷ್ಯರನ್ನು ಗಂಡುಹೆಣ್ಣಾಗಿ ಉಂಟುಮಾಡಿದನು.


ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ಸತ್ಯಕ್ಕನುಗುಣವಾಗಿ ನೀತಿಯುಳ್ಳದ್ದಾಗಿಯೂ, ಪರಿಶುದ್ಧತೆಯುಳ್ಳದ್ದಾಗಿಯೂ ನಿರ್ಮಿಸಲ್ಪಟ್ಟಿದೆ.


ನೀನು ನನ್ನನ್ನು ಅದ್ಭುತವಾಗಿಯೂ, ವಿಚಿತ್ರವಾಗಿಯೂ ರಚಿಸಿದ್ದರಿಂದ, ನಿನ್ನನ್ನು ಕೊಂಡಾಡುತ್ತೇನೆ. ನಿನ್ನ ಕೃತ್ಯಗಳು ಆಶ್ಚರ್ಯವಾಗಿವೆಯೆಂದು, ನನ್ನ ಹೃದಯವು ಚೆನ್ನಾಗಿ ಗ್ರಹಿಸಿಕೊಂಡಿದೆ.


ನನ್ನ ಮಹಿಮೆಗಾಗಿ ನಾನು ಸೃಷ್ಟಿಸಿ ರೂಪಿಸಿ ಉಂಟುಮಾಡಿದ ನನ್ನ ಹೆಸರಿನವರೆಲ್ಲರನ್ನೂ ಬರಮಾಡಬೇಕೆಂದು ಅಪ್ಪಣೆಕೊಡುವೆನು.


ಕ್ರಿಸ್ತನು ಅದೃಶ್ಯನಾದ ದೇವರ ಪ್ರತಿರೂಪನೂ, ಸೃಷ್ಟಿಗೆಲ್ಲಾ ಜೇಷ್ಠಪುತ್ರನೂ ಆಗಿದ್ದಾನೆ.


ದೇವರು ನಿನ್ನ ಮತ್ತು ನಿನ್ನ ಪತ್ನಿಯ ತನುಮನಗಳನ್ನು ಒಂದು ಮಾಡಿ ಒಡಂಬಡಿಸಲಿಲ್ಲವೇ? ದೇವರ ಉದ್ದೇಶವೇನು? ದೇವರ ಮಕ್ಕಳಾಗಿ ಬಾಳುವ ಸಂತಾನ ದಯಪಾಲಿಸುವ ಉದ್ದೇಶ ಆತನದಾಗಿತ್ತು. ಆದುದರಿಂದ ಮದುವೆಯಾದ ಪತ್ನಿಗೆ ದ್ರೋಹಮಾಡದೆ ಪ್ರತಿಯೊಬ್ಬನೂ ಎಚ್ಚರಿಕೆಯಿಂದಿರಲಿ.”


ಅನಂತರ ಯೆಹೋವನಾದ ದೇವರು, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ. ಅವನಿಗೆ ಸರಿಯಾದ ಸಹಕಾರಿಯನ್ನು ಉಂಟುಮಾಡುವೆನು” ಅಂದನು.


ಈ ರಹಸ್ಯವಾದ ಸತ್ಯವಾಕ್ಯವು ಹಿಂದಿನ ಯುಗಯುಗಗಳಿಂದಲೂ, ತಲತಲಾಂತರಗಳಿಂದಲೂ ಮರೆಯಾಗಿತ್ತು, ಆದರೆ ಈಗ ದೇವರು ಅದನ್ನು ತನ್ನ ದೇವಜನರಿಗೆ ಪ್ರಕಟಿಸಿದ್ದಾನೆ.


ಈ ನೂತನ ಸ್ವಭಾವವು ಸೃಷ್ಟಿಸಿದಾತನ ಹೋಲಿಕೆಯ ಜ್ಞಾನದ ಮೇರೆಗೆ ಅದು ನೂತನವಾಗುತ್ತಾ ಬರುತ್ತದೆ.


ದೇವರು ಮನುಷ್ಯರನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದ್ದರಿಂದ ಯಾರು ಮನುಷ್ಯನ ರಕ್ತವನ್ನು ಸುರಿಸುತ್ತಾನೋ ಅವನ ರಕ್ತವನ್ನು ಮನುಷ್ಯನೇ ಸುರಿಸುವನು.


ದೇವರು, ಮನುಷ್ಯರನ್ನು ಸೃಷ್ಟಿಸಿ ಭೂಮಿಯ ಮೇಲೆ ಇರಿಸಿದ ದಿನ ಮೊದಲುಗೊಂಡು ಇಂದಿನವರೆಗೂ ಒಂದು ದಿಕ್ಕಿನಿಂದ ಮತ್ತೊಂದು ದಿಕ್ಕಿನವರೆಗೂ ಇಂತಹ ಅದ್ಭುತ ಕಾರ್ಯವು ನಡೆದದ್ದುಂಟೋ, ಇಲ್ಲವೆ ಇಂತಹ ಸುದ್ದಿ ಕೇಳಿದ್ದುಂಟೋ ಎಂದು ವಿಚಾರಿಸಿಕೊಳ್ಳಿರಿ.


ದೇವರು ಮನುಷ್ಯರನ್ನು ಸತ್ಯವಂತನನ್ನಾಗಿ ಸೃಷ್ಟಿಸಿದನು. ಅವರಾದರೋ ಬಹು ಯುಕ್ತಿಗಳನ್ನು ಕಲ್ಪಿಸಿಕೊಂಡಿದ್ದಾರೆ. ಇದನ್ನು ಮಾತ್ರ ನಾನು ಕಂಡುಕೊಂಡಿದ್ದೇನೆ.


ಹೀಗಿರಲು ಯೆಹೋವನಾದ ದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ಸೃಷ್ಟಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು. ಆಗ ಮನುಷ್ಯನು ಬದುಕುವ ಪ್ರಾಣಿಯಾದನು.


ಅವರ ತಂದೆಗಳೂ, ಅಣ್ಣತಮ್ಮಂದಿರೂ ನಮ್ಮ ಹತ್ತಿರ ದೂರು ತಂದರೆ ನಾವು ಅವರಿಗೆ, ‘ನಮ್ಮನ್ನು ನೋಡಿ ಅವರಿಗೆ ಕೃಪೆತೋರಿಸಿರಿ; ಯುದ್ಧದಿಂದ ಪ್ರತಿಯೊಬ್ಬನಿಗೆ ಹೆಣ್ಣನ್ನು ದೊರಕಿಸುವುದು ನಮ್ಮಿಂದಾಗಲಿಲ್ಲವಲ್ಲಾ; ಮತ್ತು ನಿಮ್ಮ ಹೆಣ್ಣುಮಕ್ಕಳನ್ನು ನೀವೇ ಕೊಡಲಿಲ್ಲವಾದ್ದರಿಂದ ನೀವು ನಿರಪರಾಧಿಗಳು’ ಎಂದು ಹೇಳಿ ಸಮಾಧಾನಪಡಿಸುವೆವು” ಅಂದರು.


ಸಂಸಾರಿಗಳಾಗಿ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆಯಿರಿ. ನಿಮ್ಮ ಗಂಡುಮಕ್ಕಳಿಗೆ ಹೆಣ್ಣುಮಕ್ಕಳನ್ನು ತೆಗೆದುಕೊಳ್ಳಿರಿ, ನಿಮ್ಮ ಹೆಣ್ಣುಮಕ್ಕಳಿಗೆ ಗಂಡುಮಕ್ಕಳನ್ನು ಕೊಡಿರಿ; ಅವರೂ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆಯಲಿ; ನೀವು ಇರುವಲ್ಲಿಯೇ ವೃದ್ಧಿಯಾಗಿರಿ, ಕೊರತೆ ಅನುಭವಿಸದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು